ಬಾಗಲಕೋಟೆ: ಬೀಳಗಿ ತಾಲ್ಲೂಕು ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನದಿಂದ ಕೊಡಮಾಡುವ ‘ಅಬ್ಬೆ ಪ್ರಶಸ್ತಿ’ಗೆ ಸಾಲು ಮರದ ತಿಮ್ಮಕ್ಕ ಆಯ್ಕೆಯಾಗಿದ್ದಾರೆ.
ಕೃಷಿ ಪ್ರಶಸ್ತಿಗೆ ಸಮೀಪದ ರೊಳ್ಳಿ ಗ್ರಾಮದ ಮಹಾದೇವಪ್ಪ ಚಲವಾಡಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ.
ಡಿ.7ರಂದು ಬಾಡಗಂಡಿಯ ಬಾಪೂಜಿ ಅಂತರರಾಷ್ಟ್ರೀಯ ವಸತಿ ಶಾಲೆಯ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.