News Kannada
Friday, October 07 2022

ಕರ್ನಾಟಕ

ಜಿಲ್ಲೆಯಲ್ಲಿ ಸಂಜೆ 6 ರಿಂದ ಎಲ್ಲ ಚಟುವಟಿಕೆಗಳು ಬಂದ : ಡಿಸಿ - 1 min read

Photo Credit :

ಜಿಲ್ಲೆಯಲ್ಲಿ ಸಂಜೆ 6 ರಿಂದ ಎಲ್ಲ ಚಟುವಟಿಕೆಗಳು ಬಂದ : ಡಿಸಿ

ಕಾರವಾರ: ಕೋವಿಡ್-19 ತಡೆಗೆ ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳು ಮೇ 31 ರವರೆಗೆ ಸಂಜೆ 6 ರಿಂದ ಬೆಳಗಿನ 7 ಗಂಟೆವರೆಗೆ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ನಿಷೇದಿತ ಅವಧಿಯಲ್ಲಿ ವೈದ್ಯಕೀಯ ಕಾರಣವನ್ನು ಹೊರತುಪಡಿಸಿ ಇನ್ನಿತರೆ ಯಾವುದೇ ಕಾರಣಕ್ಕಾಗಿ 65 ವರ್ಷ ಮೇಲ್ಪಟ್ಟವರು, ಗರ್ಭಿಣಿ ಮಹಿಳೆಯರು ಬಹು ಅಸ್ವಸ್ಥತೆಯಿಂದ ಬಳಲುತ್ತಿರುವ ವ್ಯಕ್ತಿಗಳು ಮತ್ತು 10 ವರ್ಷ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಿಂದ ಹೊರಗಡೆ ಬರುವಂತಿಲ್ಲ ಎಂದರು.

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದ ಅವರು ಮದುವೆ ಸಮಾರಂಭಕ್ಕೆ 50 ಹಾಗೂ ಶವ ಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶವಿದ್ದು ಹೊರರಾಜ್ಯದಿಂದ ಬರುವವರು ಇ-ಪಾಸ್ ಹೊಂದಿರಬೇಕು. ಕ್ವಾರಂಟೈನ್ ಕೂಡ ಕಡ್ಡಾಯವಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾತನಾಡಿ, ಜನರು ಅನಗತ್ಯವಾಗಿ ಓಡಾಡಬಾರದು, ಪೊಲೀಸ್ ಇಲಾಖೆಯಿಂದ ದ್ರೋಣ ಕ್ಯಾಮೆರಾ ಮೂಲಕ ಸಾರ್ವಜನಿಕ ಚಲನವಲನಗಳನ್ನು ಸೆರೆ ಹಿಡಿಯಲಾಗುತ್ತಿದ್ದು, ನಿಷೇದಾಜ್ಞೆ ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಿಮಿನ್ ಕೆಸ್ ದಾಖಲಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 4 ಕೋವಿಡ್-19 ಪತ್ತೆ : ಮಂಗಳವಾರ ಜಿಲ್ಲೆಯಲ್ಲಿ 4 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ ದಾಂಡೇಲಿ, ಯಲ್ಲಾಪುರ, ಜೊಯಿಡಾ ಹಾಗೂ ಹೊನ್ನಾವರದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದ್ದು ಎಲ್ಲರೂ ಅಂತರಾಜ್ಯ ಪ್ರಯಾಣದ ಹಿನ್ನಲೆ ಹೊಂದಿದ್ದಾರೆ. ಅಲ್ಲದೇ ಎಲ್ಲರೂ ಕ್ವಾರಂಟೈನ್ ದಲ್ಲಿ ಇದ್ದವರಾಗಿರುವದರಿಂದ ಎಲ್ಲ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದ್ದು, ಜನರು ಆತಂಕ ಪಡಬೇಕಾಗಿಲ್ಲ ಎಂದ ಜಿಲ್ಲಾಧಿಕಾರಿ ತಿಳಿಸಿದರು.

See also  ಬಹಮನಿ ಉತ್ಸವಕ್ಕೆ ವಿರೋಧ ಸರಿಯಲ್ಲ: ಮಲ್ಲಿಕಾರ್ಜುನ ಖರ್ಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು