News Kannada
Thursday, December 08 2022

ಕರ್ನಾಟಕ

ಜಾಮೀನು ಇಲ್ಲದ ಬೀದಿ ಬದಿ ವ್ಯಾಪಾರಿಗಳಿಗೆ ೧೦ ಸಾವಿರದವರೆಗೂ ಸಾಲ: ಸಚಿವ ಸಿ.ಟಿ. ರವಿ

Photo Credit :

ಜಾಮೀನು ಇಲ್ಲದ ಬೀದಿ ಬದಿ ವ್ಯಾಪಾರಿಗಳಿಗೆ ೧೦ ಸಾವಿರದವರೆಗೂ ಸಾಲ: ಸಚಿವ ಸಿ.ಟಿ. ರವಿ

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ೨೦ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ಜಾಮೀನು ಇಲ್ಲದೇ ೧೦ ಸಾವಿರ ರೂ.ಗಳ ವರೆಗೂ ಸಾಲ ನೀಡಲಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಹೇಳಿದರು. 

ಅವರು ಇಂದು ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಅಡುಗೆ ಸಹಾಯಕರು ಹಾಗೂ ಸಿಬ್ಬಂದಿಗಳಿಗೆ ೨೫೦ಕ್ಕೂ ಹೆಚ್ಚು ದಿನಸಿ ಆಹಾರ ಪದಾರ್ಥಗಳ ಕಿಟ್‌ಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು. 

ಕೊರೋನಾ ಸೋಂಕು ದೇಶ ಹಾಗೂ ರಾಜ್ಯವ್ಯಾಪಿ ಹರಡಿದ್ದು ಇದೀಗ ರಾಜ್ಯದ ಹಲವು ಜಿಲ್ಲೆಗಳಲ್ಲೂ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಜನರು ಭಯಪಡುವುದು ಬೇಡ ವೈಯಕ್ತಿಕ ಸ್ವಚ್ಛತೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸುವುದು ಒಳಿತು ಎಂದರು. 

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಸಾವಿರ ಗಡಿ ದಾಟಿದ್ದು, ಕಳೆದ ವಾರದಲ್ಲಿ ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಪ್ರಕರಣ ದಾಖಲಾಗಿದೆ ಅದೃಷ್ಟವಶ ನಮ್ಮ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ ಈ ಬಗ್ಗೆ ಮೈಮರೆಯುವುದು ಬೇಡ ಎಂದ ಅವರು ದೇಶದಲ್ಲಿ ಶೇ. ೧೦೦ ಜನರಿಗೆ ಸೋಂಕು ಬಂದಲ್ಲಿ ೩ ಜನರು ಸಾವನ್ನಪ್ಪಿ ೯೭ ಜನರು ಗುಣಮುಖರಾಗಿದ್ದಾರೆ. ಅನಾರೋಗ್ಯ, ವಿವಿಧ ಖಾಯಿಲೆಯಿಂದ ಬಳಲುವವರೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ ಜೊತೆಗೆ ಶೇ. ೬೦ ರಷ್ಟು ಜನರು ಯಾವುದೇ ಔಷಧಿ ಇಲ್ಲದೆಯೂ ಗುಣಮುಖರಾಗಿದ್ದಾರೆ ಎಂದರು. 

ಕೇಂದ್ರ ಸರ್ಕಾರವು ಲಾಕ್‌ಡೌನ್ ಸಂಕಷ್ಟದಲ್ಲಿರುವ ಜನತೆಗೆ ಆರಂಭದಲ್ಲಿ ೧ ಲಕ್ಷ ೭೦ ಸಾವಿರ ಕೋಟಿ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಪ್ರತಿ ಬಡಕುಟುಂಬಗಳಿಗೆ ೧೦ ಕೆ.ಜಿ. ಅಕ್ಕಿ, ೨ ಕೆ.ಜಿ ಬೇಳೆ ನೀಡಿತ್ತು. ಉಜ್ವಲ ಯೋಜನೆ ಅಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ್, ಜನ್‌ಧನ್ ಖಾತೆಗೆ ಹಣ, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ೨೦೦೦ ರೂ. ನೀಡಿತ್ತು ಜೊತೆಗೆ ರಾಜ್ಯ ಸರ್ಕಾರವು ೧೦ಕೆ.ಜಿ. ಅಕ್ಕಿ, ೨ ಕೆ.ಜಿ. ಗೋಧಿ ವಿತರಣೆ ಮಾಡಿತ್ತು ಇದೀಗ ಕೇಂದ್ರ ಸರ್ಕಾರ ೨೦ ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದು, ಇದರಲ್ಲಿ ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ಜಾಮೀನು ಇಲ್ಲದೇ ೧೦ ಸಾವಿರ ರೂ. ಗಳ ವರೆಗೆ ಸಾಲ ನೀಡಲಿದೆ ಎಂದರು.

ಲಾಕ್‌ಡೌನ್ ವೇಳೆ ಸರ್ಕಾರದೊಂದಿಗೆ ಬೇರೆ ಬೇರೆ ಸಂಘ-ಸಂಸ್ಥೆಗಳು ತಮ್ಮ ಕೈಲಾದ ನೆರವು ನೀಡುವ ಮೂಲಕ ಮಾನವೀಯತೆ ತೋರಿದ್ದಾರೆ ಇಲ್ಲಿಯವರೆಗೆ ಚಿಕ್ಕಮಗಳೂರು ನಗರ ಹಾಗೂ ತಾಲ್ಲೂಕಿನಾದ್ಯಾಂತ ಸುಮಾರು ೨೭ ಸಾವಿರಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಉಚಿತವಾಗಿ ವಿತರಿಸಲಾಗಿದೆ. ಇದೀಗ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ರವರು ಬಡವರ ಕಷ್ಟಗಳಿಗೆ ಸ್ಪಂದಿಸಿ ಸರ್ಕಾರದ ಜೊತೆಗೆ ಕೈಜೋಡಿಸಿರುವುದು ಹೆಮ್ಮೆಯ ವಿಚಾರ ಎಂದರು.

See also  ಟ್ಯಾಂಕರ್ ಗೆ ಕಾರು ಡಿಕ್ಕಿ: ಓರ್ವ ಮೃತ್ಯು, ಮತ್ತೋರ್ವ ಗಂಭೀರ

 ಜಿಲ್ಲೆ ಈವರೆಗೂ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದು ಮುಂದಿನ ದಿನಗಳಲ್ಲಿ ಪ್ರಕರಣ ಕಂಡುಬಂದಲ್ಲಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ, ಸೋಂಕು ಬಾರದಂತೆ ತಡೆಯಲು ಜನರ ಸಹಕಾರ ಅತ್ಯವಶ್ಯಕ ಎಂದ ಅವರು ವಯೋವೃದ್ಧರು, ಚಿಕ್ಕಮಕ್ಕಳು, ವಿವಿಧ ಕಾಯಿಲೆಯಿಂದ ಬಳಲುತ್ತಿರುವವರು ಮನೆಯಲ್ಲೇ ಇರುವುದು ಒಳಿತು. ಸರ್ಕಾರ ನಾಳೆಯಿಂದ ಹೊಸ ನಿಯಮಗಳನ್ನು ರೂಪಿಸಲಿದ್ದು ನಿಯಮಗಳಿಗೆ ಅನುಸಾರವಾಗಿ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. 

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್‌ನ ವ್ಯವಸ್ಥಾಪಕ ದಯಾನಂದ್ ಮಾತನಾಡಿ, ನಮ್ಮ ಸಂಸ್ಥೆಯು ಸಂಕಷ್ಟದ ಸಮಯದಲ್ಲಿ ಸಾಮಾಜಿಕ ಸೇವೆ ಮಾಡಲು ಸದಾ ಮುಂದಿರುತ್ತದೆ. ಕಳೆದ ವಾರ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ೧ ಕೋಟಿ ರೂ ನೀಡಿದೆ. ಮುಂದೆಯು ಸಾಮಾಜಿಕ ಕಳಕಳಿ ಸೇವೆ ಮಾಡುವ ಮೂಲಕ ಜನತೆಗೆ ಸ್ಪಂದಿಸಲಿದೆ ಎಂದರು. 

   ಈ ಸಂದರ್ಭದಲ್ಲಿ  ಮುಖಂಡರುಗಳಾದ ವರಸಿದ್ಧಿ ವೇಣುಗೋಪಾಲ್, ಹೆಚ್.ಡಿ. ತಮ್ಮಯ್ಯ, ಪುಷ್ಪರಾಜ್, ಅಡುಗೆ ಸಂಘದ ಅಧ್ಯಕ್ಷ ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು