News Kannada
Monday, September 26 2022

ಕರ್ನಾಟಕ

ಕೊನೆಗೂ ಮಡಿಕೇರಿ ರಸ್ತೆಗಿಳಿದ ಶಾಸಕ ಅಪ್ಪಚ್ಚು ರಂಜನ್ : ರೂ.28 ಕೋಟಿಯಲ್ಲಿ ರಸ್ತೆಗಳ ಅಭಿವೃದ್ಧಿ - 1 min read

Photo Credit :

ಕೊನೆಗೂ ಮಡಿಕೇರಿ ರಸ್ತೆಗಿಳಿದ ಶಾಸಕ ಅಪ್ಪಚ್ಚು ರಂಜನ್ : ರೂ.28 ಕೋಟಿಯಲ್ಲಿ ರಸ್ತೆಗಳ ಅಭಿವೃದ್ಧಿ

ಮಡಿಕೇರಿ: ಕೊನೆಗೂ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ನಗರ ಪ್ರದಕ್ಷಿಣೆ ಮಾಡಿದ್ದು, ರಸ್ತೆ ಅವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿದ್ದಾರೆ. ನಗರೋತ್ಥಾನ ಹಾಗೂ ಮಳೆಹಾನಿ ಪರಿಹಾರ ಯೋಜನೆಯಡಿ 28 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರಸಭೆ ಅಧಿಕಾರಿಗಳೊಂದಿಗೆ ನಗರದ ಎಫ್‍ಎಂಸಿ ಕಾಲೇಜು ರಸ್ತೆ, ರೇಸ್‍ಕೋರ್ಸ್ ರಸ್ತೆ, ಭಗವತಿ ನಗರ, ಕನ್ನಿಕಾ ಬಡಾವಣೆ, ಚಾಮುಂಡೇಶ್ವರಿ ನಗರ ಮತ್ತಿತರ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಮಳೆಯಿಂದಾಗಿ ಹಾನಿಯಾದ ರಸ್ತೆಗಳನ್ನು ಪರಿಶೀಲಿಸಿದರು.

ನಂತರ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಳೆಯ ಕಾರಣದಿಂದಾಗಿ ರಸ್ತೆ ದುರಸ್ತಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ. ಈಗ ಮಳೆಗಾಲ ಮುಗಿದಿದ್ದು ನಗರೋತ್ಥಾನ ಹಾಗೂ ಮಳೆಹಾನಿ ಪರಿಹಾರ ಯೋಜನೆಯಡಿ 28 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಳ್ಳಲಾಗುವುದು. ಮುಂದಿನ ಮಾರ್ಚ್ ತಿಂಗಳ ಒಳಗಾಗಿ ನಗರದಾದ್ಯಂತ ಸರ್ವಋತು ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಯುಜಿಡಿ ಕಾಮಗಾರಿಯಿಂದ ನಗರದ ರಸ್ತೆಗಳು ಹಾಳಾಗಿದ್ದು, ಶೀತ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುವುದು. ಜಿ.ಪಂ.ನೂತನ ಕಟ್ಟಡ, ಜಿಲ್ಲಾ ನ್ಯಾಯಲಯ ಕಟ್ಟಡ ಹಾಗೂ ಕೇಂದ್ರೀಯ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಸ್ಟೋನ್ ಹಿಲ್ ಬಳಿ ಇರುವ ನಗರಸಭೆಯ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಈ ಹಿಂದೆ ಉತ್ತಮ ಪ್ರದೇಶವಾಗಿತ್ತು, ಈಗ ಕಸದ ಬೆಟ್ಟದಂತಾಗಿದೆ. ಈ ಪ್ರದೇಶದಲ್ಲಿ ವೈಜ್ಞಾನಿಕ ರೀತಿಯಲ್ಲಿ ಹಸಿ ಕಸ, ಒಣ ಕಸ ವಿಂಗಡಣೆ ಮಾಡಲು ನಗರಸಭೆ ಆಯುಕ್ತರಿಗೆ ಇದೇ ಸಂದರ್ಭದಲ್ಲಿ ಸೂಚಿಸಿದರು.

ಕಸ ವಿಲೇವಾರಿ ಘಟಕದಲ್ಲಿ ಕಸ ವಿಂಗಡಣೆ ಯಂತ್ರೋಪಕರಣ ಮತ್ತು ಹಸಿಕಸ ವಿಂಗಡಣೆ ತೊಟ್ಟಿಗಳನ್ನು ವೀಕ್ಷಣೆ ಮಾಡಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ವಿಂಗಡಣೆ ಮಾಡಿ ಹಸಿಕಸದಲ್ಲಿ ಗೊಬ್ಬರ ತಯಾರಿ ಮಾಡಿ ಈ ಪ್ರದೇಶದ ಪರಿಸರಕ್ಕೆ ಯಾವುದೇ ಧಕ್ಕೆ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕರೊಂದಿಗೆ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ನಗರಸಭಾ ಮಾಜಿ ಸದಸ್ಯ ಪ್ರಕಾಶ್, ಆಯುಕ್ತ ರಮೇಶ್, ಅಭಿಯಂತರ ನಾಗರಾಜ್, ಆರೋಗ್ಯ ನಿರೀಕ್ಷಕ ನಾಚಪ್ಪ ಮತ್ತಿತರರು ಹಾಜರಿದ್ದರು.

See also  ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ನಿರ್ವಹಿಸಲು ಸರ್ವರೀತಿಯ ಸಜ್ಜು – ಸಚಿವ ಸುರೇಶ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು