ಮಂಡ್ಯ: ಕೆ.ಆರ್. ಪೇಟೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ ಮಾರಾಟ, ಸಾಗಾಣಿಕೆ ಮಾಡುತ್ತಿದ್ದ ಮದ್ಯ ಸೇರಿದಂತೆ 14.34 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು 153 ಮಂದಿಯನ್ನು ಬಂಧಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಬಿ. ಶಿವಪ್ರಸಾದ್ ತಿಳಿಸಿದರು.
ತಮ್ಮ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದು, ಮುಕ್ತ, ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ಜಿಲ್ಲಾದ್ಯಂತ ಕಳೆದ ನ. 11ರಿಂದ ಇದುವರೆಗೆ 394 ದಾಳಿಗಳನ್ನು ನಡೆಸಿ 153 ಮಂದಿಯನ್ನು ಬಂಧಿಸಿ, 1.79,559 ರೂ. ಮದ್ಯ, 12.55 ಲಕ್ಷ ರೂ. ಮೌಲ್ಯದ ವಾಹನಗಳು ಸೇರಿ 14,34,559 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸದರಿ ಪ್ರಕರಣಗಳ ಪೈಕಿ 23 ಘೋರ (ಹೆಚ್ಚಿನ ಮಟ್ಟದ ಮದ್ಯ ಸಂಗ್ರಹ, ಸಾಗಾಣಿಕೆ), 47 ಸಾಮಾನ್ಯ (ಷರತ್ತು ಉಲ್ಲಂಘನೆ), ಕಲಂ 15(ಎ)ರನ್ವಯ (ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ) 146 ಪ್ರಕರಣಗಳನ್ನು ದಾಖಲಿಸಿದ್ದು, ಎಲ್ಲ ಪ್ರಕರಣಗಳಲ್ಲೂ ಅಬಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೆ.ಆರ್. ಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 169 ದಾಳಿಗಳನ್ನು ನಡೆಸಿ, 47 ಮಂದಿಯನ್ನು ಬಂýಸಲಾಗಿದೆ. ಒಟ್ಟಾರೆ 182 ಲೀಟರ್ ಮದ್ಯ, 9.870 ಲೀಟರ್ ಬೀಯರ್, 6.000 ಲೀಟರ್ ಸೇಂದಿ, 5 ದ್ವಿಚಕ್ರ ವಾಹನಗಳು ಮತ್ತು ಒಂದು ಕಾರನ್ನು ವಶಪಡಿಸಿಕೊಳ್ಳುವ ಮೂಲಕ 69 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೇಳಿದರು.
ಕೆ.ಆರ್. ಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಘೋರ, 15 ಸಾಮಾನ್ಯ, ಕಲಂ 15(ಎ) ರನ್ವಯ 44 ಸೇರಿದಂತೆ 69 ಪ್ರಕರಣಗಳನ್ನು ದಾಖಲಿಸಿದ್ದು, 58,739 ರೂ. ಮೌಲ್ಯದ ಅಬಕಾರಿ ವಸ್ತುಗಳು, 9.35 ಲಕ್ಷ ರೂ. ಮೌಲ್ಯದ ವಾಹನಗಳು, 9,93,739 ರೂ. ಮೌಲ್ಯದ ಮುz್ದÉೀಮಾಲಿನ ಅಂದಾಜು ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ಹಿನ್ನೆಲೆಯಲ್ಲಿ ಅಕ್ರಮ ಮದ್ಯ, ಮದ್ಯಸಾರ, ಕಳ್ಳಭಟ್ಟಿ ಸಾರಾಯಿ, ಸೇಂದಿ ಇತ್ಯಾದಿ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ ಮತ್ತು ಮಾರಾಟ ಮುಂತಾದ ಅಬಕಾರಿ ಅಕ್ರಮ ಚಟುವಟಿಕೆಗಳು ಹಾಗೂ ಮದ್ಯದ ವಿತರಣೆ ಕಂಡುಬಂದಲ್ಲಿ ಜಿಲ್ಲಾ, ಉಪ ವಿಭಾಗ, ತಾಲೂಕು ಕೇಂದ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆದು ದೂರವಾಣಿ ಅಥವಾ ಸಂಬಂýಸಿದ ನಿಯಂತ್ರಣಾಧಿಕಾರಿಗಳ ಮೊಬೈಲ್‍ಗಳಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ಚುನಾವಣಾ ಕರ್ತವ್ಯದ ನಿಮಿತ್ತ ಅಬಕಾರಿ ಆಯುಕ್ತರ ಆದೇಶದ ಮೇರೆಗೆ ಬೆಂಗಳೂರು ಜಿಲ್ಲೆಯಿಂದ 5 ಮಂದಿ ಅಬಕಾರಿ ಉಪ ನಿರೀಕ್ಷಕರು ಮತ್ತು ರಾಮನಗರ ಜಿಲ್ಲೆಯಿಂದ 8 ಮಂದಿ ಅಬಕಾರಿ ರಕ್ಷಕರುಗಳನ್ನು ಮಂಡ್ಯ ಜಿಲ್ಲೆಗೆ ನಿಯೋಜಿಸಲಾಗಿದೆ. 30 ಮಂದಿ ಗೃಹ ರಕ್ಷಕರನ್ನು ಇಲಾಖಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಇವರೆಲ್ಲರೂ ತಂಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿರುವ ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್‍ಗಳು, ವೈನ್‍ಶಾಪ್‍ಗಳಿಗೆ ಇಲಾಖೆ ನಿಗದಿಪಡಿಸಿರುವ ಸಮಯದಲ್ಲೇ ಮಾರಾಟ ಮಾಡಬೇಕು. ಅವದಿಗಿಂತ ಹೆಚ್ಚಿನ ಸಮಯದಲ್ಲಿ ಮದ್ಯ ಮಾರಾಟ, ಸರಬರಾಜು ಮಾಡಿದಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಇಲಾಖೆ ನಿಗಾ ವಹಿಸಿದ್ದು, ಜಿಲ್ಲಾದ್ಯಂತ ಗಸ್ತು ಮಾಡುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಾರ್ವಜನಿಕರು, ಸಂಘ-ಸಂಸ್ಥೆಗಳ ಮಾಹಿತಿ ಮೇರೆಗೆ ಜಿಲ್ಲಾದ್ಯಂತ ಕಿರಾಣಿ ಅಂಗಡಿಗಳ ಮೇಲೆ ದಾಳಿ ಮಾಡುತ್ತಿದ್ದು, ಅಬಕಾರಿ ನಿಯಮ ಉಲ್ಲಂಘಿಸಿ, ಮದ್ಯ ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಸ್ಥಳದಲ್ಲೆ ದಂಡ ವಸೂಲಿ ಮಾಡಿ ಪ್ರಕರಣ ದಾಖಲು ಮಾಡಲಾಗಿದೆ. ಇದು ನಿರಂತರವಾಗಿ ನಡೆಯುತ್ತಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು.
ವೈನ್‍ಶಾಪ್, ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್, ಪಬ್‍ಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 262 ವಿವಿಧ ವರ್ಗಗಳ ಸನ್ನದುಗಳಿಗೆ ಪರವಾನಗಿ ನೀಡಲಾಗಿದೆ ಎಂದರು.