ಹುಬ್ಬಳ್ಳಿ: ಬಿಜೆಪಿ ಉಪಚುನಾವಣೆಯಲ್ಲಿ ಎಂಟು ಸ್ಥಾನ ಗೆಲ್ಲದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಂಟು ಸ್ಥಾನ ಗೆಲ್ಲದೆ ಇದ್ದಲ್ಲಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಎಂಟು ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ ಎಂದು ಸವಾಲು ಹಾಕಿದರು.
ಉಪಚುನಾವಣೆ ಬಳಿಕ ತಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೊಂಡು ಬರುತ್ತಿದ್ದಾರೆ. ಇದನ್ನು ಗಲುಗನಸು ಎನ್ನಲೋ ಅಥವಾ ಭ್ರಮೆ ಎನ್ನಲೋ ಎಂದು ತಿಳಿಯದು. ಸಿದ್ದರಾಮಯ್ಯ ಸದಾ ಅಧಿಕಾರಕ್ಕಾಗಿ ಹಂಬಲಿಸುತ್ತಿರುತ್ತಾರೆ. ಮುಖ್ಯಮಂತ್ರಿ ಸ್ಥಾನದ ಹುಚ್ಚಿನಿಂದ ಹೊರಬಂದಿಲ್ಲ ಎಂದರು.