News Kannada
Wednesday, November 30 2022

ಕರ್ನಾಟಕ

ಕಾವೇರಿ ವನ್ಯಜೀವಿಧಾಮದಲ್ಲಿ ಮೊಟ್ಟ ಮೊದಲ ತೋಳ ಪತ್ತೆ - 1 min read

Photo Credit :

ಕಾವೇರಿ ವನ್ಯಜೀವಿಧಾಮದಲ್ಲಿ ಮೊಟ್ಟ ಮೊದಲ ತೋಳ ಪತ್ತೆ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಮೊಟ್ಟ ಮೊದಲ ಬಾರಿಗೆ ತೋಳವೊಂದು ಪತ್ತೆಯಾಗಿದ್ದು, ಇದು ಚಾಮರಾಜನಗರ ಜಿಲ್ಲೆಗೆ ಬಹುಶಃ ಮೊದಲ ದಾಖಲೆಯಾಗಿದೆ.

ಚಿರತೆಗಳ ಕುರಿತು ಅಧ್ಯಯನಕ್ಕಾಗಿ ನೇಚರ್ ಕನ್ಸರ್ವೇಷನ್ ಫೌಂಡೇಶನ್‌ನ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಮತ್ತು ಅವರ ತಂಡದವರು ಹಾಕಿದ್ದ ಕ್ಯಾಮರಾ ಟ್ರ್ಯಾಪ್‌ನಲ್ಲಿ, ಕಾವೇರಿ ವನ್ಯಜೀವಿಧಾಮದ ಕೊತ್ತನೂರು ವಲಯದಲ್ಲಿ ಏಪ್ರಿಲ್ ೭ನೇ ತಾರೀಖಿನ ಮುಂಜಾನೆ ಈ ಅಪರೂಪದ ಸಂಗತಿ ದಾಖಲಾಗಿದೆ.

ಒಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುವ ತೋಳಗಳು, ಕರ್ನಾಟಕದಲ್ಲಿ ಹಾವೇರಿ, ಕೊಪ್ಪಳ, ತುಮಕೂರು, ರಾಯಚೂರು, ಬಳ್ಳಾರಿ ಮತ್ತಿತರ ಜಿಲ್ಲೆಗಳಲ್ಲಿ ಕಂಡು ಬರುತ್ತವೆ. ಇವು ಹೆಚ್ಚಾಗಿ ಒಣ ಹುಲ್ಲುಗಾವಲು, ಕುರುಚಲು ಕಾಡುಗಳಲ್ಲಿ ಮತ್ತು ಬಹಳ ಅಪರೂಪವಾಗಿ ಎಲೆ ಉದುರುವ ಕಾಡುಗಳಲ್ಲಿ ಕಂಡು ಬರುತ್ತವೆ. ಇವುಗಳ ವ್ಯಾಪ್ತಿ ಹಲವಾರು ರಾಜ್ಯಗಳಲ್ಲಿದ್ದರೂ ಆವಾಸಸ್ಥಾನದ ನಾಶ ಮತ್ತು ಪ್ರತಿಕಾರದ ವಧೆಗೆ ಬಲಿಯಾಗುತ್ತಿವೆ. ಭಾರತದಲ್ಲಿ ಇವುಗಳ ಸಂಖ್ಯೆ ಹುಲಿಗಳಿಗಿಂತಲೂ ಕಡಿಮೆಯಿರಬಹುದು. ಇವುಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ ರ ಶೆಡ್ಯೂಲ್‌ – ೧ ರಲ್ಲಿ ಸಂರಕ್ಷಿತವಾಗಿವೆ.

ಅಧ್ಯಯನ ತಂಡದಲ್ಲಿ ಸಂದೇಶ್ ಅಪ್ಪು ನಾಯ್ಕ್, ಗಿರೀಶ್ ಎಂ. ಎನ್, ಜ್ಞಾನೇಂದ್ರ, ಪೂರ್ಣೇಶ ಎಚ್.ಸಿ ಇನ್ನಿತರರು ಹಾಜರಿದ್ದರು

See also  ಬೀದರ್ ಸಂಸದ, ಇಬ್ಬರು ಶಾಸಕರಿಗೆ ಕೊರೋನಾ ಪಾಸಿಟಿವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು