News Kannada
Friday, December 02 2022

ಕರ್ನಾಟಕ

ಪೆರುಂಬಾಡಿ-ಮಾಕುಟ್ಟ ರಸ್ತೆಯಲ್ಲಿ ಸರಕು ಸಾಗಣೆ ವಾಹನಕ್ಕೆ ನಿಷೇಧ

Photo Credit :

ಪೆರುಂಬಾಡಿ-ಮಾಕುಟ್ಟ ರಸ್ತೆಯಲ್ಲಿ ಸರಕು ಸಾಗಣೆ ವಾಹನಕ್ಕೆ ನಿಷೇಧ

ಮಡಿಕೇರಿ:ಪೆರುಂಬಾಡಿ-ಮಾಕುಟ್ಟ ರಸ್ತೆಯಲ್ಲಿ ಮುಂಗಾರಿನ ಅವಧಿಯಲ್ಲಿ ಭೂಕುಸಿತ ಉಂಟಾಗಿ, ಬಳಿಕ  ಲೋಕೋಪಯೋಗಿ ಇಲಾಖೆ ವತಿಯಿಂದ ತಾತ್ಕಾಲಿಕ ಕಾಮಗಾರಿಗಳು, ರಕ್ಷಣಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.

ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಇದೀಗ ಈ ರಸ್ತೆಯಲ್ಲಿ ಹೆಚ್ಚಿನ ಭಾರ ಹೊಂದಿರುವ ಸರಕು ಸಾಗಣೆ ವಾಹನಗಳ ಸಂಚಾರವನ್ನು ಮುಂದಿನ ಜನವರಿ 15 ರವರೆಗೆ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

 ಈ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ, ಕಾರು, ಜೀಪು ಮುಂತಾದ ಲಘು ವಾಹನ, ಬಸ್ಸು ಮತ್ತು ಲಾರಿಗಳ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ. ಅತೀ ಭಾರ ಹೊತ್ತ ಸರಕು ಸಾಗಣೆ  ವಾಹನಗಳ ಸಂಚಾರ ನಿಷೇಧಿಸಿದೆ. ಸಂಚಾರಕ್ಕೆ ಅನುಮತಿಸಿರುವ ವಾಹನಗಳು ಅರಣ್ಯ ಭಾಗದಲ್ಲಿ ಗರಿಷ್ಠ ಗಂಟೆಗೆ 40 ಕಿ.ಮೀ. ವೇಗ ಮೀರದಂತೆ ಹಾಗೂ ನಿಗದಿತ ಅವಧಿಯಲ್ಲಿ ಈ ಪ್ರದೇಶವನ್ನು ಹಾದು ಹೋಗುವಂತೆ ಸಂಚರಿಸುವುದು. ಅಲ್ಲದೆ, ಈ ಪ್ರದೇಶದಲ್ಲಿ ವಾಹನಗಳ ತಂಗುವಿಕೆಯನ್ನು ನಿಷೇಧಿಸಿದೆ. ಈ ಆದೇಶದ ಉಲ್ಲಂಘನೆಯು ಕಾನೂನು ರೀತ್ಯಾ ದಂಡನೀಯವೆಂದು ಆದೇಶದಲ್ಲಿ ತಿಳಿಸಲಾಗಿದೆ.

See also  ಮುಖ್ಯ ಸಚೇತಕರಾಗಿ ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು