News Kannada
Thursday, December 01 2022

ಕರ್ನಾಟಕ

ಇಡೀ ಸಮಾಜ ಕೊರೋನಾ ವಿರುದ್ಧ ಹೋರಾಡಬೇಕು: ಡಿಸಿ - 1 min read

Photo Credit :

ಇಡೀ ಸಮಾಜ ಕೊರೋನಾ ವಿರುದ್ಧ ಹೋರಾಡಬೇಕು: ಡಿಸಿ

ಮಂಡ್ಯ: ವಿಶ್ವವನ್ನು ಕಾಡುತ್ತಿರುವ ಮಾರಕ ಕೊರೋನಾ ಸೋಂಕಿನ ಹೋರಾಟವಲ್ಲ, ಇದೊಂದು ವ್ಯವಸ್ಥಿತವಾದ ಸಂಚಿನ ವಿರುದ್ಧ ಹೋರಾಟವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.

ತಾಲೂಕಿನ ಇಂಡುವಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಇಂಡುವಾಳು ಎಸ್. ಸಚ್ಚಿದಾನಂದ ಹಿತೈಷಿ ಬಳಗದ ವತಿಯಿಂದ ನಡೆದ ಆಶಾ, ಆರೋಗ್ಯ ಕಾರ್ಯಕರ್ತರು ಹಾಗೂ ಪೌರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ಮತ್ತು ಸಮವಸ್ತ್ರ ವಿತರಿಸಿ, ಅಭಿನಂದಿಸಿ ಮಾತನಾಡಿದ ಅವರು, ಇದು ಯಾರೋ ಒಬ್ಬರಿಗೆ ಬಂದಿರುವಂತಹ ಕಾಯಿಲೆಯಲ್ಲ, ಸಮಾಜ ಕೊರೊನಾ ವಿರುದ್ಧ ಹೋರಾಟ ಮಾಡುವ ಸ್ಥಿತಿ ನಿರ್ಮಾಣ ಆಗಬೇಕು. ಒಂದು ವರ್ಗದ ಮೂಲಕ ಕಾಯಿಲೆ ಹರಡುತ್ತಿಲ್ಲ. ಹಲವಾರು ಕಡೆಗಳಿಂದ ಕಾಯಿಲೆ ಹರಡುತ್ತಿದೆ. ಆದ್ದರಿಂದ ಕೊರೋನಾ ವಿರುದ್ಧ ವೈಜ್ಞಾನಿಕವಾಗಿ ಹೆಚ್ಚಿನ ಪ್ರಮಾಣದಲ್ಲಿ ಸಂಶೋಧನೆ ಆಗಬೇಕಾಗಿರುವುದರಿಂದ ಎಚ್ಚರಿಕೆಯಿಂದ ಎಲ್ಲರೂ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಸಮಾಜ ಸಂರಕ್ಷಣೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿಯಿಂದ ಹಿಡಿದು ಮುಖ್ಯಮಂತ್ರಿಗಳು, ಜಿಲ್ಲಾಡಳಿತ ಎಲ್ಲರೂ ಸಹ ತಮ್ಮ ಜೀವದ ಹಂಗನ್ನು ತೊರೆದು ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಕೊರೋನಾ ಹತ್ತಿಕ್ಕುವ ರೀತಿಯಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತರು ದೇಶದ ಅಭಿವೃದ್ಧಿಗೆ, ಸಮಾಜಕ್ಕೆ ಕೊಡುಗೆ ನೀಡುತ್ತಿದ್ದಾರೆ. ಅವರಿಗೆ ಆತ್ಮಸ್ಥೈರ್ಯ ಹೆಚ್ಚು ಮಾಡುವಂತಹ ಕೆಲಸ ಆಗಬೇಕು. ಆಶಾ ಕಾರ್ಯಕರ್ತೆಯರು ಕೊರೋನಾ ಸೈನಿಕರಿದ್ದಂತೆ. ಪ್ರತಿನಿತ್ಯ ತಮ್ಮ ಜೀವದ ಹಂಗನ್ನು ತೊರೆದು ಕೆಲಸ ಮಾಡುತ್ತಿದ್ದಾರೆ. ಎಷ್ಟೋ ಜನರಿಗೆ ಆಶಾ ಕಾರ್ಯಕರ್ತೆಯರ ಕೆಲಸ ಏನು ಎಂಬುದು ತಿಳಿದಿಲ್ಲ. ಅವರು ಸಂಜೀವಿನಿಯಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲರೂ ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತಿ ಗ್ರಾಮ ಮಟ್ಟದಲ್ಲಿ ದಿನದ 24 ಗಂಟೆಯೂ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು, ಶುಶ್ರೂಷಕರಿಗೆ ಆತ್ಮವಿಶ್ವಾಸ ತುಂಬಬೇಕು. ಅವರು ಮಾಡಿರುವ ಕೆಲಸ ಸಮಾಜಪೂರಕವಾದ ಕೆಲಸ ಎಂದರು.

See also  ಬೇಟೆಗಾರರು ಹಾಕಿದ್ದ ಉರುಳಿಗೆ ಬಿದ್ದ ಹುಲಿಯ ರಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು