ಬೆಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಕೇಂದ್ರ ಸರ್ಕಾರ ಪ್ರಕಟಿಸಿರುವ ಕರಡು ಅಧಿಸೂಚನೆಯನ್ನು ಈಗಿರುವ ರೂಪದಲ್ಲಿ ಒಪ್ಪಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆಗಳ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಶಿಫಾರಸುಗಳನ್ನು ಜಾರಿ ಮಾಡುವುದರಿಂದ ಆರ್ಥಿಕ ನಷ್ಟ ಆಗುತ್ತದೆ. ಇದನ್ನು ಭರಿಸಲು ಪ್ರೋತ್ಸಾಹ ಧನ ನೀಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಆದರೆ ಕರಡು ಅಧಿಸೂಚನೆಯಲ್ಲಿ ಅದರ ಪ್ರಸ್ತಾಪವಿಲ್ಲ. ಈ ಎಲ್ಲ ಕಾರಣಗಳಿಂದ ಕರಡು ಅಧಿಸೂಚನೆ ವಿರೋಧಿಸಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.