News Kannada
Thursday, December 01 2022

ಕರ್ನಾಟಕ

ಮಲೆ ಮಹದೇಶ್ವರಬೆಟ್ಟದಲ್ಲಿ ಅಂಗಡಿ, ಮಳಿಗೆಗಳ ಮೇಲೆ ದಾಳಿ

Photo Credit :

ಮಲೆ ಮಹದೇಶ್ವರಬೆಟ್ಟದಲ್ಲಿ ಅಂಗಡಿ, ಮಳಿಗೆಗಳ ಮೇಲೆ ದಾಳಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ದೇಗುಲದ ವತಿಯಿಂದ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದಲ್ಲಿ ಹೊಟೇಲ್ ಹಾಗೂ ಚಹಾ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳ ಮೇಲೆ ಪ್ರಾಧಿಕಾರದ ಅಧಿಕಾರಿಗಳು ದಾಳಿ ನಡೆಸಿ ಗ್ಯಾಸ್ ಸಿಲಿಂಡರ್ ಹಾಗೂ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಐದಾರು ವರ್ಷಗಳ ಹಿಂದೆ ಭಕ್ತರ ಅನುಕೂಲಕ್ಕಾಗಿ ಅಂಗಡಿ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಇಲ್ಲಿ ಪೂಜಾ ಸಾಮಗ್ರಿ ಹಾಗೂ ಇನ್ನಿತರ ಅಗತ್ಯ ವಸ್ತುಗಳನ್ನು ಮಾತ್ರ ಮಾರಾಟ ಮಾಡಲು ಗುತ್ತಿಗೆಯುನ್ನು ನೀಡಲಾಗಿತ್ತು. ಆದರೆ ಗುತ್ತಿಗೆ ಪಡೆದವರಲ್ಲಿ ಕೆಲವರು ಹೋಟೆಲ್ ನಡೆಸುತ್ತಿದ್ದರಲ್ಲದೆ, ಇನ್ನು ಕೆಲವರು ಚಹಾ ತಯಾರಿಸುತ್ತಿದ್ದರು. ಈ ಬಗ್ಗೆ ಸಂಬಂಧಪಟ್ಟವರಿಗೆ ಪ್ರಾಧಿಕಾರದ ವತಿಯಿಂದ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೂ ಹೋಟೆಲ್ ಹಾಗೂ ಚಹಾ ವ್ಯಾಪಾರವನ್ನು ಮುಂದುವರಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂಗಡಿಗಳ ಮೇಲೆ ದಾಳಿ ನಡೆಸಿ ಗ್ಯಾಸ್ ಸಿಲಿಂಡರ್‍ ಗಳನ್ನು ಪಡೆದುಕೊಂಡರಲ್ಲದೆ, ಟೀ ಅಂಗಡಿಗಳಲ್ಲಿ ಅಳವಡಿಸಿದ್ದ ವಸ್ತುಗಳನ್ನು ತೆರವುಗೊಳಿಸಿದರು. ಬಳಿಕ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ವಾಪಸ್ ನೀಡಲಾಯಿತು.

See also  ಸ್ವಾಮೀಜಿಗೆ ಮುಸ್ಲಿಂ ವೈದ್ಯರಿಂದ ಚಿಕಿತ್ಸೆ: ಡಿಕೆಶಿ ಹೇಳಿಕೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು