News Kannada
Tuesday, November 29 2022

ಕರ್ನಾಟಕ

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಸೂಚನೆ - 1 min read

Photo Credit :

ಕಾಡಾನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಸೂಚನೆ

ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಮಾನವ ಪ್ರಾಣ ಹಾನಿ, ಬೆಳೆ ಹಾನಿ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ ಬದುಕು ಸಾಗಿಸುವಂತಾಗಿದೆ. ಆದ್ದರಿಂದ ಕೂಡಲೇ ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಸೂಚಿಸಿದ್ದಾರೆ.  

ನಗರದ ಜಿಲ್ಲಾ ಪಂಚಾಯಿತಿ ನೂತನ ಭವನದಲ್ಲಿ ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಸಂಬಂಧ ಮಾಹಿತಿ ನೀಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ದಯಾನಂದ, ಮತ್ತಿತರರು ಈಗಾಗಲೇ 5 ಕಾಡಾನೆಗಳನ್ನು ಸ್ಥಳಾಂತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಜಿಲ್ಲೆಯ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಶೀಘ್ರ ಮುಚ್ಚುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ನಿರ್ದೇಶನ ನೀಡಿದರು. 

ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಜಿಲ್ಲೆಯ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಗಳ ರಸ್ತೆ ಸರಿಪಡಿಸಬೇಕು. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆ ಜಿ.ಪಂ.ಅಧ್ಯಕ್ಷರು ನಿರ್ದೇಶನ ನೀಡಿದರು. 

ಅಂಬೇಡ್ಕರ್, ಬಸವ, ಇಂದಿರಾ ಆವಾಸ್ ಯೋಜನೆಯಡಿ ಮನೆಗಳನ್ನು ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಮರಳು ತೆಗೆಯಲು ಅವಕಾಶ ನೀಡಬೇಕು. ಮರಳು ದೊರೆಯುವಂತೆ ನೋಡಿಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಜಿ.ಪಂ. ಅಧ್ಯಕ್ಷರು ನಿರ್ದೇಶನ ನೀಡಿದರು. 

ಬಡವರು ಮನೆ ನಿರ್ಮಿಸಿಕೊಳ್ಳಲು ಹತ್ತಿರದ ಹೊಳೆ ಬದಿ ಮರಳು ತೆಗೆದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಸರಿಯೇ, ಬಡವರು ಮನೆ ನಿರ್ಮಿಸಿಕೊಳ್ಳುವುದಾದರೂ ಹೇಗೆ ಎಂದು ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಪ್ರಶ್ನಿಸಿದರು.

ಈ ಕುರಿತು ವಿಚಾರ ಪ್ರಸ್ತಾಪಿಸಿದ ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಬಡವರು ಹೊಳೆ ಬದಿ ಮರಳು ಸಂಗ್ರಹಣೆ ಮಾಡಿಕೊಂಡಿದ್ದರೆ, ಅಂತವರ ವಿರುದ್ದ ಪ್ರಕರಣ ದಾಖಲಿಸಲಾಗುತ್ತದೆ. ಇಂತಹ ಪ್ರಕರಣಗಳನ್ನು ವಾಪಸ್ಸು ಪಡೆಯುವಂತೆ ಅವರು ಅಧಿಕಾರಿಗೆ ಸೂಚಿಸಿದರು. 

ಜಿಲ್ಲೆಯ 17 ಕಡೆಗಳಲ್ಲಿ ಮರಳು ತೆಗೆಯಲು ಅನುಮತಿ ದೊರೆತಿದ್ದು, ಮರಳು ಪಡೆಯಲು ಅವಕಾಶ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ರೇಷ್ಮ ಅವರು ತಿಳಿಸಿದರು.

ಭತ್ತ ಕೊಯ್ಲು ಕಾರ್ಯ ನಡೆಯುತ್ತಿದ್ದು, ಭತ್ತ ಖರೀದಿ ಕೇಂದ್ರ ತೆರೆಯಬೇಕು ಎಂದು ಜಿ.ಪಂ.ಅಧ್ಯಕ್ಷರು ಸೂಚಿಸಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ ಅವರು ಭತ್ತ ಕಟಾವು ಕಾರ್ಯ ನಡೆಯುತ್ತಿದ್ದು, ಕೂಡಲೇ ಭತ್ತ ಖರೀದಿ ಕೇಂದ್ರ ತೆರೆಯಬೇಕು ಎಂದು ಅವರು ಸಲಹೆ ಮಾಡಿದರು. 

ಮಳೆಹಾನಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮೆಯಾಗಬೇಕು ಎಂದು ಜಿ.ಪಂ. ಅಧ್ಯಕ್ಷರು ನಿರ್ದೇಶನ ನೀಡಿದರು.

ಎಸ್‍ಎಸ್‍ಎಲ್‍ಸಿ ಫಲಿತಾಂಶ ಶೇಕಡವಾರು ಹೆಚ್ಚಳಕ್ಕೆ ಅಗತ್ಯ ತಯಾರಿ ಮಾಡಬೇಕು. ರಾಜ್ಯದ ರ್ಯಾಂಕ್‍ನಲ್ಲಿ 10 ರೊಳಗೆ ಕೊಡಗು ಜಿಲ್ಲೆ ಇರುವಂತೆ ಶ್ರಮಿಸುವಂತೆ ಜಿ.ಪಂ. ಅಧ್ಯಕ್ಷರು ಹೇಳಿದರು.

See also  ಉತ್ತರ ಕನ್ನಡದಲ್ಲಿ 75 ಕೊರೊನಾ ಪಾಸಿಟಿವ್: 107 ಜನ ಬಿಡುಗಡೆ, ಮೂವರ ಸಾವು

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ ಅವರು ವಿದ್ಯಾರ್ಥಿಗಳ ಕ್ರೀಯಾಶೀಲತೆ ಮತ್ತು ಚಲನಶೀಲತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಬೆಳಗ್ಗಿನ ವೇಳೆಯಲ್ಲಿ ಯೋಗಕ್ಕೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು