News Kannada
Tuesday, November 29 2022

ಕರ್ನಾಟಕ

ಲಾಕ್‍ ಡೌನ್ ನಿಯಮ ಉಲ್ಲಂಘಿಸಿದರೆ ಕ್ರಮ : ಕೊಡಗು ಎಸ್ ಪಿ ಡಾ.ಸುಮನ್ ಎಚ್ಚರಿಕೆ - 1 min read

Photo Credit :

ಲಾಕ್‍ ಡೌನ್ ನಿಯಮ ಉಲ್ಲಂಘಿಸಿದರೆ ಕ್ರಮ : ಕೊಡಗು ಎಸ್ ಪಿ ಡಾ.ಸುಮನ್ ಎಚ್ಚರಿಕೆ

ಮಡಿಕೇರಿ: ಸಾರ್ವಜನಿಕರು ರಸ್ತೆಯಲ್ಲಿ ಅನಾವಶ್ಯಕವಾಗಿ ತಿರುಗಾಡದೆ, ಹೊರಹೋಗುವಾಗ ಮಾಸ್ಕ್ ಬಳಸಿ ಲಾಕ್‍ಡೌನ್ ವಿನಾಯಿತಿ ಮತ್ತು ಸಂಚಾರಿ ನಿಯಮಗಳನ್ನು ಗೌರವಿಸಿ ಸಹಕರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮನವಿ ಮಾಡಿದ್ದಾರೆ.

ಕೋವಿಡ್-19 ಲಾಕ್‍ಡೌನ್ ಹಿನ್ನೆಲೆ ಕೊಡಗು ಜಿಲ್ಲೆಯ ಜನರ ಆರ್ಥಿಕತೆಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ನಿಯಮ ಉಲ್ಲಂಘಿಸುವವರಿಂದ ದಂಡ ವಸೂಲಿ ಮಾಡದೆ ಕೇವಲ ಎಚ್ಚರಿಕೆ ನೀಡಲಾಗುತ್ತಿತ್ತು. ಆದರೆ ಇನ್ನು ಮುಂದೆ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುವ/ ವಾಹನ ಜಪ್ತಿ ಮಾಡುವ ಪ್ರಕ್ರಿಯೆ ಪೊಲೀಸ್ ಇಲಾಖೆ ವತಿಂದ ಕಟ್ಟುನಿಟ್ಟಾಗಿ ನಡೆಯಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆ ಹಸಿರು ವಲಯದಲ್ಲಿ ಇರುವುದರಿಂದ ಮೇ 5 ರಿಂದ ಮೇ 18 ರ ವರೆಗೆ ಜಿಲ್ಲೆಯಲ್ಲಿ ವಾರದ ಎಲ್ಲಾ ದಿನಗಳು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಷರತ್ತುಬದ್ದ ಲಾಕ್‍ಡೌನ್ ವಿನಾಯಿತಿ ನೀಡಲಾಗಿದೆ. ವಿನಾಯಿತಿ ಸಂಧರ್ಭದಲ್ಲಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸು ಧರಿಸದಿದ್ದಲ್ಲಿ ದಂಡ ವಿಧಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಮತ್ತು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಸಂಚಾರಿ ನಿಯಮದಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮೇ 5 ರಿಂದ 18 ರ ವರೆಗೆ ಜಿಲ್ಲೆಯಾದ್ಯಂತ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಕೋವಿಡ್-19 ಸಂಬಂಧ ವಿತರಿಸಲಾಗಿರುಇವ ಪಾಸ್ ಮತ್ತು ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿದಂತೆ ಎಲ್ಲಾ ರೀತಿಯ ಸಾರ್ವಜನಿಕ ಸಂಚಾರವನ್ನು ನಿಷೇಧಿಸಲಾಗಿದೆ.

ಈ ಸಂಧರ್ಭದಲ್ಲಿ ಅಗತ್ಯವಾಗಿ ಸಂಚರಿಸುವ ವಾಹನಗಳ ಜಪ್ತಿ/ ದಂಡ ವಸೂಲಿ ಮಾಡಲಾಗುವುದು. ಜಪ್ತಿಯಾದ ವಾಹನಗಳನ್ನು ಲಾಕ್‍ಡೌನ್ ನಂತರವೇ ಬಿಡುಗಡೆ ಮಾಡಲಾಗುವುದು ಮತ್ತು ಅನಗತ್ಯವಾಗಿ ಮನೆಯಿಂದ ಹೊರಬರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಸುಮನ್ ತಿಳಿಸಿದ್ದಾರೆ

See also  ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು