News Kannada
Wednesday, October 05 2022

ಕರ್ನಾಟಕ

ಕ್ವಾರಂಟೈನ್ ಕೇಂದ್ರದ ಸಿಬ್ಬಂದಿಗೆ ಜೀವಬೆದರಿಕೆ: 3 ಪ್ರಕರಣ ದಾಖಲು - 1 min read

Photo Credit :

ಕ್ವಾರಂಟೈನ್ ಕೇಂದ್ರದ ಸಿಬ್ಬಂದಿಗೆ ಜೀವಬೆದರಿಕೆ: 3 ಪ್ರಕರಣ ದಾಖಲು

ಯಾದಗಿರಿ: ಜಿಲ್ಲೆಯ ರಾಜನಕೊಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕ್ವಾರಂಟೈನ್ ಕೇಂದ್ರದ ಸಿಬ್ಬಂದಿಗಳಿಗೆ ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಪರುತು ನಾಯಕ ತಾಂಡಾದ ವಲಸೆಗಾಗರರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿ ಹಾಗೂ ಶಿಷ್ಟಾಚಾರದಂತೆ ಹೊರ ರಾಜ್ಯಗಳಿಂದ ಆಗಮಿಸಿದ ವಲಸೆಗಾರರನ್ನು ಕಡ್ಡಾಯವಾಗಿ 14 ದಿನಗಳವರೆಗೆ ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಅವಲೋಕನೆಗಾಗಿ ಇರಿಸಲು ಜಿಲ್ಲಾಡಳಿತವು ಕ್ರಮ ಕೈಗೊಂಡಿದೆ.

ಅದರಂತೆ ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಂದ ಆಗಮಿಸಿದ ವಲಸೆಗಾರರನ್ನು ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ತೆರೆಯಲಾದ ರಾಜನಕೊಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಅವಲೋಕನೆಗಾಗಿ ಇರಿಸಲಾದ ಪರುತು ನಾಯಕ ತಾಂಡಾದ ವಲಸೆಗಾಗರರು ಕ್ವಾರಂಟೈನ್ ಕೇಂದ್ರದಲ್ಲಿರದೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಕೊರೊನಾ ಸಾಂಕ್ರಾಮಿಕ ರೋಗವನ್ನು ಹರಡಿಸುವ ದುರುದ್ದೇಶದಿಂದ ತಾಂಡಾದಲ್ಲಿ ತಿರುಗಾಡಲು ಕ್ವಾರಂಟೈನ್ ಕೇಂದ್ರದಿಂದ ಹೊರ ಹೊಗುತ್ತಿರುವಾಗ, ಕ್ವಾರಂಟೈನ್ ಕೇಂದ್ರದ ಸಿಬ್ಬಂದಿಯವರು ತಡೆಯಲು ಪ್ರಯತ್ನಿಸಿದ್ದಾರೆ.

ಆಗ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ ಪ್ರಯುಕ್ತ ಸದರಿ ಆರೋಪಿಗಳ ಮೇಲೆ ಗುನ್ನೆ ನಂಬರ್: 40/2020, ಕಲಂ: 323 324 504 506 ಸಂಗಡ 34 ಐಪಿಸಿ ಅಡಿಯಲ್ಲಿ ಮತ್ತು ಅದೇ ರೀತಿ ಇನ್ನೂ 2 ಪ್ರಕರಣಗಳಾದ ಗುನ್ನೆ ನಂ: 41/2020 ಕಲಂ: 188 270 504 323 332 353 ಸಂಗಡ 34 ಐ.ಪಿ.ಸಿ ಅಡಿಯಲ್ಲಿ ಹಾಗೂ ಗುನ್ನೆ ನಂ. 42/2020 ಕಲಂ 269, 270 ಹಾಗೂ 34 ಐ.ಪಿ.ಸಿ. ಅಡಿಯಲ್ಲಿ ಒಟ್ಟು 3 ಪ್ರಕರಣಗಳು ದಾಖಲಾಗಿದ್ದು, ತನಿಖೆ ಹಂತದಲ್ಲಿರುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಅವಲೋಕನೆಗಾಗಿ ಇರುವ ಜನರು, ತಮ್ಮ ಅವಲೋಕನಾ ಅವಧಿ ಮುಗಿಯುವವರೆಗೆ ಕಡ್ಡಾಯವಾಗಿ ಕ್ವಾರಂಟೈನ್ ಕೇಂದ್ರದಲ್ಲಿ ಇರತಕ್ಕದ್ದು. ಒಂದು ವೇಳೆ ಕ್ವಾರಂಟೈನ್ ಕೇಂದ್ರ ಬಿಟ್ಟು ತಿರುಗಾಡಿದಲ್ಲಿ ಅಂತವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

See also  ವನ್ಯಜೀವಿ ಉಪಟಳದ ವಿರುದ್ಧ ಕ್ರಮಕ್ಕೆ ಒತ್ತಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು