News Kannada
Saturday, December 03 2022

ಕರ್ನಾಟಕ

ಸಿಎಎ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರ ಪ್ರತಿಭಟನೆ

Photo Credit :

ಸಿಎಎ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರ ಪ್ರತಿಭಟನೆ

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಈದ್ಗಾ ಮೈದಾನದಲ್ಲಿ ಮಹಿಳೆಯರು ಬೃಹತ್ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‍ಆರ್‍ಸಿ ಕಾಯ್ದೆಯನ್ನು ಶಿವಮೊಗ್ಗ ವುಮೆನ್ಸ್ ಬಳಗವು ಖಂಡಿಸುತ್ತದೆ, ಮುಸ್ಲಿಂ ಸಮುದಾಯವು ಎನ್‍ಆರ್ ಸಿ ಹಾಗೂ ಸಿಎಎ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಹಾಗೂ ತಕ್ಷಣವೇ ಕಾಯ್ದೆ ಹಿಂಪಡೆಯಬೇಕು ಎಂದು ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಈ ಕಾಯ್ದೆಯು ರಾಷ್ಟ್ರಕ್ಕೆ ಮಾರಕ ಮತ್ತು ಸಂವಿಧಾನ ವಿರೋಧಿಯಾಗಿದೆ. ಜಾತಿ ಆಧಾರದಲ್ಲಿ ದೇಶವನ್ನೇ ಇಬ್ಭಾಗಿಸುವ ಹುನ್ನಾರವಾಗಿದ್ದು, ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ಕಾನೂ ನು ರಚಿಸಿರುವುದು ಕಂಡುಬರು ತ್ತದೆ. ಇದು ಸಂವಿಧಾನದ ಅನುಚ್ಚೇ ದ 14, 19, 21ರ ಪ್ರಕಾರ ವಿರುದ್ದವಾಗಿದೆ. ಈ ಮೂಲಕ ಬಿಜೆಪಿ ಸರ್ಕಾರ ತನ್ನ ಹಿಂದುತ್ವ ಅಜೆಂಡಾವನ್ನು ರಾಷ್ಟ್ರದ ನಾಗರಿಕರ ಮೇಲೆ ಒತ್ತಾ ಯಪೂರ್ವ ಕವಾಗಿ ಹೇರಲು ಹೊರಟಿದೆ ಎಂದು ಪ್ರತಿಭಟನಾನಿರತ ಮಹಿಳೆಯರು ದೂರಿದರು.

ಸ್ಟೂಡೆಂಟ್ ಯುನೈಟೆಡ್ ಮೂವ್‍ಮೆಂಟ್:  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸ್ಟೂಡೆಂಟ್ ಯುನೈಟೆಡ್ ಮೂವ್ ಮೆಂಟ್ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಸಿತು. ಇದೊಂದು ಸಂವಿಧಾನ ವಿರೋಧಿಯಾಗಿದೆ. ದೇಶದ ಕೆಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇದರ ವಿರುದ್ದ ಹೋರಾಟ ಮಾಡಿದರೆ ಅವರ ಮೇಲೆಯೇ ಗುಂಡುಹಾರಿಸಿ ಮಾರ ಣಾಂತಿಕ ಹಲ್ಲೆ ಮಾಡಲಾಗಿದೆ ಇದು ಖಂಡನೀಯ. ಈ ಕರಾಳ ಕಾನೂ ನನ್ನು ವಾಪಾಸ್ ತೆಗೆದುಕೊಳ್ಳಬೇಕು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿ ಸಿದರು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಯುವಕರು ಸೇರಿದ್ದರು.

See also  ಕೊಲೆಯಾದ ಕೃಪೇಶ್-ಶರತ್ ಲಾಲ್ ಚಿತಾಭಸ್ಮದ ಸ್ಮೃತಿ ಯಾತ್ರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು