ಬೀದರ್: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನವಾಗಿ, ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಿಗ್ಗೆ ಬೀದರ್ ನ ಹುಮ್ನಾಬಾದ್ ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಯಾಣಿ ಎಂದು ಗುರುತಿಸಲಾಗಿದೆ.
ನಾಲ್ಕು ಜನ ಉದಯಗಿರಿ ಯಿಂದ ಹೈದರಾಬಾದ್‌ಗೆ ಹ್ಯುಂಡೈ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನಲ್ಲಿ ಇದ್ದಕ್ಕಿದ್ದ ಹಾಗೇ ಬೆಂಕಿ ಕಾಣಿಸಿಕೊಂಡಿದೆ.
ಚಳಿ ಜೋರಾಗಿದ್ದರಿಂದ ಕಾರಿನಲ್ಲಿ ಹೀಟರ್ ಬಹಳ ಸಮಯದಿಂದ ಚಾಲನೆಯಲ್ಲಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.