News Kannada
Tuesday, December 06 2022

ಕರ್ನಾಟಕ

ಅಪೌಷ್ಟಿಕ ಮಕ್ಕಳನ್ನು ಪೌಷ್ಟಿಕ ಆಹಾರ ಪುನಃಶ್ಚೇತನ ಕೇಂದ್ರಕ್ಕೆ ಸೇರಿಸಿ: ಡಿ.ಜಿ.ಹಸಬಿ ನಿರ್ದೇಶನ

Photo Credit :

ಅಪೌಷ್ಟಿಕ ಮಕ್ಕಳನ್ನು ಪೌಷ್ಟಿಕ ಆಹಾರ ಪುನಃಶ್ಚೇತನ ಕೇಂದ್ರಕ್ಕೆ ಸೇರಿಸಿ: ಡಿ.ಜಿ.ಹಸಬಿ ನಿರ್ದೇಶನ

ಮಡಿಕೇರಿ: ಜಿಲ್ಲೆಯಲ್ಲಿನ ಅಪೌಷ್ಟಿಕ ಮಕ್ಕಳನ್ನು ಪತ್ತೆ ಹಚ್ಚಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿರುವ ಪೌಷ್ಟಿಕ ಪುನ:ಶ್ಚೇತನ ಕೇಂದ್ರಕ್ಕೆ(ಎನ್‍ಆರ್‍ಸಿ) ಸೇರಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸುವಂತಾಗಬೇಕು ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಿ.ಜಿ.ಹಸಬಿ ಅವರು ನಿರ್ದೇಶನ ನೀಡಿದ್ದಾರೆ.   

ನಗರದ ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ. ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.  

ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹಸಿವು ಮುಕ್ತ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 7 ಕೆ.ಜಿ. ಅಕ್ಕಿ ವಿತರಿಸುತ್ತಿದೆ. ಆದರೂ ಅಲ್ಲಲ್ಲಿ ಅಪೌಷ್ಟಿಕತೆಗೆ ತುತ್ತಾಗಿರುವ ಮಕ್ಕಳು ಕಂಡುಬರುತ್ತಿದ್ದು, ಇಂತಹ ಮಕ್ಕಳನ್ನು ಇತರ ಮಕ್ಕಳಂತೆ ಆರೋಗ್ಯಯುತವಾಗಿ ಕಾಪಾಡುವಂತಾಗಲು ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳನ್ನು ತೆರೆಯಲಾಗಿದ್ದು, ಇದನ್ನು ಬಳಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ವಿಶ್ವದ 197 ರಾಷ್ಟ್ರಗಳಲ್ಲಿ ಭಾರತ 107 ನೇ ಸ್ಥಾನದಲ್ಲಿದ್ದು, ನೆರೆ ರಾಷ್ಟ್ರಗಳ ಸಾಲಿನಲ್ಲಿದೆ. ಆದ್ದರಿಂದ ಯಾರೂ ಸಹ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಆಹಾರ ಭದ್ರತಾ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಿದೆ ಎಂದು ಅವರು ತಿಳಿಸಿದರು.

ನ್ಯಾಯಬೆಲೆ ಅಂಗಡಿಗಳು, ವಿದ್ಯಾರ್ಥಿ ನಿಲಯಗಳು ಹಾಗೂ ಅಂಗನವಾಡಿಗಳಿಗೆ ಸರ್ಕಾರ ಸಹಾಯಧನದಡಿ ಆಹಾರ ಪೂರೈಸುತ್ತಿದೆ. ಈ ಆಹಾರ ಸಮರ್ಪಕವಾಗಿ ತಲುಪಬೇಕು. ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರಬೇಕು. ಎಷ್ಟು ಬೇಕು ಅಷ್ಟನ್ನೂ ಮಾತ್ರ ಪೂರೈಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಗೋದಾಮಿನಲ್ಲಿ ಕೊಳೆಯುವಂತಾಗಬಾರದು ಎಂದು ಹಸಬಿ ಅವರು ಸೂಚಿಸಿದರು.

See also  ಕೊಡಗು ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು