News Kannada
Monday, December 05 2022

ಕರ್ನಾಟಕ

ಜ.31-ಫೆ.1ರಂದು ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ

Photo Credit :

ಜ.31-ಫೆ.1ರಂದು ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ

ಮಡಿಕೇರಿ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗಿನ ಗಡಿಭಾಗ ನಿಡ್ತ ಗ್ರಾಮದಲ್ಲಿ ಮುಂಬರುವ ಜ.31 ಹಾಗೂ ಫೆ.1ರಂದು ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ  ನಡೆಯಲಿದೆ.

ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

ಸಭೆಯಲ್ಲಿ ಸಮ್ಮೇಳನದ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಗಿ, ಮೆರವಣಿಗೆ, ಕವಿಗೋಷ್ಠಿ, ವಿಚಾರ ಗೋಷ್ಠಿ, ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಾಗೂ ಸಾರ್ವಜನಿಕರಿಗೆ ಗ್ರಾಮೀಣ ಜನಪದ  ಆಟೋಟ ಸ್ಪರ್ಧೆ ಏರ್ಪಡಿಸುವ ಕುರಿತು ತೀರ್ಮಾನಿಸಲಾಯಿತು.

ಕುವೆಂಪು ರಸಪ್ರಶ್ನೆ: ರಾಷ್ಟ್ರಕವಿ ಕುವೆಂಪು ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಕುವೆಂಪು ಅವರ ಬದುಕು ಬರಹ ಕುರಿತಾಗಿ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲು ತೀರ್ಮಾನಿಸಲಾಯಿತು.

ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಈ ನಿಟ್ಟಿನಲ್ಲಿ ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸುವ ಬಗ್ಗೆ ನಿರ್ಧರಿಸಲಾಯಿತು.

ಡಿ21ರಂದು ಮಡಿಕೆರಿಯ ಅರಸು ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಿ, ತಾ.29ರಂದು ನಡೆಯುವ ಕುವೆಂಪು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸುವಂತೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಗೌರವ ಕಾರ್ಯದರ್ಶಿಗಳಾದ ಕೆ.ಎಸ್.ರಮೇಶ್, ಎನ್.ಎ. ಅಶ್ವಥ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ಸಮಿತಿ ನಿರ್ದೇಶಕರಾದ ಪ್ರಸನ್ನ, ಫಿಲಿಪ್ ವಾಸ್, ಲೋಕನಾಥ್ ಅಮೆಚೂರ್, ಕಚೇರಿ ಸಿಬ್ಬಂದಿ ಶ್ವೇತಾ ಇದ್ದರು.

See also  ಕಾಫಿ ಡೇ ಮಲ್ನಾಡ್ ಅಲ್ಟ್ರಾ ಮ್ಯಾರಥಾನ್ ಓಟದ ಸ್ಪರ್ಧೆ: ಯು.ಕೆ ಯ ಪೌಲ್ ಗಿಬ್ಲ್ರಿನ್ ಭರ್ಜರಿ ಗೆಲುವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು