News Kannada
Saturday, December 03 2022

ಕರ್ನಾಟಕ

ಪದವೀಧರ ಮತದಾರರ ನೋಂದಣಿ ಡಿ.23ರವರೆಗೂ ಕಾಲಾವಕಾಶ: ಡಿಸಿ

Photo Credit :

ಪದವೀಧರ ಮತದಾರರ ನೋಂದಣಿ ಡಿ.23ರವರೆಗೂ ಕಾಲಾವಕಾಶ: ಡಿಸಿ

ಕಾರವಾರ: ಪಶ್ಚಿಮ ಪದವೀಧರ ಮತ ಕ್ಷೇತ್ರದ ಮತದಾರರ ನೂತನ ನೋಂದಣಿ ಆರಂಭಗೊಂಡಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಮಾಡಲು ಡಿ.23ರವರೆಗೂ ಕಾಲಾವಕಾಶವಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2016 ನ.1ಕ್ಕಿಂತ ಮೊದಲು ಪದವಿ ಪಡೆದಿರುವ ಆರು ತಿಂಗಳಿಗೂ ಹೆಚ್ಚು ಒಂದೆಡೆ ವಾಸಿಸುತ್ತಿರುವ ಸಾಮಾನ್ಯ ನಿವಾಸಿಗಳು ಯಾವುದೇ ಗುರುತಿನ ಚೀಟಿ ಹೊಂದಿದ್ದರೇ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದಾಗಿದೆ ಎಂದರು.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಹೊಸ ಮತದಾರರ ಪಟ್ಟಿಯನ್ನು ಬಳಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಡಿ.7ರಂದು ಕರಡು ಪಟ್ಟಿ ಪ್ರಕಟಿಸಲಾಗಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಸಾವಿರ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದು, ಡಿ. 23ರೊಳಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರ ಮತದಾರರು ತಮ್ಮ ಹೆಸರು ನೋಂದಾಯಿಸಲು ಅವಕಾಶವಿದೆ ಎಂದರು.

ಉತ್ತರ ಕನ್ನಡ, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳು ಪಶ್ಚಿಮ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬರಲಿದ್ದು, ಕಳೆದ ಚುನಾವಣೆ ಸಂದರ್ಭದಲ್ಲಿ 16 ಸಾವಿರ ಮತದಾರರು ಪಟ್ಟಿಯಲ್ಲಿ ಹೆಸರು ನೋಂದಯಿಸಿದ್ದರು. ಈ ಹಿನ್ನೆಲೆಯಲ್ಲಿ ಮತದಾರರ ನೋಂದಣಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಸರ್ಕಾರದ ವಿವಿಧ ಇಲಾಖೆಗಳಾದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಕಾಲೇಜು ವಿಭಾಗದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ, ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗಳು ಹಾಗೂ ಸಂಘಟಿತ ಅಥವಾ ಅಸಂಘಟಿತ ವಲಯದಲ್ಲಿ ಪದವೀಧರರನ್ನು ನೋಂದಾಯಿಸಲು ಕಾರ್ಮಿಕ ಇಲಾಖೆ ಅದಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.

See also  ಧೀರಜ್ ಪೊಯ್ಯೆಕಂಡ ಅವರ ‘ಮಿತಿ’ ಕಾದಂಬರಿ ಬಿಡುಗಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು