News Kannada
Thursday, October 06 2022

ಕರ್ನಾಟಕ

ಡಿ.13 ರಿಂದ 19 ರವರೆಗೆ ಶಾಲಾ ಮಕ್ಕಳಿಗೆ ಶೈಕ್ಷಣಿಕ ಚಲನಚಿತ್ರ ಪ್ರದರ್ಶನ - 1 min read

Photo Credit :

ಡಿ.13 ರಿಂದ 19 ರವರೆಗೆ ಶಾಲಾ ಮಕ್ಕಳಿಗೆ ಶೈಕ್ಷಣಿಕ ಚಲನಚಿತ್ರ ಪ್ರದರ್ಶನ

ಮಡಿಕೇರಿ: ಜಿಲ್ಲೆಯ ಶಾಲಾ ಮಕ್ಕಳಿಗೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಲನಚಿತ್ರ ಪ್ರದರ್ಶನ ಏರ್ಪಡಿಸುವ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಮಕ್ಕಳಿಗೆ ಮತ್ತು ಪೋಷಕರ ಮೇಲೆ ಯಾವುದೇ ಒತ್ತಡ ಹೇರದೆ ಆಸಕ್ತ ಮಕ್ಕಳಿಗೆ ಚಲನಚಿತ್ರ ವೀಕ್ಷಣೆಗೆ ಅನುವು ಮಾಡಿಕೊಡಬೇಕು. ಹಾಗೂ ಮಕ್ಕಳನ್ನು ಸುರಕ್ಷಿತವಾಗಿ ಚಲನಚಿತ್ರ ಪ್ರದರ್ಶನಕ್ಕೆ ಕರೆದುಕೊಂಡು ಹೋಗಿ ಬರುವ ಜವಾಬ್ದಾರಿಯು ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರದ್ದಾಗಿರುತ್ತದೆ ಎಂದು ತಿಳಿಸಿದರು.

ಸಂಬಂಧಪಟ್ಟ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ಚಿತ್ರ ಮಂದಿರಗಳಲ್ಲಿ ಸುರಕ್ಷತಾ  ಮಾನದಂಡಗಳನ್ನು ಪರಿಶೀಲಿಸಿ ಮಕ್ಕಳ ಸುರಕ್ಷತೆಯ ಬಗ್ಗೆ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಅವರು ಸಂಬಂಧಪಟ್ಟ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅವರು ಮಾತನಾಡಿ, 6ನೇ ತರಗತಿಯಿಂದ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಪ್ರದರ್ಶನಕ್ಕೆ ಕಳುಹಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ಕರ್ನಾಟಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮಕ್ಕಳ ಚಿತ್ರ ಸಂಸ್ಥೆಯ ವ್ಯವಸ್ಥಾಪಕರಾದ ಎಸ್.ರಮೇಶ್ ಅವರು ಮಾತನಾಡಿ ಶಿಕ್ಷಣ ಇಲಾಖೆಯ ಒಪ್ಪಿಗೆ ಮೇರೆಗೆ  ‘ಎಳೆಯರು ನಾವು ಗೆಳೆಯರು’ ಚಿತ್ರವನ್ನು  ಡಿಸೆಂಬರ್ 13 ರಿಂದ 19 ವರೆಗೆ 6 ದಿನಗಳ ಕಾಲ ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ಮಡಿಕೇರಿಯ ಕಾವೇರಿ ಮಹಲ್ ಚಿತ್ರ ಮಂದಿರ, ಸಿದ್ದಾಪುರದ ಊಡ್ ಲ್ಯಾಂಡ್ ಚಿತ್ರಮಂದಿರ, ಶನಿವಾರಸಂತೆಯ ಯಶಸ್ವಿನಿ ಚಿತ್ರಮಂದಿರ, ಸುಂಟಿಕೊಪ್ಪದ ಗಣೇಶ್ ಚಲನಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನ ನಡೆಸಲಾಗುವುದು ಹಾಗೂ ಪ್ರತಿ ವಿದ್ಯಾರ್ಥಿಗೆ ರೂ. 15 ದರ ನಿಗದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕುಶಾಲನಗರ ವ್ಯಾಪ್ತಿಯಲ್ಲಿ ಶಾಲೆಗಳ ಸಂಖ್ಯೆ ಹೆಚ್ಚಿರುವುದರಿಂದ ಕುಶಾಲನಗರದ ಕೂರ್ಗ್ ಸಿನಿ ಪ್ಲೇಕ್ಸ್ ಚಿತ್ರ ಮಂದಿರದಲ್ಲಿ ಡಿಸೆಂಬರ್ 13 ರಿಂದ ಬೆಳಗ್ಗೆ 8 ರಿಂದ 10 ಗಂಟೆಯವರೆಗೆ 10 ದಿನಗಳ ಕಾಲ ಚಲನಚಿತ್ರ ಪ್ರದರ್ಶನ ನಡೆಯಲಿದೆ ಎಂದು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲೆಯ ಚಿತ್ರ ಮಂದಿರಗಳ ಮಾಲೀಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇತರರು ಹಾಜರಿದ್ದರು.

See also  ಚಾಮರಾಜನಗರದ ಬಸ್ ಕಂಡಕ್ಟರ್ ಗೆ ಕೊರೋನಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು