News Kannada
Tuesday, October 04 2022

ಕರ್ನಾಟಕ

ಟವರ್ ನಿರ್ಮಾಣಕ್ಕೆ ಅನುಮತಿ ನೀಡದಿದ್ದಲ್ಲಿ ಪ್ರತಿಭಟನೆ - 1 min read

Photo Credit :

ಟವರ್ ನಿರ್ಮಾಣಕ್ಕೆ ಅನುಮತಿ ನೀಡದಿದ್ದಲ್ಲಿ ಪ್ರತಿಭಟನೆ

ಮಡಿಕೇರಿ: ಮೇಕೇರಿಯ ಸುಭಾಷ್ ನಗರದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಅಲ್ಲಿನ ವ್ಯಕ್ತಿಯೊಬ್ಬರು ಜಾಗ ನೀಡಲು ಮುಂದೆ ಬಂದಿದ್ದರೂ, ವಿನಾಕಾರಣ ಅಲ್ಲಿನ ಪಂಚಾಯಿತಿಯು ನಿರಾಕ್ಷೇಪಣಾ ಪತ್ರ ನೀಡಲು ನಿರಾಕರಿಸುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ)ಯ ಜಿಲ್ಲಾ ಸಮಿತಿ ಆರೋಪಿಸಿದೆ.

 ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು, ಮೇಕೇರಿ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಿಸಲು ಖಾಸಗಿ ಮೊಬೈಲ್ ಕಂಪೆನಿಯೊಂದು ಮುಂದೆ ಬಂದಿದ್ದು, ಇದಕ್ಕೆ ಅಲ್ಲಿನ ನಿವಾಸಿ ಹೆಚ್.ಸಿ.ಪೊನ್ನಪ್ಪ ಎಂಬವರು ಜಾಗ ನೀಡಲು ಮುಂದಾಗಿದ್ದಾರೆ. ಈ ಸಂಬಂಧ ಅಲ್ಲಿನ ಸುತ್ತಮುತ್ತಲ ಸುಮಾರು 100ಕ್ಕೂ ಅಧಿಕ ನಿವಾಸಿಗಳ ಸಹಿಯನ್ನು ಪಡೆದು ಪೊನ್ನಪ್ಪ ಅವರು ಕಳೆದ ಆಗಸ್ಟ್ ತಿಂಗಳಿನಲ್ಲಿ ಮೇಕೇರಿ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಟವರ್ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಕೋರಿದ್ದಾರೆ. ಅವರ ಅರ್ಜಿಯನ್ನು ಪರಿಶೀಲಿಸಿದ ಪಂಚಾಯಿತಿ ಆಡಳಿತ ಮಂಡಳಿಯ ಬಹುತೇಕ ಸದಸ್ಯರು ಒಪ್ಪಿಗೆ ಸೂಚಿಸಿದ್ದರೂ, ಅದೇ ಭಾಗದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಕಾರಣಕ್ಕೆ ನಿರಾಕ್ಷೇಪಣಾ ಪತ್ರ ನೀಡದೆ ಸತಾಯಿಸಲಾಗುತ್ತಿದೆ ಎಂದು ದೂರಿದರು.

ಮೇಕೇರಿಯಲ್ಲಿ ಟವರ್ ನಿರ್ಮಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಮಾತ್ರವಲ್ಲದೆ ಸುತ್ತಮುತ್ತಲ 4-5 ಗ್ರಾಮಗಳ ನಿವಾಸಿಗಳಿಗೆ ಅನುಕೂಲವೇ ಹೊರತು ಯಾವುದೇ  ತೊಂದರೆಯಾಗುವುದಿಲ್ಲ. ಆದರೂ ಆ ಜಾಗ  ಓರ್ವ ದಲಿತನಿಗೆ ಸೇರಿದ್ದು ಎಂಬ ಕಾರಣಕ್ಕೆ ಪಂಚಾಯಿತಿ ಆಡಳಿತ ಮಂಡಳಿ ನಿರಾಕ್ಷೇಪಣಾ ಪತ್ರ ನೀಡಿಲ್ಲ ಎಂದು ಆರೋಪಿಸಿದ ಅವರು, ಇದರ ಹಿಂದೆ ರಾಜಕೀಯ ಹಿತಾಸಕ್ತಿಯೂ ಅಡಗಿದೆ ಎಂದು ಟೀಕಿಸಿದರು.

ಪೊನ್ನಪ್ಪ ಅವರಿಗೆ ನ್ಯಾಯ ಸಿಗದಿದ್ದಲ್ಲಿ ಮೇಕೇರಿ ಗ್ರಾಮ ಪಂಚಾಯಿತಿ ಎದುರು ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ದಿವಾಕರ್ ಎಚ್ಚರಿಸಿದರು.

 ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಮೈಸೂರು ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ ಹಾಗೂ ಮಡಿಕೇರಿ ತಾಲೂಕು ಸಂಚಾಲಕ ಎ.ಪಿ.ದೀಪಕ್ ಉಪಸ್ಥಿತರಿದ್ದರು.

See also  ಬಡವರ ಬಂಧು ಸಾಲ ಯೋಜನೆ: ಫಲಾನುಭವಿಗಳ ಆಯ್ಕೆ ಅಧಿಕಾರ ಡಿಸಿಸಿ ಬ್ಯಾಂಕ್‍ಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು