News Kannada
Tuesday, December 06 2022

ಕರ್ನಾಟಕ

ನಿಧಾನ ಗತಿಯ ಕಾಮಗಾರಿ ಮಾಡುವ ಗುತ್ತಿಗೆದಾರರು ಕಪ್ಪುಪಟ್ಟಿಗೆ: ಶಾಸಕ ಅಪ್ಪಚ್ಚು ರಂಜನ್

Photo Credit :

ನಿಧಾನ ಗತಿಯ ಕಾಮಗಾರಿ ಮಾಡುವ ಗುತ್ತಿಗೆದಾರರು ಕಪ್ಪುಪಟ್ಟಿಗೆ: ಶಾಸಕ ಅಪ್ಪಚ್ಚು ರಂಜನ್

ಮಡಿಕೇರಿ: ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಕಾಮಗಾರಿಯಲ್ಲಿ ತ್ವರಿತಗತಿ ಮತ್ತು ಗುಣಮಟ್ಟ ಕಾಯ್ದುಕೊಳ್ಳದಿದ್ದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಎಚ್ಚರಿಕೆ ನೀಡಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಮತ್ತು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರುಗಳು ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಸಾರ್ವಜನಿಕರ ಸಮಸ್ಯೆ ಆಲಿಸುವುದರ ಜೊತೆಗೆ ದುರವಸ್ಥೆಯಲ್ಲಿರುವ ರಸ್ತೆಗಳು, ಒಳಚರಂಡಿ, ಮಡಿಕೇರಿ ಸ್ಕ್ವೇರ್ ಯೋಜನೆಗಳನ್ನು ಪರಿಶೀಲನೆ ನಡೆಸಿದರು.

ಗುಂಡಿಬಿದ್ದ ರಸ್ತೆಗಳು ಮತ್ತು ಕೆಲ ಬಡಾವಣೆಗಳಲ್ಲಿ ಉಲ್ಬಣಗೊಂಡಿರುವ ಒಳಚರಂಡಿ ಸಮಸ್ಯೆಗಳನ್ನು ವೀಕ್ಷಿಸಿದರು. ಸಾರ್ವಜನಿಕರಿಗೆ ರಸ್ತೆ, ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಬೇಕು. ಅವ್ಯವಸ್ಥೆಯಿಂದ ಕೂಡಿರುವ ಮತ್ತು ಸಾರ್ವಜನಿಕ ದೂರುಗಳಿರುವ ಕಾಮಗಾರಿಗಳನ್ನು ಖುದ್ದು ಪರಿಶೀಲನೆ ನಡೆಸಿ, ಅವುಗಳನ್ನು ದುರಸ್ಥಿಪಡಿಸುವಂತೆ ಅಪ್ಪಚ್ಚು ರಂಜನ್ ನಗರಸಭೆ ಪೌರಾಯುಕ್ತ ರಮೇಶ್‍ಗೆ ಸೂಚಿಸಿದರು.

 ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಪ್ಪಚ್ಚು ರಂಜನ್, ನಗರದ ಖುದ್ದು ಭೇಟಿಯ ಮೂಲಕ ನೈಜ್ಯ ಸಮಸ್ಯೆ ಅರಿಯುವ ಪ್ರಯತ್ನ ಮಾಡಲಾಗುತ್ತಿದ್ದು, ಇದೀಗ 2ನೇ ಬಾರಿಗೆ ನಗರ ಪ್ರದಕ್ಷಿಣೆ ಹಮ್ಮಿಕೊಳ್ಳಲಾಗಿದೆ. ನಗರದ ಸ್ಥಿತಿಗತಿಯ ಬಗ್ಗೆ ಚಿತ್ರಣ ಪಡೆದುಕೊಂಡಿದ್ದೇನೆ. ನೈಜ್ಯ ಸಮಸ್ಯೆಯನ್ನು ಸಂಬಂಧಪಟ್ಟ ಇಂಜಿನಿಯರ್‍ಗಳು ಹಾಗೂ ಗುತ್ತಿಗೆದಾರರು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಗುಣಮಟ್ಟ ಜತೆಗೆ ತ್ವರಿತವಾಗಿ ಕೆಲಸ ನಿರ್ವಹಿಸಬೇಕು. ಗುತ್ತಿಗೆದಾರರು ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ನಿರ್ಧಾಕ್ಷಿಣ್ಯವಾಗಿ ಕಪ್ಪುಪಟ್ಟಿಗೆ ಸೇರಿಸಿ, ರಾಜ್ಯದಲ್ಲಿಯೂ ಕೆಲಸ ನೀಡದಂತೆ ಮಾಡಲಾಗುವುದು ಎಂದು ಅಪ್ಪಚ್ಚು ರಂಜನ್ ಎಚ್ಚರಿಸಿದರು.

ನಗರದಲ್ಲಿ ಹದಗೆಟ್ಟಿರುವ ರಸ್ತೆಗಳಿಗೆ ಯುಜಿಡಿ ಮೂಲ ಕಾರಣವಾಗಿದೆ. ರೂ.29 ಕೋಟಿಯ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ. ಇದೀಗ ಪೂರ್ಣಗೊಂಡಿರುವ ಕಾಮಗಾರಿಗಳು ನಿರ್ವಹಣೆಯ ಕೊರತೆ ಎದುರಿಸುತ್ತಿದ್ದು ಇಲಾಖೆ ಈ ಬಗ್ಗೆ ಮುತುವರ್ಜಿ ವಹಿಸಬೇಕು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ದೇಶನ ನೀಡಲಾಗುವುದು ಎಂದರು. ನಗರದ ಹೃದಯ ಭಾಗದಲ್ಲಿ ಉದ್ದೇಶಿತ ಮಡಿಕೇರಿ ಸ್ಕ್ವೇರ್ ಯೋಜನೆ ಸ್ಥಗಿತಗೊಂಡಿದೆ. ಆಡಳಿತ ಪ್ರಕ್ರಿಯೆಗಳಿಂದ ಕಾಮಗಾರಿಯನ್ನು ತಡೆ ಹಿಡಿಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ 4ಜಿ ವಿನಾಯಿತಿ ನೀಡುವ ಅಥವಾ ಟೆಂಡರ್ ಬಗ್ಗೆ ನಿರ್ಧಾರ ತೆಗೆದು ಕೊಳ್ಳಲಾಗುವುದು. ಉದ್ದೇಶಿತ ಯೋಜನೆ ಸಾಕಾರಗೊಳ್ಳಬೇಕಿದ್ದು, ಈ ನಿಟ್ಟಿನಲ್ಲಿ ಆಡಳಿತ ಯಂತ್ರ ವೇಗವಾಗಬೇಕು ಎಂದು ಅಭಿಪ್ರಾಯಪಟ್ಟರು. ಸ್ಥಳೀಯ ನಗರಸಭೆ ಆಡಳಿತ ಇಲ್ಲದೆ ಒಂದೂವರೆ ವರ್ಷ ಕಳೆದಿದ್ದು, ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯೂ ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಡಾವಣೆಗಳಲ್ಲಿ ಏರ್ಪಟ್ಟಿರುವ ಚರಂಡಿ ಸಮಸ್ಯೆಗೆ ಜನರು ಕೂಡ ಪರೋಕ್ಷವಾಗಿ ಕಾರಣವಾಗಿದ್ದಾರೆ. ನಿಯಮದ ಪ್ರಕಾರ ಜಾಗ ನೀಡದಿರುವುದು, ಚರಂಡಿಯಿಂದ ನೀರು ಸರಾಗವಾಗಿ ಹರಿಯದಿರುವುದು ಸಮಸ್ಯೆಗೆ ಕಾರಣವಾಗಿದೆ. ಶುಚಿತ್ವಕ್ಕೆ ಮೊದಲ ಆಧ್ಯತೆ ನೀಡಬೇಕಿದ್ದು, ಆಡಳಿತದೊಂದಿಗೆ ಜನತೆ ಕೈಜೋಡಿಸಬೇಕು ಎಂದು ಶಾಸಕ ರಂಜನ್ ಮನವಿ ಮಾಡಿದರು. ಕಾವೇರಿ ಕಲಾಕ್ಷೇತ್ರಕ್ಕೆ ಬಿಡುಗಡೆಯಾಗಿರುವ ರೂ.1 ಕೋಟಿ ಹಣದಲ್ಲಿ ಅಭಿವೃದ್ಧಿ ಕಾರ್ಯ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.

See also  ನಟಿ ವಿಜಯಲಕ್ಷ್ಮಿಗೆ ಕೋವಿಡ್-19 ಪಾಸಿಟಿವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು