News Kannada
Thursday, September 29 2022

ಕರ್ನಾಟಕ

ಮಡಿಕೇರಿಯಲ್ಲಿ ಸಜ್ಜಾಯಿತು ಕೋವಿಡ್ ಪರೀಕ್ಷಾ ಪ್ರಯೋಗಾಲಯ - 1 min read

Photo Credit :

ಮಡಿಕೇರಿಯಲ್ಲಿ ಸಜ್ಜಾಯಿತು ಕೋವಿಡ್ ಪರೀಕ್ಷಾ ಪ್ರಯೋಗಾಲಯ

ಮಡಿಕೇರಿ: ಕೊರೋನಾ ಸೇರಿದಂತೆ ವೈರಾಣುಗಳಿಂದ ಹರಡುವ ರೋಗಗಳನ್ನು ಪತ್ತೆ ಮಾಡಬಹುದಾದ ಪ್ರಯೋಗಾಲಯ ಕೊನೆಗೂ ಕೊಡಗಿನಲ್ಲಿ ಆರಂಭವಾಗಲಿದೆ.

ಕೊಡಗು ಜಿಲ್ಲೆಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಕ್ಷ್ಮಾಣು ಜೀವಿ ವಿಭಾಗದಲ್ಲಿ   1.06   ಕೋಟಿ ರೂ. ವೆಚ್ಚದಲ್ಲಿ ಸಿದ್ಧಗೊಂಡಿರುವ ಪ್ರಯೋಗಾಲಯವನ್ನು ಶುಕ್ರವಾರ ರಾಜ್ಯದ ವಸತಿ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ವಿಪತ್ತು ನಿಧಿಯಡಿ ಈ ಕೋವಿಡ್ ಪರೀಕ್ಷೆಯ ಪ್ರಯೋಗಾಲಯ  ಸಿದ್ಧಗೊಂಡಿದ್ದು,  ಈ ಪ್ರಯೋಗಾಲಯದಲ್ಲಿ ಒಂದು ಬಾರಿಗೆ 100 ಮೂಗು/ಗಂಟಲು ದ್ರವ ಮಾದರಿಗಳನ್ನು ಪರೀಕ್ಷಿಸಬಹುದಾಗಿದೆ. 

ಇಲ್ಲಿಯವರೆಗೆ ಕೊಡಗು ಜಿಲ್ಲೆಯಿಂದ ಕೋವಿಡ್ ಪರೀಕ್ಷೆಗಾಗಿ ಸಂಗ್ರಹಿತ ಮಾದರಿಗಳನ್ನು ಮೈಸೂರಿನ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗುತ್ತಿತ್ತು. ಮತ್ತು ವರದಿಗಾಗಿ ಎರಡು ದಿನ ಕಾಯಬೇಕಾಗಿತ್ತು. ಇನ್ನು ಮುಂದೆ  ಕೋವಿಡ್ ಪರೀಕ್ಷಾ ಸೌಲಭ್ಯ  ಜಿಲ್ಲೆಯಲ್ಲಿಯೇ ಲಭ್ಯವಾಗಲಿದ್ದು, ಮುಂದಿನ ಒಂದು ವಾರದಲ್ಲಿ ಪೂರ್ಣ ಪ್ರಮಾಣದ ಪರೀಕ್ಷೆಯು ಈ ಪ್ರಯೋಗಾಲಯದಲ್ಲಿ ಪ್ರಾರಂಭವಾಗಲಿದೆ.  ಭವಿಷ್ಯದಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಯಿಂದ ಅನುಮತಿ ಪಡೆದು ಈ ಪ್ರಯೋಗಾಲಯವನ್ನು ಇತರೆ ವೈರಾಣುಗಳಿಂದ ಹರಡುವ ರೋಗಗಳ ಪರೀಕ್ಷೆಗೂ ಬಳಸಬಹುದಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

See also  ಯಲ್ಲಾಪುರದಲ್ಲಿ ಟ್ಯಾಂಕರ್ ಸ್ಫೋಟ: ಹೊತ್ತಿ ಉರಿದ ಬೆಂಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು