ಚಾಮರಾಜನಗರ: ಮನೆಯಲ್ಲಿ ಜಿಂಕೆ ಮಾಂಸ ಸಂಗ್ರಹಿಟ್ಟಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯಾಧಿಕಾರಿಗಳ ತಂಡ ನಾಲ್ಕು ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಕೋಳಿಪಾಳ್ಯದಲ್ಲಿ ನಡೆದಿದ್ದು, ಮಾಂಸ ಸಂಗ್ರಹಿಸಿಟ್ಟಿದ್ದ ದಂಪತಿ ಪರಾರಿಯಾಗಿದ್ದಾರೆ.
ಕೋಳಿಪಾಳ್ಯ ಗ್ರಾಮದ ನಾಗರಾಜ(60) ಎಂಬಾತ ತನ್ನ ಮನೆಯಲ್ಲಿ ಜಿಂಕೆ ಮಾಂಸವನ್ನು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮಾಹಿತಿ ಮೇರೆಗೆ ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಮನೆಯಲ್ಲಿದ್ದ ದಂಪತಿ ಪರಾರಿಯಾಗಿದ್ದರು. ಆದರೆ ಮನೆಯನ್ನು ಶೋಧಿಸಿದಾಗ ಜಿಂಕೆ ಮಾಂಸ ದೊರೆತಿತ್ತು. ಅದನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಪಡಿಸಿಕೊಳ್ಳಲಾಗಿದೆ.
ಬಳಿಕ ನ್ಯಾಯಾಲಯದ ಆದೇಶದ ಮೇರೆಗೆ ಅರಣ್ಯ ಅಧಿಕಾರಿಗಳು ಜಿಂಕೆ ಮಾಂಸವನ್ನು ನಾಶಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ದಂಪತಿಗಾಗಿ ಹುಡುಕಾಟ ನಡೆಸಲಾಗಿದೆ.