News Kannada
Tuesday, September 27 2022

ಕರ್ನಾಟಕ

ಚಾಮರಾಜನಗರ: ಬೆಲೆ ಕುಸಿತದಿಂದ ರೈತ ಆತ್ಮಹತ್ಯೆಗೆ ಶರಣು - 1 min read

Photo Credit :

ಚಾಮರಾಜನಗರ: ಬೆಲೆ ಕುಸಿತದಿಂದ ರೈತ ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಬೆಲೆ ಕುಸಿತದಿಂದಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೆ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಗವಳ್ಳಿಯಲ್ಲಿ ನಡೆದಿದೆ.

ತಾಲೂಕಿನ ನಾಗವಳ್ಳಿ ಗ್ರಾಮದ ನಿವಾಸಿ ರೈತ ಪುಟ್ಟಸ್ವಾಮಿ (65) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಕೃಷಿ ಮಾಡಲೆಂದು ಬ್ಯಾಂಕ್ ಮತ್ತು ಖಾಸಗಿಯಾಗಿ ಸಾಲ ಪಡೆದಿದ್ದರು ಎನ್ನಲಾಗಿದೆ.

ಕುಟುಂಬದ ಮೂಲಗಳ ಪ್ರಕಾರ ಸುಮಾರು 4.5 ಲಕ್ಷಕ್ಕೂ ಹೆಚ್ಚಿನ ಸಾಲ ಮಾಡಿಕೊಂಡಿದ್ದರು.

ಜಮೀನಿನಲ್ಲಿ ಕೊಳವೆ ಬಾವಿ ತೆಗೆದು ರಾಗಿ ಮತ್ತು ಹುರುಳಿ ಬೆಳೆದಿದ್ದರಾದರೂ ಸೂಕ್ತ ಬೆಲೆ ಸಿಗದಿದ್ದರಿಂದ ಸಾಲ ತೀರಿಸುವುದು ಕಷ್ಟವಾಗಿತ್ತು. ಅಲ್ಲದೆ ಸಾಲಗಾರರ ಕಾಟವೂ ದಿನದಿಂದ ದಿನಕ್ಕೆ ಹೆಚ್ಚಾಗಿತ್ತು. ಇದರಿಂದ ನೊಂದ ಪುಟ್ಟಸ್ವಾಮಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮನೆಯವರಿಗೆ ಈ ವಿಷಯ ತಿಳಿದು ಅಸ್ವಸ್ಥಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಬೆಳೆಗೆ ಸೂಕ್ತ ಬೆಲೆ ಸಿಗದಿರುವುದರಿಂದ ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಆಸ್ಪತ್ರೆ ಮುಂಭಾಗ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

See also  ಆಮೆ ಬೇಟೆಯಾಡಿದ ಆರು ಮಂದಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು