News Kannada
Saturday, November 26 2022

ಕರ್ನಾಟಕ

ಬೆಂಗಳೂರಿನಿಂದ ರಾಯಚೂರಿಗೆ ಆಗಮಿಸುವವರಿಗೆ ಕಡ್ಡಾಯ ವೈದ್ಯಕೀಯ ತಪಾಸಣೆ - 1 min read

Photo Credit :

 ಬೆಂಗಳೂರಿನಿಂದ ರಾಯಚೂರಿಗೆ ಆಗಮಿಸುವವರಿಗೆ ಕಡ್ಡಾಯ ವೈದ್ಯಕೀಯ ತಪಾಸಣೆ

ರಾಯಚೂರು: ಬೆಂಗಳೂರಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದ ಅಥವಾ ಇತರೆ ಕೆಲಸ ಕಾರ್ಯಗಳ ಮೇಲೆ ತೆರಳಿದ್ದ ಜಿಲ್ಲೆಯ ಜನರನ್ನು ಹಲವು ಬಸ್ಸುಗಳಲ್ಲಿ ಕರೆ ತರಲಾಗುತ್ತಿದೆ, ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಆಗಮಿಸುವವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ವ್ಯಕ್ತಿಗಳನ್ನು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಲಾಗುವುದು.

ಜಿಲ್ಲೆಗೆ ವಲಸೆ ಬಂದ ವ್ಯಕ್ಯಿಗಳನ್ನು ೧೪ ದಿನಗಳ ಹೋಂ ಕ್ವಾರಂಟೈನ್ ಗೆ ಒಳಡಿಸಲಾಗುತ್ತದೆ, ಒಂದು ವೇಳೆ ರೋಗ ಲಕ್ಷಣಗಳಾದ ಕೆಮ್ಮು, ನೆಗಡಿ, ಶೀತ, ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆ ಕಂಡುಬಂದಲ್ಲಿ ಸರಕಾರಿ ಕ್ವಾರಂಟೈನ್ ನಲ್ಲಿರಿಸಿ ನಿಗಾವಹಿಸಲಾಗುವುದು.

ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬಂದ ವ್ಯಕ್ತಿಗಳಿಗೆ ಠಸ್ಸೆ ಹಾಕಿಸಿ ೧೪ದಿನಗಳವರೆಗೆ ಮನೆಯಲ್ಲಿಯೇ ಇರಿಸಿ, ಮನೆಗೆ ಸ್ಟಿಕ್ಕರ್ ಅಂಟಿಸಲಾಗುವುದು ಮತ್ತು ಗ್ರಾಮ ಪಡೆಗಳ ಮೂಲಕ ನಿಗಾವಹಿಸುವುದು. ಪ್ರತಿ ದಿನ ವೈದ್ಯಾಧಿಕಾರಿಗಳು ವೈದ್ಯಕೀಯ ತಪಾಸಣೆ ಕೈಗೊಂಡು ವರದಿ ಸಲ್ಲಿಸುವರು.

ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ಕೃಷಿ ಕಾರ್ಮಿಕರು, ವಲಸೆ ಕಾರ್ಮಿಕರು, ಪ್ರವಾಸಿಗರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತು ಇತರೆ ವ್ಯಕ್ತಿಗಳ ಮೇಲೆ ನಿಗಾವಹಿಸಲು ಪೊಲೀಸ್, ವೈದ್ಯಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರಿಗೆ ನಿರ್ದೇಶನ ನೀಡಲಾಗಿದೆ.

ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳೊಂದಿಗೆ ಅವರ ಕುಟುಂಬ ಸದಸ್ಯರು ಹಾಗೂ ನೆರೆಹೊರೆಯವರು ಮತ್ತು ಅಲ್ಲಿನ ಗ್ರಾಮಸ್ಥರು ಸಂಪರ್ಕಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಹೋಂ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಯ ಗ್ರಾಮದ ಪೋಲೀಸ್ ಸಿಬ್ಬಂದಿಯು ಆ ಗ್ರಾಮಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ಕಾನೂನು ಉಲ್ಲಂಘನೆಯಾಗದಂತೆ ಪರಿಶೀಲನೆ ನಡೆಸುವರು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಬೈಕ್ ಗೆ ಬಸ್ ಡಿಕ್ಕಿ: ಇಬ್ಬರು ಗಂಭೀರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು