News Kannada
Monday, September 26 2022

ಕರ್ನಾಟಕ

ಗುಂಡ್ಲುಪೇಟೆಯಲ್ಲಿ ಹಂದಿ-ದನಗಳ ಉಪಟಳ - 1 min read

Photo Credit :

ಗುಂಡ್ಲುಪೇಟೆಯಲ್ಲಿ ಹಂದಿ-ದನಗಳ ಉಪಟಳ

ಚಾಮರಾಜನಗರ: ಗುಂಡ್ಲುಪೇಟೆ ಪಟ್ಟಣದ ಜನತೆ ಸದಾ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಲೇ ಇರುತ್ತಾರೆ. ಈಗಾಗಲೇ ಮೂಲಭೂತ ಸೌಲಭ್ಯಗಳೇ ಸಮರ್ಪಕವಾಗಿ ಸಿಕ್ಕಿಲ್ಲ. ಇದರ ನಡುವೆ ಬೀದಿಗೆ ಕಾಲಿಟ್ಟರೆ ಬೀಡಾಡಿ ದನ ಮತ್ತು ಹಂದಿಗಳ ಹಾವಳಿಯೂ ಹೆಚ್ಚಾಗಿದ್ದು ಹಿಡಿ ಶಾಪ ಹಾಕಿಕೊಂಡು ಜೀವನ ಮಾಡುವಂತಾಗಿದೆ.

ಗುಂಡ್ಲುಪೇಟೆ ಪಟ್ಟಣದ ಪುರಸಭೆ ಇತ್ತೀಚಿಗೆ ಸ್ವಚ್ಛತೆ ಬಗ್ಗೆ ಪ್ರವಚನಗಳನ್ನು ಹೇಳುವುದರ ಜೊತೆಗೆ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಆದರೆ ಪಟ್ಟಣದಲ್ಲಿ ಹಂದಿಗಳ ಕಾಟ ಮಾಮೂಲಾಗಿಬಿಟ್ಟಿದೆ. ಈ ಕುರಿತು ಹಂದಿಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಪುರಸಭೆ ನಿರ್ಲಕ್ಷವಹಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ..

ಪಟ್ಟಣದ ಹೆಚ್ಚಿನ ಬಡಾವಣೆಗಳಲ್ಲಿ ಹಂದಿಗಳು ಅಲ್ಲಲ್ಲಿ ವಾಸಸ್ಥಾನ ಮಾಡಿಕೊಂಡಿರುವುದರಿಂದ ಅವುಗಳು ಇರುವ ಸ್ಥಳದ ಸುತ್ತ ಸ್ವಚ್ಛತೆ ಕೊರತೆ ಎದ್ದು ಕಾಣುತ್ತಿದ್ದು, ಜನರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ, ಬಡಾವಣೆಗಳಲ್ಲಿ ಇರುವ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು ಪುರಸಭೆಯು ಅವುಗಳನ್ನು ಸ್ವಚ್ಛಗೊಳಿಸಲು ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಹಂದಿಗಳು ಬಿದ್ದು ಹೊರಳಾಡಿ ಸುತ್ತಲಿನ ಪರಿಸರವನ್ನೇ ಮಲಿನಗೊಳಿಸುತ್ತಿವೆ. ಇದರಿಂದ ಪಾದಚಾರಿಗಳಿಗೆ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗಿದೆ ಇಷ್ಟಾzರೂ ಸೂಕ್ತ ಕ್ರಮ ಕೈಗೊಳ್ಳದ ಪುರಸಭಾ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ವಚ್ಛ ಭಾರತ್ ಅಭಿಯಾನ ಎಂದು ಹೇಳಿಕೊಂಡು ಪರಿಸರವನ್ನು ಶುಚಿಯಾಗಿರಿಸಿ ಎಂದು ಭಾಷಣ ಬಿಗಿಯುವ ಜನಪ್ರತಿನಿದಿಗಳಿಗೆ ಇಂತಹ ಜ್ವಲಂತ ಸಮಸ್ಯೆ ಕಾಣಿಸುತ್ತಿಲ್ಲ ಏಕೆ ಎಂಬುದು ಜನರ ಪ್ರಶ್ನೆಯಾಗಿದೆ.

ಇನ್ನು ಪಟ್ಟಣದ ಜಂಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಹಾಗೂ ಚರಂಡಿಗಳ ಸ್ವಚ್ಛತೆಯೂ ನಡೆಯಬೇಕಿದೆ. ಇದರ ಜತೆಗೆ ಪಟ್ಟಣದಲ್ಲಿ ಬೀಡಾಡಿ ದನಗಳು ಎಲ್ಲೆಂದರಲ್ಲಿ ಕಾಣಸಿಗುತ್ತಿದ್ದು ಅವುಗಳಿಂದಲೂ ವಾಹನ ಸಂಚಾರಕ್ಕೆ ಹಿಂಸೆಯಾಗುತ್ತಿದೆ. ಪುರಸಭೆ ಇತ್ತ ಗಮನಹರಿಸಿ ಕ್ರಮ ಕೈಗೊಳ್ಳಬೇಕಿದೆ.

See also  ಕಾರವಾರ: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು