News Kannada
Friday, October 07 2022

ಕರ್ನಾಟಕ

ವಸತಿ ಯೋಜನೆ : ಶೀಘ್ರ ಅರ್ಜಿ ವಿಲೇವಾರಿಗೆ ಸೂಚನೆ : ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ - 1 min read

Photo Credit :

ವಸತಿ ಯೋಜನೆ : ಶೀಘ್ರ ಅರ್ಜಿ ವಿಲೇವಾರಿಗೆ ಸೂಚನೆ : ಕಟ್ಟುನಿಟ್ಟಿನ ಕ್ರಮದ ಎಚ್ಚರಿಕೆ

ಮಡಿಕೇರಿ: ವಸತಿ ಯೋಜನೆಗಳ ಫಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡದಿದ್ದಲ್ಲಿ ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ವಸತಿ ಯೋಜನೆಗಳ ದಾಖಲಾತಿಗಳನ್ನು ತುರ್ತಾಗಿ ಜಿಲ್ಲಾಧಿಕಾರಿ ಕಚೇರಿಗೆ ಸಂಜೆಯೊಳಗೆ ತಲುಪಿಸುವಂತೆ ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅತಿವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಳ ಬೆಳೆ ಪರಿಹಾರದ ವಿವರದ ಪ್ರಗತಿ ಕುರಿತು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರಾಜು ಅವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ಬಾಕಿ ಉಳಿದಿರುವ ಬೆಳೆ ಪರಿಹಾರವನ್ನು ಒಂದು ವಾರದೊಳಗೆ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧೆಡೆ ತೋಟಗಾರಿಕೆ ಇಲಾಖೆಗೆ ಅವಶ್ಯವಿರುವ ಜಾಗವನ್ನು ಗುರುತಿಸಿ ಸರ್ವೆ ಕಾರ್ಯ ನಡೆಸಿ ಹಾಗೂ ಭಾಗಮಂಡಲದಲ್ಲಿ ಕೃಷಿ ಇಲಾಖೆಗೆ ಅವಶ್ಯವಿರುವ ಜಾಗವನ್ನು ಕೃಷಿ ಇಲಾಖೆಯ ಹೆಸರಿಗೆ ಅರ್‍ಟಿಸಿ ಮಂಜೂರು ಮಾಡಲು ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಅವರು ಜಿಲ್ಲೆಯಲ್ಲಿನ 83 ಅಂಗನವಾಡಿಗಳಿಗೆ ಸ್ವಂತ ನಿವೇಶನದ ಅವಶ್ಯಕತೆಯಿದ್ದು, ಇದರಲ್ಲಿ 30 ಅಂಗನವಾಡಿಗಳಿಗೆ ನಿವೇಶನ ಗುರುತಿಸಿದ್ದು, ಬಾಕಿ ಉಳಿದಿರುವ 53 ಅಂಗನವಾಡಿಗಳಿಗೆ ಜಾಗದ ಅವಶ್ಯಕತೆ ಇರುವುದಾಗಿ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಸರ್ಕಾರಿ ನಿವೇಶನ ಲಭ್ಯವಿರದ ಕಡೆ ಕಂದಾಯ ಅಧಿಕಾರಿಗಳು ಹಿಂಬರಹ ನೀಡಬೇಕು. ಹಾಗೂ ಅರಣ್ಯ ವ್ಯಾಪ್ತಿಯ ಪ್ರದೇಶಗಳಲ್ಲಿ ಇರುವಂತಹ ಅಂಗನವಾಡಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಸ್ಥಳ ಪರೀಶಿಲನೆ ನಡೆಸಿ ಸರ್ಕಾರಿ ನಿವೇಶನ ಲಭ್ಯವಿಲ್ಲದಲ್ಲಿ ಖಾಸಗಿ ನಿವೇಶನ ಖರೀದಿ ಹಾಗೂ ದಾನಿಗಳು ಮುಂದೆ ಬಂದಲ್ಲಿ ಅಂತಹವರಿಂದ ನಿವೇಶನ ಪಡೆದು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.  

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ, ತಹಶೀಲ್ದಾರ್ ಗೋವಿಂದರಾಜು, ಮಹೇಶ್, ಕಂದಾಯ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

See also  ಮಂಡ್ಯದಲ್ಲಿ ಅಕ್ರಮಗಣಿಗಾರಿಕೆ ತಡೆಯದಿದ್ದಲ್ಲಿ ಉಳಿಗಾಲವಿಲ್ಲ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು