News Kannada
Sunday, November 27 2022

ಕರ್ನಾಟಕ

ಮಂಡ್ಯದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಪೊಲೀಸರು - 1 min read

Photo Credit :

ಮಂಡ್ಯದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಪೊಲೀಸರು

ಮಡಿಕೇರಿ: ಯಾವುದೇ ಪಾಸ್ ಹಾಗೂ ವೈದ್ಯಕೀಯ ತಪಾಸಣೆಯಿಲ್ಲದೆ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಮಂಡ್ಯದ ವ್ಯಕ್ತಿಯೊಬ್ಬರನ್ನು ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿಯಾಗಿರುವ ಮಂಡ್ಯದ ವ್ಯಕ್ತಿಯೊಬ್ಬರು ನಾಲ್ಕು ದಿನಗಳ ಹಿಂದೆ ಯಾವುದೇ  ಪಾಸ್ ಮತ್ತು ವೈದ್ಯಕೀಯ ತಪಾಸಣೆ ಇಲ್ಲದೆ  ಆನೆಚೌಕೂರ್  ಗೇಟ್  ಮೂಲಕ ರಾತ್ರಿ  ಬಂದು  ಶ್ರೀಮಂಗಲ ಪಟ್ಟಣದಲ್ಲಿ ಓಡಾಡುತ್ತಿದ್ದರಲ್ಲದೆ, ಕರ್ತವ್ಯಕ್ಕೂ ಹಾಜರಾಗಿದ್ದರು. 

ಪಟ್ಟಣದ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ ಇವರಲ್ಲಿ ಕೊರೋನಾ ಸೋಂಕು ಇರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸುವುದರೊಂದಿಗೆ ಸಂಬಂಧಿಸಿದವರ ಗಮನಸೆಳೆದಿದ್ದರು. ಅಲ್ಲದೆ ಸಾಮಾಜಿಕ ಜಾಲ ತಾಣದಲ್ಲೂ ಮಾಹಿತಿ ಹರಿಯಬಿಟ್ಟಿದ್ದರು.

ಇದನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್ ಅವರು, ವೀರಾಜಪೇಟೆ ಡಿವೈಎಸ್‍ಪಿ ಹಾಗೂ ಶ್ರೀಮಂಗಲ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಅದರಂತೆ ಶನಿವಾರ ಬೆಳಗ್ಗೆ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಆ ವ್ಯಕ್ತಿಯನ್ನು ತಪಾಸಣೆಗಾಗಿ ಗೋಣಿಕೊಪ್ಪ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದರೊಂದಿಗೆ ಜನರಲ್ಲಿ ಮೂಡಿದ್ದ ಆತಂಕ ಸ್ವಲ್ಪ ಮಟ್ಟಿಗೆ ದೂರವಾಗಿದ್ದು, ಆತನ ಪರೀಕ್ಷಾ ವರದಿ ಏನು ಹೇಳಲಿದೆ ಎನ್ನುವ ಕುತೂಹಲ ಮೂಡಿದೆ.

See also  ಹಾಡಿ ಯುವಕರ ಮೇಲೆ ಅರಣ್ಯ ಸಿಬ್ಬಂದಿ ಹಲ್ಲೆ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು