News Kannada
Thursday, December 01 2022

ಕರ್ನಾಟಕ

ನಾಳೆ ರಾಷ್ಟ್ರವ್ಯಾಪಿ ಮುಷ್ಕರ : ಸಿಐಟಿಯು ನೇತೃತ್ವದ ಕಾರ್ಮಿಕ ಸಂಘಟನೆಗಳ ಬೆಂಬಲ - 1 min read

Photo Credit :

ನಾಳೆ ರಾಷ್ಟ್ರವ್ಯಾಪಿ ಮುಷ್ಕರ : ಸಿಐಟಿಯು ನೇತೃತ್ವದ ಕಾರ್ಮಿಕ ಸಂಘಟನೆಗಳ ಬೆಂಬಲ

ಮಡಿಕೇರಿ: ದೇಶದ ದುಡಿಯುವ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಜ.8ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು)ನ ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಮಹಾದೇವ ಹಾಗೂ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಅವರುಗಳು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಮುಷ್ಕರ ನಡೆಸಲಾಗುತ್ತಿದ್ದು, ಜಿಲ್ಲೆಯ, ತೋಟ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಬಿಸಿಯೂಟ ನೌಕರರೂ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಧರಣಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದರು.

ಮುಷ್ಕರಕ್ಕೆ ಬೆಂಬಲ ನೀಡುವಂತೆ ಈಗಾಗಲೇ ಚೇಂಬರ್ ಆಫ್ ಕಾಮರ್ಸ್, ಖಾಸಗಿ ಬಸ್ ಮಾಲಕರು, ಆಟೋ ಚಾಲಕರು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರಲ್ಲಿ ಮನವಿ ಮಾಡಲಾಗಿದೆ ಎಂದು ಹೇಳಿದ ಪ್ರಮುಖರು, ಕೇಂದ್ರ ಸರಕಾರದ ನೀತಿಗಳನ್ನು ವಿರೋಧಿಸುವ ಪ್ರತಿಯೊಬ್ಬರೂ ಈ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಮಿಕರಿಗೆ ರಾಷ್ಟ್ರೀಯ ಸಮಾನ ಕನಿಷ್ಟ ವೇತನವನ್ನು 21 ಸಾವಿರ ರೂ.ಗಳಿಗೆ ನಿಗದಿ ಮಾಡಬೇಕು. ಕಾರ್ಪೋರೇಟ್ ಬಂಡವಾಳದ ಪರವಾದ ಮತ್ತು ಕಾರ್ಮಿಕ ವಿರೋಧಿಯಾದ ಕಾರ್ಮಿಕ ಕಾನೂನುಗಳ ಸಂಹಿತೀಕರಣ ಕೈಬಿಡಬೇಕು, ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಎಲ್ಲರಿಗೂ ಸರಕಾರದಿಂದಲೇ ಕನಿಷ್ಟ 10 ಸಾವಿರ ರೂ.ಗಳ ಖಾತ್ರಿ ಪಿಂಚಣಿ ಜಾರಿ ಮಾಡಬೇಕು. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅನುದಾನ ನೀಡಬೇಕು ಮತ್ತು  ಶಾಸನಬದ್ಧ ಭವಿಷ್ಯ ನಿಧಿ ಮತ್ತು ಪಿಂಚಣಿ ನೀಡಬೇಕು ಎಂಬ ಬೇಡಿಕೆಗಳನ್ನು ಈ ಸಂದರ್ಭ ಸರಕಾರಗಳ ಮುಂದಿಡಲಾಗುವುದು ಎಂದು ಅವರು ಹೇಳಿದರು.

ಗ್ರಾಮೀಣ ಮತ್ತು ನಗರದ ಎಲ್ಲಾ ಕುಟುಂಬಗಳನ್ನೊಳಗೊಂಡ ಸಮರ್ಪಕವಾದ ಉದ್ಯೋಗ ಖಾತ್ರಿ ಕಾಯ್ದೆ ಜಾರಿಗೊಳಿಸಬೇಕು. ಹೆಚ್ಚಿನ ದಇನಗಳ ಕೆಲಸ ಮತ್ತು ಬಜೆಟ್ ಹೆಚ್ಚಳದೊಂದಿಗೆ ಗ್ರಾಮೀಣ ಯದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಬೇಕು ಹಾಗೂ ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೆ ತರಬೇಕು.  ಡಾ. ಸ್ವಾಮಿನಾಥನ್ ಶಿಫಾರಸ್ಸಿನಂತೆ ಎಲ್ಲಾ ಕೃಷಿ ಉತ್ಪನ್ನಗಳಿಗೆ ಸೂಕ್ತವಾದ ಸಂಗ್ರಹ ಸೌಲಭ್ಯದೊಂದಿಗೆ ಬೆಂಬಲ ಬೆಲೆ ನಿಗದಿ ಮಾಡಬೇಕು, ರೈತರ ಮತ್ತು ಕೂಲಿ ಕಾರ್ಮಿಕರ ಸಾಲ ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.

See also  ನನ್ನ ರಾಜೀನಾಮೆಯಿಂದ ಒಳಮೀಸಲಾತಿ ಅನುಷ್ಠಾನವಾಗುವುದಾದರೆ ನಾನು ರೆಡಿ: ಆಂಜನೇಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು