News Kannada
Friday, December 02 2022

ಕರ್ನಾಟಕ

ಕಾಸರಗೋಡು: ತುಳು ವಿಚಾರ ಸಂಕಿರಣಕ್ಕೆ ಚಾಲನೆ

Photo Credit :

ಕಾಸರಗೋಡು: ತುಳು ವಿಚಾರ ಸಂಕಿರಣಕ್ಕೆ ಚಾಲನೆ

ಕಾಸರಗೋಡು:  ಕೇರಳ ತುಳು ಅಕಾಡಮಿ  ವತಿಯಿಂದ  ಎರಡು ದಿನಗಳ ರಾಷ್ಟ್ರೀಯ  ತುಳು  ವಿಚಾರ ಸಂಕಿರಣಕ್ಕೆ ಮಂಗಳವಾರ  ಕಾಸರಗೋಡಿನಲ್ಲಿ  ಚಾಲನೆ  ನೀಡಲಾಯಿತು.

ನಗರದ ಲಲಿತಾ ಕಲಾ ಸದನದಲ್ಲಿ ನಡೆದ ಸಮಾರಂಭದಲ್ಲಿ  ಸಂಸದ ರಾಜ್  ಮೋಹನ್ ಉಣ್ಣಿತ್ತಾನ್  ಚಾಲನೆ ನೀಡಿದರು.

ತುಳು ಭಾಷೆಯನ್ನೂ ಎಂಟನೇ ಪರಿಚ್ಛೇಧಕ್ಕೆ  ಸೇರ್ಪಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು . ಈ ಬಗ್ಗೆ ಈಗಾಗಲೇ ಸಂಸತ್ತಿನಲ್ಲಿ  ಗಮನಸೆಳೆದಿದ್ದು , ಇದಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದು  ಭರವಸೆ ನೀಡಿದರು.

ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಕಾಡೆಮಿಯ ತ್ರೈಮಾಸಿಕ ಪತ್ರಿಕೆ ‘ತೆಂಬೆರೆ’ಯ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿ ಜನವರಿ ತಿಂಗಳಲ್ಲಿ ಮಂಜೇಶ್ವರದಲ್ಲಿ ನಿರ್ಮಾಣಗೊಳ್ಳುತ್ತಿರುವ ತುಳು ಭವನದ ಉದ್ಘಾಟನೆ ನಡೆಯಲಿದೆ ಎಂದರು.

ಹಾವೇರಿ ಜನಪದ ವಿವಿಯ ನಿಕಟಪೂರ್ವ ಉಪಕುಲಪತಿ ಡಾ.ಚಿನ್ನಪ್ಪ ಗೌಡ ದಿಕ್ಸೂಚಿ ಭಾಷಣ ಮಾಡಿದರು. ಶಾಸಕ ಕೆ.ಕುಂಞಿರಾಮನ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಕೆ.ಆರ್.ಜಯಾನಂದ, ನಗರಸಭೆ ಸದಸ್ಯ ಅರುಣ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ತುಳು ವಿಚಾರಸಂಕಿರಣ ಸಮಿತಿ ಅಧ್ಯಕ್ಷ ಕೆ.ವಿ.ಕುಮಾರನ್ ಮಾಸ್ಟರ್, ಲೇಖಕಿ ರಾಜಶ್ರೀ ಟಿ.ರೈ ಮೊದಲಾದವರು ಉಪಸ್ಥಿತರಿದ್ದರು.

 

ಕಾರ್ಯಕ್ರಮ ಉದ್ಘಾಟನೆಗೆ ಮುನ್ನ ಗೋಳಿಯಡ್ಕ ಕನ್ಯಪ್ಪಾಡಿ ಚೋಮ ನಲಿಕೆ ಅವರಿಂದ ಆಟಿ ಕಳೆಂಜ ಪ್ರದರ್ಶನ ನಡೆಯಿತು.

ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಎಂ.ಸಾಲ್ಯಾನ್ ಸ್ವಾಗತಿಸಿದರು. ತುಳು ಅಕಾಡೆಮಿ ಸದಸ್ಯ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.

ಡಿ.18ರಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಮುಖ್ಯ ಅತಿಥಿಯಾಗಿರುವರು. ಮಾಜಿ ಶಾಸಕ ಸಿ.ಎಚ್.ಕುಂಞಂಬು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸುವರು. ಹಿರಿಯ ವಿದ್ವಾಂಸ ಮಲಾರ್ ಜಯರಾಮ ರೈ ಸಮಾರೋಪ ಭಾಷಣ ಮಾಡುವರು. ಎಣ್ಮಕಜೆ ಗ್ರಾಮ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷೆ ಆಯಿಷಾ ಎ.ಎ.ಪೆರ್ಲ,  ಜಿಲ್ಲಾ ವಾರ್ತಾ ಇಲಾಖೆ ಅಽಕಾರಿ ಮಧುಸೂದನನ್ ಎಂ., ಪಾರ್ತಿಸುಬ್ಬ ಯಕ್ಷಗಾನ ಕಲಾಕ್ಷೇತ್ರ ಮಾಜಿ ಅಧ್ಯಕ್ಷ ಎಂ.ಶಂಕರ ರೈ ಮಾಸ್ಟರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಯೋಗೀಶ್ ರಾವ್ ಚಿಗುರುಪಾದೆ, ತಾಲೂಕು ಗ್ರಂಥಾಲಯ ಮಂಡಳಿ ಕಾರ್ಯದರ್ಶಿ ಪಿ.ದಾಮೋದರನ್ ಉಪಸ್ಥಿತರಿರುವರು.

See also  ಗುಂಡಿಕ್ಕಿಕೊಂಡು ಕಾಫಿ ವ್ಯಾಪಾರಿ ಆತ್ಮಹತ್ಯೆಗೆ ಶರಣು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು