News Kannada
Wednesday, October 05 2022

ಕರ್ನಾಟಕ

ಕೆ.ಆರ್.ಪೇಟೆಯಲ್ಲಿ  ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ  - 1 min read

Photo Credit :

ಕೆ.ಆರ್.ಪೇಟೆಯಲ್ಲಿ  ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ 

ಕೆ.ಆರ್.ಪೇಟೆ: ಡಿಸೆಂಬರ್ 5ರಂದು ನಡೆಯಲಿರುವ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಲಾ 258 ಮತಗಟ್ಟೆಗಳಲ್ಲಿಯೂ ಶಾಂತಿಯುತವಾದ ಪಾರದರ್ಶಕ ಮತದಾನಕ್ಕಾಗಿ ಚುನಾವಣಾ ಆಯೋಗದ ನಿರ್ದೇಶನದಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಕ್ಷೇತ್ರದ 258 ಮತಗಟ್ಟೆಗಳ ಪೈಕಿ ಸೂಕ್ಷ್ಮ, ಅತೀಸೂಕ್ಷ್ಮ, ಮಹಿಳಾ ಹಾಗೂ ವಿಶೇಷ ಚೇತನ ಮತಗಟ್ಟೆಗಳನ್ನು ಗುರುತಿಸಿ ಅಗತ್ಯವಾದ ಭದ್ರತೆಯನ್ನು ಕೈಗೊಳ್ಳಲಾಗಿದ್ದು, ಅರೆಸೇನಾ ಪಡೆಯ ಯೋಧರು, ಸಶಸ್ತ್ರ ಮೀಸಲು ಪಡೆಯ ಪೋಲಿಸರು, ಗೃಹರಕ್ಷಕ ದಳದ ಸಿಬ್ಬಂಧಿಗಳು ಸೇರಿದಂತೆ ಶಾಂತಿಯುತ ಪಾರದರ್ಶಕ ಮತದಾನಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಸಿದ್ಧತೆ ಮಾಡಲಾಗಿದೆ.

ನಾಳೆ ಮತಗಟ್ಟೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮತಯಂತ್ರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿ ಡಿ. 5ರಂದು ಗುರುವಾರ ಬೆಳಗ್ಗೆ 7ರಿಂದ ಸಂಜೆ 6ಗಂಟೆಯವರೆಗೂ ಮತದಾನ ನಡೆಸಲು ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡು ಮುಕ್ತವಾಗಿ ಪಾರದರ್ಶಕ ಚುನಾವಣೆ ನಡೆಯಲು ಶಿಸ್ತುಬದ್ಧವಾಗಿ ಕೆಲಸ ಮಾಡಲಿದ್ದಾರೆ.

ಮತದಾರರು ನಿಗಧಿತ ಸಮಯದೊಳಗೆ ಮತಗಟ್ಟೆಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಮತದಾನ ಮಾಡಲು ಮತಗಟ್ಟೆಗೆ ಆಗಮಿಸುವಾಗ ಮತದಾರರ ಗುರುತಿನ ಚೀಟಿ ಇಲ್ಲವೇ ಚುನಾವಣಾ ಆಯೋಗವು ಗುರುತಿಸಿರುವ  11 ಅಗತ್ಯ ದಾಖಲೆಗಳನ್ನು ತಮ್ಮ ಜೊತೆಯಲ್ಲಿ ಕೊಂಡೊಯ್ಯಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನಮೂದಾಗಿರುವ ಮತದಾರರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ವ್ಯಕ್ತಿಗಳಿಗೆ ಮತದಾನ ಮಾಡಲು ಅವಕಾಶವಿರುವುದಿಲ್ಲ ಎಂದು ಚುನಾವಣಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಮತದಾನ ನಡೆಯುವ ದಿನದಂದು ತಾಲೂಕಿನ ಸಂತೇಬಾಚಹಳ್ಳಿಯಲ್ಲಿ ನಡೆಯುವ ವಾರದ ಸಂತೆಯನ್ನು ನಿಷೇಧಿಸಲಾಗಿದೆ. ಯಾರಾದರೂ ಈ ನಿಯಮ ಮೀರಿ ಸಂತೆಯಲ್ಲಿ ವ್ಯಾಪಾರ ಮಾಡಲು ಯತ್ನಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

 

ಇಂದು ಸಂಜೆ ಬಳಿಕ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ, ತಾಲೂಕಿನಲ್ಲಿ ವಾಸವಾಗಿಲ್ಲದ ಅನ್ಯ ತಾಲೂಕುಗಳು ಹಾಗೂ ಕ್ಷೇತ್ರದ ಹೊರಗಿನ ಕಾರ್ಯಕರ್ತರು, ಮುಖಂಡರು ಕೆ.ಆರ್.ಪೇಟೆ ತಾಲೂಕನ್ನು ಖಾಲಿ ಮಾಡಬೇಕು. ಕಾನೂನು ಬಾಹಿರವಾಗಿ ಕೆ.ಆರ್.ಪೇಟೆಯ ಲಾಡ್ಜ್‍ಗಳು ಹಾಗೂ ತೋಟದ ಮನೆಯಲ್ಲಿ ವಾಸವಾಗಿರುವ ಮುಖಂಡರು ಕ್ಷೇತ್ರ ಖಾಲಿ ಮಾಡಬೇಕು. ಇಲ್ಲವೇ ಹೊರಗಿನ ಜನರ ವಿರುದ್ಧ ಮೊಕದ್ದಮೆಯನ್ನು ದಾಖಲಿಸಲಾಗುತ್ತದೆ.

ಮತಗಟ್ಟೆಗಳಿಗೆ ಅರೆಸೇನಾಪಡೆಯ ಯೋಧರು, ಸಶಸ್ತ್ರ ಮೀಸಲು ಪಡೆಯ ಪೊಲೀಸರು ಹಾಗೂ ಜಿಲ್ಲೆಯ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಸಾರ್ವಜನಿಕರು ಹಾಗೂ ಮತದಾರ ಬಂಧುಗಳು ವದಂತಿಗಳಿಗೆ ಕಿವಿಗೊಡದೇ ಮತಗಟ್ಟೆಗೆ ಬಂದು ಮತದಾನ ಮಾಡಿ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಜೊತೆಗೆ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿದೆ.

See also  ಲೆಫ್ಟಿನೆಂಟ್ ಕಮಾಂಡರ್ ಮುಕ್ಕಾಟಿರ ಸೂರಜ್ ಅಯ್ಯಪ್ಪ ನೌಕಾಯುದ್ಧ ಕಾಲೇಜು ಪ್ರತಿನಿಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು