News Kannada
Tuesday, November 29 2022

ಕರ್ನಾಟಕ

ವೀರಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ - 1 min read

Photo Credit :

ವೀರಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ

ಮಡಿಕೇರಿ: ಭಾರತ-ಪಾಕ್ ನಡುವೆ 1965 ರಲ್ಲಿ ನಡೆದ ಯುದ್ಧದಲ್ಲಿ ಶತ್ರು ರಾಷ್ಟ್ರದ ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದ ಕೊಡಗಿನ ವೀರಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಆರು ಮೂಕ್ಕಾಲು ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಸಂಬಂಧ ನಗರದ ದೇವಯ್ಯ ವೃತ್ತದಲ್ಲಿ ಶುಕ್ರವಾರ ಭೂಮಿಪೂಜೆ ನೆರವೇರಿಸಲಾಯಿತು.

ಅಜ್ಜಮಾಡ ಕುಟುಂಬಸ್ಥರು, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಮೆಮೋರಿಯಲ್ ಟ್ರಸ್ಟ್, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಮತ್ತು ಕೊಡವ ಮಕ್ಕಡ ಕೂಟ ಆಶ್ರಯದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಪ್ರತಿಮೆ ತಲೆಎತ್ತಲಿರುವ ಜಾಗದಲ್ಲಿ ಇರುವ ಹೈ ಮಾಸ್ಕ್ ದೀಪವನ್ನು ನಾಳೆಯೇ ತೆರವುಗೊಳಿಸಬೇಕು, ನಾಳೆಯಿಂದಲೇ ಇಲ್ಲಿ ಪ್ರತಿಮೆ ನಿರ್ಮಾಣ ಸಂಬಂಧ ಕಾಮಗಾರಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಮೊಮೇರಿಯಲ್ ಟ್ರಸ್ಟ್‍ನ ಅಜ್ಜಮಾಡ ಕಟ್ಟಿ ಮಂದಯ್ಯ, ನಿವೃತ್ತ ಏರ್ ಮಾರ್ಷಲ್ ನಂದಾ ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷ ನಿವೃತ್ತ ಕರ್ನಲ್ ಕಂಡಂತ್ರಂಡ ಸುಬ್ಬಯ್ಯ, ಸಂಚಾಲಕ ನಿವೃತ್ತ ಮೇಜರ್ ಬಿದ್ದಂಡ ನಂಜಪ್ಪ, ಅಜ್ಜಮಾಡ ಕುಟುಂಬದ ಅಧ್ಯಕ್ಷ ಲವ ಕುಶಾಲಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ ಅಯ್ಯಪ್ಪ, ಮಾಜಿ ಸೈನಿಕ, ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ನಗರಸಭೆ ಇಂಜಿನಿಯರ್ ನಾಗರಾಜ್, ಅಜ್ಜಮಾಡ ಕುಟುಂಬಸ್ಥರಾದ ಜಯ, ರಮೇಶ್, ಕಟ್ಟಿ, ಮಂದಯ್ಯ, ಟಿ. ಚೆಂಗಪ್ಪ, ಜಿ.ಬೋಪಯ್ಯ, ಯು.ರೇಣು, ರಾಜು ನಂಜಪ್ಪ, ನಿವೃತ್ತ ಸೇನಾಧಿಕಾರಿಗಳು, ಮಾಜಿ ಸೈನಿಕರು ಮತ್ತಿತರರು ಇದ್ದರು.

See also  ಮಳೆಹಾನಿ ಪ್ರದೇಶಗಳಿಗೆ ಡಾ.ವೀರೇಂದ್ರ ಹೆಗ್ಗಡೆ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು