News Kannada
Saturday, September 24 2022

ಕರ್ನಾಟಕ

ಜಿಲ್ಲಾಧಿಕಾರಿಗಳಿಂದ ಪರಿಶಿಷ್ಟರ ಕಡೆಗಣನೆ : ಪ್ರಜಾ ಪರಿವರ್ತನಾ ವೇದಿಕೆ ಆರೋಪ - 1 min read

Photo Credit :

ಜಿಲ್ಲಾಧಿಕಾರಿಗಳಿಂದ ಪರಿಶಿಷ್ಟರ ಕಡೆಗಣನೆ : ಪ್ರಜಾ ಪರಿವರ್ತನಾ ವೇದಿಕೆ ಆರೋಪ

ಮಡಿಕೇರಿ: ಪರಿಶಿಷ್ಟರ ಸಂಕಷ್ಟಗಳಿಗೆ ಜಿಲ್ಲಾಧಿಕಾರಿಗಳು ಸೂಕ್ತ ಸ್ಪಂದನ ನೀಡುತ್ತಿಲ್ಲವೆಂದು ನೇರ ಆರೋಪ ಮಾಡಿರುವÀ ಪ್ರಜಾ ಪರಿವರ್ತನಾ ವೇದಿಕೆ ಸಂಘಟನೆ, ಶೋಷಿತ ಸಮುದಾಯದ ಸಮಸ್ಯೆಗಳಿಗೆ ಮುಂದಿನ ಹದಿನೈದು ದಿನಗಳ ಒಳಗಾಗಿ ಅಗತ್ಯ ಪರಿಹಾರ ಸೂಚಿಸದಿದ್ದಲ್ಲಿ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಹೆಚ್.ಎಸ್.ಮುತ್ತಪ್ಪ ಅವರು ಜಿಲ್ಲಾ ವ್ಯಾಪ್ತಿಯಲ್ಲಿ ಸಂಕಷ್ಟದ ಬದುಕು ನಡೆಸುತ್ತಿರುವ ಪರಿಶಿಷ್ಟ ಜಾತಿ-ಪಂಗಡದ ಯಾವುದೇ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಬಗೆಹರಿಸಲು ಆಸಕ್ತಿ ತೋರದ ಜಿಲ್ಲಾಧಿಕಾರಿಗಳು ರಾಜಕೀಯದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪರಿಶಿಷ್ಟ ಸಮುದಾಯದ ಕಲ್ಯಾಣಕ್ಕೆ ಪೂರಕವಾದ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮಿತಿಯ ಸಭೆಯನ್ನು ಜಿಲ್ಲಾಧಿಕಾರಿಗಳು ಕಾಟಾಚಾರಕ್ಕೆಂಬಂತೆ ನಡೆಸುತ್ತಿದ್ದು, ಪರಿಶಿಷ್ಟರ ಸಮಸ್ಯೆಗಳಿಗೆ ಸ್ಪಂದನೆಯನ್ನೇ ನೀಡುತ್ತಿಲ್ಲವೆಂದು ಅಳಲು ತೋಡಿಕೊಂಡರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಅವರು ಮಾತ್ರ ಪರಿಶಿಷ್ಟರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಈ ಹಿಂದಿನ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರಿಂದಲೂ ಸಮಸ್ಯೆಗಳಿಗೆ ಪರಿಹಾರ ದೊರೆತ್ತಿದೆ. ಆದರೆ ಈಗಿನ ಜಿಲ್ಲಾಧಿಕಾರಿಗಳು ಕೇವಲ ಪ್ರಚಾರಕಷ್ಟೇ ಸೀಮಿತವಾಗುತ್ತಿದ್ದಾರೆ ಎಂದು ಹೆಚ್.ಎಸ್.ಮುತ್ತಪ್ಪ ಆರೋಪಿಸಿದರು. ಮಡಿಕೇರಿ ತಾಲ್ಲೂಕಿನ ಕಕ್ಕಬ್ಬೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆತಟ್ಟು ಕಾಲೋನಿ ನಿವಾಸಿಗಳು ಮೂಲಭೂತ ಸೌಲಭ್ಯಗಳಿಲ್ಲದೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಡಿ ಕಾಲೋನಿಗೆ ವಿದ್ಯುತ್ ಸಂಪರ್ಕಕ್ಕೆ ಅಗತ್ಯ ಕೆಲಸ ನಡೆಸಿದ್ದರು, ವಿದ್ಯುತ್ ಸಂಪರ್ಕವನ್ನು ನಿವಾಸಿಗಳಿಗೆ ಒದಗಿಸದೆ ಸಮಸ್ಯೆಯನ್ನು ಸೃಷ್ಟಿಸಲಾಗಿದೆ. ಅಲ್ಲದೆ ವಿದ್ಯುತ್ ಇಲಾಖೆ ಸಿಬ್ಬಂದಿಗಳು ವಿದ್ಯುತ್ ಸಂಪರ್ಕ ಕಲ್ಪಿಸಲು ರೂ.500 ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನ, ಅಂಗನವಾಡಿಗಳ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಕೋರಿದ್ದರೂ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿಲ್ಲ.

ಜಿಲ್ಲಾ ವ್ಯಾಪ್ತಿಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ವಸತಿ ರಹಿತ, ಭೂ ರಹಿತ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ, ಜಿಲ್ಲೆಯಲ್ಲಿ ಉಂಟಾದ ಪ್ರಾಕೃತಿಕ ವಿಕೋಪಗಳಿಗೆ ಸಿಲುಕಿದ ಸಂತ್ರಸ್ತರಿಗೆ, ಬೆಳೆಗಾರರಿಗೆ ಇಂದಿಗೂ ಸಮರ್ಪಕ ಪರಿಹಾರ, ಸೌಲಭ್ಯಗಳು ನೀಡಲು ಸಾಧ್ಯವಾಗಿಲ್ಲ. ಬಡಜನರ ಬಗ್ಗೆÀ ಜಿಲ್ಲಾಧಿಕಾರಿಗಳಿಗೆ ಕಾಳಜಿ ಇದ್ದಂತ್ತಿಲ್ಲ ಎಂದು ಆರೋಪಿಸಿದ ಮುತ್ತಪ್ಪ ಎರಡು ವಾರಗಳ ಒಳಗೆ ಸಮಸ್ಯೆಗಳಿಗೆ ಸ್ಪಂದನೆ ದೊರೆಯದಿದ್ದಲ್ಲಿ ಪರಿಶಿಷ್ಟ ಸಮುದಾಯ ಮತ್ತು ಸಾರ್ವಜನಿಕÀರ ಸಹಕರದೊಂದಿಗೆ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಕೆ.ಎ.ಹೊನ್ನಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಸಿ.ಜೆ.ರಮೇಶ್ ಹಾಗೂ ನಾಪೋಕ್ಲು ಹೋಬಳಿ ಅಧ್ಯಕ್ಷ ಸಾಬು ಉಪಸ್ಥಿತರಿದ್ದರು.

See also  ಶಿರಸಿಯ ಮಾರಿಕಾಂಬಾ ಹೈಸ್ಕೂಲ್ ವಿದ್ಯಾರ್ಥಿನಿ ಸನ್ನಧಿ ರಾಜ್ಯಕ್ಕೆ ಪ್ರಥಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು