News Kannada
Monday, September 26 2022

ಕರ್ನಾಟಕ

ಅಯೋಧ್ಯೆ ವಿವಾದ : ನಾಳೆ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ - 1 min read

Photo Credit :

ಅಯೋಧ್ಯೆ ವಿವಾದ : ನಾಳೆ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ

ಮಡಿಕೇರಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ದಿನವಾದ ಡಿ.6 ರಂದು ಮತೀಯ ಸೂಕ್ಷ್ಮ ಜಿಲ್ಲೆ ಕೊಡಗಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯ ವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿಗಳೊಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ. ವಿಜಯೋತ್ಸವ ಆಚರಿಸಬಾರದು ಮತ್ತು ಪಟಾಕಿಗಳನ್ನು ಸಿಡಿಸಬಾರದು ಸೇರಿದಂತೆ ವಿವಿಧ ನಿಯಮಗಳನ್ನು ಸೂಚಿಸಲಾಗಿದೆ.

ಪಾಲಿಸಬೇಕಾದ ಷರತ್ತುಗಳು: ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ಯೋಜಿತ ಮದುವೆ, ನಾಮಕರಣ, ಗೃಹಪ್ರವೇಶ ಕಾರ್ಯಕ್ರಮ, ವಾರದ ಸಂತೆ ಹಾಗೂ ಸರ್ಕಾರಿ ಕಾರ್ಯಕ್ರಮಗಳನ್ನು ಮತ್ತು ದೇವಸ್ಥಾನ, ಪೂಜಾ ಮಂದಿರ, ಚರ್ಚ್, ಮಸೀದಿಗಳಲ್ಲಿ ನಡೆಯುವ ಪ್ರತಿ ನಿತ್ಯದ ಪ್ರಾರ್ಥನೆಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆಯನ್ನು ನಿಷೇಧಿಸಿದೆ.

ಎಲ್ಲಾ ಸಾರ್ವಜನಿಕ, ರಾಜಕೀಯ ಬಹಿರಂಗ ಸಭೆ, ಸಮಾರಂಭ, ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಸ್ತೆ ತಡೆ ಹಾಗೂ ಮುತ್ತಿಗೆ ಮುಂತಾದುವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ವಿಜಯೋತ್ಸವ, ಪ್ರತಿಭಟನೆ ನಡೆಸುವುದು, ಪಟಾಕಿ ಸಿಡಿಸುವುದು, ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುವುದು ಮತ್ತು ಕಪ್ಪು ಅಥವಾ ಯಾವುದೇ ಪ್ರಚೋದನಾಕಾರಿ ಬಾವುಟ ಪ್ರದರ್ಶಿಸುವುದು, ಪ್ರಚೋದನಾತ್ಮಕ ಘೋಷಣೆ ಕೂಗುವುದು, ವಾಹನಗಳಲ್ಲಿ ಪ್ರಚೋದನಾತ್ಮಕ ಫಲಕ, ಬಾವುಟಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿದೆ. ಯಾವುದೇ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ನಿಷೇಧಿತ ಅವಧಿಯಲ್ಲಿ 5 ಮತ್ತು ಅದಕ್ಕಿಂತ ಮೇಲ್ಪಟ್ಟು ಜನರು ಗುಂಪು ಸೇರಬಾರದು. ಸರ್ಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್, ಎಟಿಎಂ ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳನ್ನು ಹೊರತುಪಡಿಸಿ, ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧ, ಮಾರಣಾಂತಿಕ ಆಯುಧಗಳನ್ನು ಹೊಂದಿರುವುದು, ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

See also  ಮುಂಬೈನಿಂದ ಮಂಡ್ಯಕ್ಕೆ ಬರುವವರಿಗೆ ಪ್ರವೇಶ ಬಂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು