News Kannada
Tuesday, September 27 2022

ಕರ್ನಾಟಕ

ಬಿಜೆಪಿಯಿಂದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ - 1 min read

Photo Credit :

ಬಿಜೆಪಿಯಿಂದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ

ಮಂಡ್ಯ: ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲ್ಲಲೇ ಬೇಕೆಂಬ ಹಠಕ್ಕೆ ಬಿಜೆಪಿ ನಾಯಕರು ಬಿದ್ದಿದ್ದು ಕ್ಷೇತ್ರಕ್ಕೆ ಪ್ರತ್ಯೇಕವಾದ ಉಪ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಮೂಲಕ ಮತದಾರರ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಈಗಾಗಲೇ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿಯೇ ಕೆ.ಆರ್.ಪೇಟೆ ತಾಲ್ಲೂಕು ಅಭಿವೃದ್ದಿ ಕೆಲಸ ಕಾರ್ಯಗಳಿಂದ ವಂಚಿತವಾಗಿದೆ. ತಾಲೂಕಿನ ಅಭಿವೃದ್ದಿಗೆ ಅನುದಾನ ನೀಡುವಲ್ಲಿ ಮಲತಾಯಿ ಧೋರಣೆ ತೋರಿದ ಸಮ್ಮಿಶ್ರ ಸರ್ಕಾರದ ಶಾಸಕರಾಗಿದ್ದ ಕೆ.ಸಿ.ನಾರಾಯಣಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಅವರ ಆಶಯಗಳನ್ನು ಈಡೇರಿಸುವ ಹಿನ್ನೆಲೆಯಲ್ಲಿ ನವ ಕೃಷ್ಣರಾಜಪೇಟೆ ನಿರ್ಮಾಣ ಪ್ರಣಾಳಿಕೆಯನ್ನು ಹೊರತರಲಾಗಿದೆ ಎಂದು ವಿವರಿಸಲಾಗಿದೆ.

ಇನ್ನು ಪ್ರಣಾಳಿಕೆಯಲ್ಲಿ ಏನಿದೆ ಎಂಬುದನ್ನು ನೋಡುವುದಾದರೆ, ಸರ್ಕಾರಿ ಕಚೇರಿಗಳನ್ನು ಭ್ರಷ್ಟಚಾರಮುಕ್ತ ವ್ಯವಸ್ಥೆ ಜಾರಿಗೊಳಿಸುವುದು, ಕೃಷಿ, ನೀರಾವರಿ ಯೋಜನೆ, ಹೇಮಾವತಿ ನಾಲೆಗಳ ಸಮರ್ಪಕ ದುರಸ್ತಿ. ಸಾದುಗೋನಹಳ್ಳಿ ಬಳಿ ಶುದ್ದ ಕುಡಿಯುವ ನೀರಿನ ಘಟಕವನ್ನು ಉನ್ನತೀಕರಣಗೊಳಿಸಿ ಅಭಿವೃದ್ದಿ ಪಡಿಸುವುದು, ಕಳೆದ 18 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹೊಸಹೊಳಲು ಮೇಲ್ಗಾಲುವೆ ಯೋಜನೆ, ಗೂಡೆಹೊಸಹಳ್ಳಿ ಬಳಿ ಏತ ನೀರಾವರಿ ಯೋಜನೆ, ಬೂಕನಕೆರೆ ವಿತರಣಾ ನಾಲೆ ಕಾಮಗಾರಿ ಮುಂದುವರೆಸುವುದು.

ಕ್ಷೇತ್ರದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲು ಮಂಡ್ಯ ಮೈಷುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಪ್ರಾರಂಭಿಸುವುದು, ನಿರಂತರ ವಿದ್ಯುತ್ ಪೂರೈಕೆ, ಶೀಳನೆರೆ ಹೋಬಳಿಗೆ ಏತ ನೀರಾವರಿ ಯೋಜನೆ, ತಾಲೂಕಿನಾದ್ಯಂತಹ ಇರುವ ಎಲ್ಲ ರಸ್ತೆಗಳ ಅಭಿವೃದ್ದಿ, ಸರ್ಕಾರಿ ಶಾಲಾ ಕಟ್ಟಡಗಳ ನವೀಕರಣ, ಕಾಂಪೌಂಡ್ ನಿರ್ಮಾಣ, ತಾಲೂಕಿನ ದೇವಸ್ಥಾನಗಳ ಜೀರ್ಣೋದ್ಧಾರ, ಪ್ರವಾಸಿ ತಾಣಗಳ ಅಭಿವೃದ್ದಿ, ಕ್ಷೇತ್ರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ವಿಶ್ವಮಾನವರ ಹೆಸರಿನಲ್ಲಿ ಭವನಗಳ ನಿರ್ಮಾಣ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಟ್ಟಡ ಹಾಗೂ ಹಾಸ್ಟೆಲ್ ನಿರ್ಮಾಣ, ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿರುವ ಯುವಜನತೆಗೆ ಕೆ.ಆರ್.ಪೇಟೆಯಲ್ಲಿ ಕೈಗಾರಿಗಳ ಸ್ಥಾಪನೆ ಮಾಡಿ ಉದ್ಯೋಗ ಸೃಷ್ಠಿ ಮಾಡಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನತೆಗೆ ಪ್ರಾಮಾಣಿಕವಾಗಿ ತಲುಪಿಸಿವ ಯೋಜನೆಗಳು ಸೇರಿದಂತೆ ಉಳಿದಿರುವ ಮೂರು ವರ್ಷಗಳ ಅವಧಿಯಲ್ಲಿ ಎಲ್ಲಾ ಯೋಜನೆಗಳನ್ನು ಹಂತ ಹಂತವಾಗಿ ಪೂರೈಸುವ ಕುರಿತಂತೆ ಹತ್ತು ಹಲವು ಭರವಸೆಗಳನ್ನು ನೀಡಲಾಗಿದೆ.

ಮತದಾರರು ಯಾವ ರೀತಿಯಲ್ಲಿ ಇದನ್ನು ಪರಿಗಣಿಸುತ್ತಾರೆ ಎಂಬುದು ಮಾತ್ರ ಗೌಪ್ಯವಾಗಿದ್ದು, ಚುನಾವಣೆಯ ಫಲಿತಾಂಶದ ಬಳಿಕವಷ್ಟೆ ಗೊತ್ತಾಗಲಿದೆ.

See also  ಕಗ್ಗಳಹುಂಡಿಯಲ್ಲಿ ನೀರಿಗಾಗಿ ಪರದಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು