News Kannada
Thursday, December 01 2022

ಕರ್ನಾಟಕ

ಹೆಚ್ಡಿಕೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ತಡೆ: ಡಾ.ಕೆ.ಅನ್ನದಾನಿ ಆರೋಪ - 1 min read

Photo Credit :

ಹೆಚ್ಡಿಕೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ತಡೆ: ಡಾ.ಕೆ.ಅನ್ನದಾನಿ ಆರೋಪ

ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಳವಳ್ಳಿ ಕ್ಷೇತ್ರಕ್ಕೆ ಬಿಡುಗಡೆ ಮಾಡಲಾದ 1300 ಕೋಟಿ ರೂ. ಅನುದಾನದಲ್ಲಿ 300ರಿಂದ 400 ಕೋಟಿ ರೂ. ಹಣದವರೆಗೆ ಬಿಜೆಪಿ ಸರ್ಕಾರ ತಡೆಯೊಡ್ಡಿದೆ ಎಂದು ಶಾಸಕ ಡಾ.ಕೆ.ಅನ್ನದಾನಿ ಆರೋಪಿಸಿದರು.

ಹನಿ ನೀರಾವರಿ ಯೋಜನೆಯ 200 ಕೋಟಿ ರೂ. ಭಾರೀ ನೀರಾವರಿ ಯೋಜನೆಗೆ ಸೇರಿದ 20 ಕೋಟಿ ರೂ., ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ 10 ಕೋಟಿ ರೂ. ಹಣವನ್ನು ತಡೆಹಿಡಿಯಲಾಗಿದೆ. ಗ್ರಾಮೀಣಾಭಿವೃದ್ಧಿಗೆ ನೀಡಲಾಗಿದ್ದ 10 ಕೋಟಿ ರೂ. ಹಣವನ್ನು ತಡೆಹಿಡಿದಿರುವುದಕ್ಕೆ ಸಚಿವ ಈಶ್ವರಪ್ಪನವರನ್ನು ಪ್ರಶ್ನಿಸಿದಾಗ 3 ಕೋಟಿ ರೂ.ಕೊಟ್ಟು ಕೈ ತೊಳೆದುಕೊಂಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನೀರಾವರಿ ಇಲಾಖೆ ಅಧಿಕಾರಿಗಳು ನಿಗದಿತ ಸಮಯದಲ್ಲಿ ಸಮಗ್ರ ಯೋಜನಾ ವರದಿಯನ್ನು ರೂಪಿಸಿಕೊಡದೆ ವಿಳಂಬ ಮಾಡುತ್ತಿದ್ದಾರೆ. ವಿರೋಧ ಪಕ್ಷಕ್ಕೆ ಸೇರಿದವನೆಂಬ ಕಾರಣಕ್ಕೆ ನಿರ್ಲಕ್ಷಿಸುತ್ತಿದ್ದಾರೆ. ಶಾಸಕನಾಗಿ ಅಧಿಕಾರಿಗಳ ಮೇಲೆ ಸಾಕಷ್ಟು ಒತ್ತಡ ಹೇರುತ್ತಿದ್ದರೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ವಿಶ್ವೇಶ್ವರಯ್ಯ ನಾಲೆ, ಸಂಪರ್ಕ ನಾಲೆಗಳ ಆಧುನೀಕರಣ, ಹೆಬ್ಬಕವಾಡಿ ಅಚ್ಚುಕಟ್ಟು ಬೈಪಾಸ್ ನಾಲೆ ಅಭಿವೃದ್ಧಿ, ರಾಜ್ಯ ಹೆದ್ದಾರಿ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿವೆ. ಕೆಲವೊಂದು ಸಮಗ್ರ ಯೋಜನಾ ವರದಿ ತಯಾರಿಕಾ ಹಂತದಲ್ಲಿವೆ. ಮತ್ತೆ ಕೆಲವು ಟೆಂಡರ್ ಪ್ರಕ್ರಿಯೆ ಹಂತದಲ್ಲಿವೆ. ಬಿಡುಗಡೆಯಾದ ಹಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ ಎಂದರು.

See also  ಬೈಕ್‌ ಗೆ ಅಡ್ಡ ಬಂದ ಜಿಂಕೆ ಸಾವು: ಸವಾರ ಗಂಭೀರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು