News Kannada
Wednesday, December 07 2022

ಕರ್ನಾಟಕ

ಭಟ್ಕಳದ ಕಂಟೈಮ್ಮೆಂಟ್ ವಲಯದಲ್ಲೇ ಸೋಂಕು: ಡಿಸಿ

Photo Credit :

ಭಟ್ಕಳದ ಕಂಟೈಮ್ಮೆಂಟ್ ವಲಯದಲ್ಲೇ ಸೋಂಕು: ಡಿಸಿ

ಕಾರವಾರ: ಜಿಲ್ಲೆಯ ಭಟ್ಕಳದಲ್ಲಿ ಶುಕ್ರವಾರ ಒಂದೇ ದಿನ 12 ಜನರಿಗೆ ಕೋವಿಡ್ ದೃಢಪಟ್ಟಿದೆ. ಆದರೆ ಕಂಟೈಮ್ಮೆಂಟ್ ವಲಯದಲ್ಲೇ ಸೋಂಕು ಕಾಣಿಸಿಕೊಂಡಿದ್ದ ಸಮುದಾಯಕ್ಕೆ ಹರಡಿಲ್ಲ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೇ 8 ರ ಬೆಳಿಗ್ಗೆಯ ಹೆಲ್ತ್ ಬುಲಿಟಿನ್ ಪ್ರಕಟಣೆ ಪ್ರಕಾರ ಭಟ್ಕಳ ಪಟ್ಟಣದಲ್ಲಿಯೇ 12 ಪ್ರಕರಣಗಳು ದೃಢಪಟ್ಟಿದೆ. ಈ ಹನ್ನೆರಡೂ ಜನರು, ಮೇ 6 ಕ್ಕೆ ಸೋಂಕು ಪತ್ತೆಯಾದ ಯುವತಿಯ ಸಂಪರ್ಕದಿಂದ ಸೋಂಕಿತರಾಗಿದ್ದಾರೆ. ಈ ಪೈಕಿ 10 ಜನ ಯುವತಿಯ ಕುಟುಂಬದವರಾಗಿದ್ದಾರೆ. ಉಳಿದಂತೆ ಸ್ನೇಹಿತೆ ಮತ್ತು ಇನ್ನೊಬ್ಬರು ಪಕ್ಕದ ಮನೆಯವರಾಗಿದ್ದಾರೆ.

ಸೋಂಕಿನ ಮೂಲ ಪತ್ತೆಯಾಗಿದ್ದರಿಂದ ಸಮುದಾಯಕ್ಕೆ ಹರಡಿಲ್ಲ ಎಂಬುದು ಖಚಿತವಾಗಿದೆ. ಕೋವಿಡ್ ಸೋಂಕು ಈವರೆಗೆ ಜಿಲ್ಲೆಯ ಕಂಟೈನ್ ಮೆಂಟ್ ಪ್ರದೇಶವಾದ ಭಟ್ಕಳದಲ್ಲಿ ಇದ್ದು ಉಳಿದ ಪ್ರದೇಶಗಳ ಜನರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಭಟ್ಕಳ ನಗರದಿಂದ ಮೂರು ಕುಟುಂಬಗಳು ಮಂಗಳೂರಿನ ನ್ಯೂರೋ ಆಸ್ಪತ್ರೆಗೆ ಆರೋಗ್ಯ ಚಿಕಿತ್ಸೆಗೆ ಹೋಗಿ ಬಂದಿವೆ ಎಂಬ ಮಾಹಿತಿ ದೊರೆತಿದೆ.

ಜಿಲ್ಲೆಯ ಜನರು ಅರೋಗ್ಯ ಚಿಕಿತ್ಸೆ ಗೆ ಮಂಗಳೂರಿನ ನ್ಯೂರೋ ಆಸ್ಪತ್ರೆಗೆ ಹೋಗಿ ಬಂದಿದ್ದಲ್ಲಿ ಸ್ವಯಂ ಪ್ರೇರಿತರಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಮತ್ತು ಜ್ವರ ಕೆಮ್ಮುಗಳಿಗೆ ಸ್ವಯಂ ಚಿಕಿತ್ಸೆಗೆ ಮುಂದಾಗಬಾರದೆಂದು ಮಾಧ್ಯಮಗಳ ಮೂಲಕ ಜಿಲ್ಲಾಧಿಕಾರಿ ಮನವಿ ಮಾಡಿದರು.

ಭಟ್ಕಳ ಹೊರತುಪಡಿಸಿ ಜಿಲ್ಲೆಯ ಉಳಿದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ನಿಯಮಗಳನ್ನು ಯಥಾವತ್ತಾಗಿ ಅನುಸರಿಸಲಾಗುವುದು. ವಿದೇಶ ಹಾಗೂ ಹೊರ ರಾಜ್ಯಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಬರುವವರನ್ನು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ಕ್ವಾರಂಟೈನ್ ಮಾಡಲಾಗುವುದು.

ಕಂಟೈನ್ ಮೆಂಟ್ ಪ್ರದೇಶದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಬಿಗಿಗೊಳಿಸಲಾಗುವುದು. ಇದಕ್ಕೆ ಜನರು ಸಹಕಾರ ನೀಡಬೇಕೆಂದು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ರೋಷನ್ ಅವರು ಮಾತನಾಡಿ ಸೋಂಕಿತರನ್ನು ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೋವಿಡ್-19 ಶಿಪ್ಟ್ ಮಾಡಲಾಗುವುದು. ಅವರಿಗೆ ವೈದ್ಯಕೀಯ ಸೇವೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡಲಾಗುವುದು. ಸಾರ್ವಜನಿಕರು ಆರೋಗ್ಯ ಸಮೀಕ್ಷೆಯಲ್ಲಿ ಭಾಗಿಯಾಗಿ ಮಾಹಿತಿ ನೀಡಬೇಕೆಂದು ಕೋರಿದರು.

See also  ಬೀದಿ ನಾಯಿ ದಾಳಿಗೆ ಜಿಂಕೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು