ನವದೆಹಲಿ: ವಯಸ್ಸಾಗಿರುವ ಮಹಿಳೆಯ ಮೃತದೇಹ ಅನುಮಾನಸ್ಪದ ರೀತಿಯಲ್ಲಿ ಉತ್ತರ ದೆಹಲಿಯ ಗುಲಾಬಿ ಬಾಗ್ ನಲ್ಲಿ ಶನಿವಾರ ಪತ್ತೆಯಾಗಿದೆ.
ಈ ಸಂಬಂಧ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆ ಮನೆಯೊಂದರಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ನಡೆಸಲಾಗಿದೆ ಎಂದು ಶಂಕಿಸಿಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಈ ಸಂಬಂಧ ಸ್ಪಷ್ಟ ಚಿತ್ರಣ ಸಿಗಲಿದೆ. ಮಹಿಳೆಯ ಮೇಲೆ ಇದ್ದ ಬಟ್ಟೆಗಳು ಹರಿದು ಹೋಗಿತ್ತು ಎನ್ನಲಾಗಿದೆ.