News Kannada
Friday, December 09 2022

ಕರ್ನಾಟಕ

  ಭಾರತೀಯ ಸೇನೆಗೆ ಕೊಡಗಿನ ಕೊಡುಗೆ ಅಪೂರ್ವ

Photo Credit :

   ಭಾರತೀಯ ಸೇನೆಗೆ ಕೊಡಗಿನ ಕೊಡುಗೆ ಅಪೂರ್ವ

ಮಡಿಕೇರಿ: ಕೊಡಗು ಜಿಲ್ಲೆ ಭಾರತೀಯ ಸೇನೆಗೆ ತನ್ನದೇ ಆದ ಅಪೂರ್ವ ಕೊಡುಗೆಗಳನ್ನು ನೀಡಿದ್ದು, ಇಲ್ಲಿನವರೇ ಆದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ಕೆ.ಎಸ್.ತಿಮ್ಮಯ್ಯ ಮತ್ತು ಅಸಂಖ್ಯ ಸಿಪಾಯಿಗಳು ರಾಷ್ಟ್ರ ರಕ್ಷಣೆಗೆ ಅತ್ಯುನ್ನತವಾದ ಸೇವೆ ಸಲ್ಲಿಸಿದ್ದಾರೆಂದು ದಕ್ಷಿಣ ವಲಯದ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎಸ್.ಕೆ.ಸಾನಿ ತಿಳಿಸಿದ್ದಾರೆ.

ನಗರದ ಪೊಲೀಸ್ ಮೈತ್ರಿ ಸಮುದಾಯ ಭವನದಲ್ಲಿ ಆಯೋಜಿತ ‘ಮಾಜಿ ಸೈನಿಕರ ಸಮಾವೇಶ’ದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ನಿವೃತ್ತ ಸೈನಿಕರಿಗೆ ಸರ್ಕಾರ ಹತ್ತು ಹಲವು ಸವಲತ್ತುಗಳನ್ನು ನೀಡುತ್ತಿದ್ದು, ‘ಒಂದು ಶ್ರೇಣಿ ಒಂದು ಪಿಂಚಣಿ ಯೋಜನೆ’ ಜಾರಿ ಮಾಡಲಾಗಿದೆ. ಇದರಿಂದ ನಿವೃತ್ತ ಸೈನಿಕರಿಗೆ ಹೆಚ್ಚಿನ ಲಾಭವಾಗಿದೆ ಎಂದು ತಿಳಿಸಿದರು.

ನಿವೃತ್ತ ಸೈನಿಕರು ಹಾಗೂ ಹುತಾತ್ಮ ಸೈನಿಕರ ಕುಟುಂಬ ವರ್ಗದವರಿಗೆ ವಿಶೇಷ ಸವಲತ್ತುಗಳನ್ನು ಸರ್ಕಾರ ನೀಡುತ್ತಿದ್ದು, ಇದರಿಂದ ಹೆಚ್ಚಿನ ಪ್ರಯೋಜನವಾಗಲಿದೆ. ಇಂದಿನ ರ್ಯಾಲಿಯಿಂದ ಹೆಚ್ಚಿನ ಸವಲತ್ತುಗಳ ಕುರಿತು ಮಾಹಿತಿ ದೊರೆಯಲಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು.

ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕರ್ನಲ್ ಗೀತಾ ಮಾತನಾಡಿ, ಮಾಜಿ ಸೈನಿಕರಿಗೆ ಇರುವ ಸವಲತ್ತುಗಳು ಹಾಗೂ ಮಾಜಿ ಸೈನಿಕರ ಮತ್ತು ಹುತಾತ್ಮ ಸೈನಿಕ ಮಕ್ಕಳಿಗೆ ಇರುವಂತಹ ಸವಲತ್ತುಗಳು, ಮಾಜಿ ಸೈನಿಕರಿಗೆ ಮತ್ತು ಹುತಾತ್ಮ ಸೈನಿಕರ ಕುಟುಂಬದವರಿಗೆ ಸರ್ಕಾರ ಒದಗಿಸುತ್ತಿರುವ ಸೇವೆಗಳ ಕುರಿತು ಮಾಹಿತಿ ನೀಡಿ, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸೇನೆಯ ದಕ್ಷಿಣ ವಲಯದ ಮುಖ್ಯ ದಾಖಲೆ ಅಧಿಕಾರಿ ಪಿ.ಎಸ್.ರಾವತ್ ಅವರು, ಮಾಜಿ ಸೈನಿಕರಿಗೆ ಇರುವಂತಹ ಪಿಂಚಣಿ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಮಡಿಕೇರಿ ವೈದ್ಯಕೀಯ ಕಾಲೇಜಿನ ಡಾ.ಶಿವಕುಮಾರ್ ಅವರು ಮಾತನಾಡಿ 30 ವರ್ಷದ ನಂತರ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ತಿಳಿಸುತ್ತದೆ.ಆದ್ದರಿಂದ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಲೆಫ್ಟಿನೆಂಟ್ ಕರ್ನಲ್ ಅಯ್ಯಪ್ಪ ಮಾತನಾಡಿ, ಮಾಜಿ ಸೈನಿಕರು ಆರೋಗ್ಯ ಯೋಜನೆ ಸೌಲಭ್ಯಗಳನ್ನು ಮೈಸೂರು, ಬೆಂಗಳೂರು ಮತ್ತು ಮಂಗಳೂರಿನ ಆಸ್ಪತ್ರೆಗಳಿಂದ ಪಡೆಯಬಹುದಾಗಿದ್ದು, ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.

ಸನ್ಮಾನ- ಸಮಾವೇಶದಲ್ಲಿ ನಿವೃತ್ತ ಸೈನಿಕರಿಗೆ, ಹುತಾತ್ಮ ಸೈನಿಕರ ಕುಟುಂಬದವರಿಗೆ ಹಾಗೂ ಶೈಕ್ಷಣಿಕವಾಗಿ ಸಾಧನೆ ಮಾಡಿದ ಹುತಾತ್ಮ ಸೈನಿಕರ ಮಕ್ಕಳು ಹಾಗೂ ಇತರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಲಾಯಿತು. ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕೇರಳ-ಕರ್ನಾಟಕ ವಲಯದ ಜನರಲ್ ಆಫಿಸರ್ ಕಮಾಂಡೆಂಟ್ ಕೆ.ಜೆ.ಬಾಬು ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಸೇನಾಧಿಕಾರಿಗಳು ಇತರರು ಇದ್ದರು.

See also  ಬೆಂಗಳೂರಲ್ಲಿ ಹೆಣ್ಮಕ್ಕಳಿಬ್ಬರು ವಿವಾಹವಾದರು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು