ಹಾಸನ: ಜಿಲ್ಲೆಯಲ್ಲಿ ಹೊಸದಾ 13 ಕೋವಿದ್ 19 ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ .
ಇಂದು ವರದಿಯಾದ ಎಲ್ಲಾ ಪಾಸಿಟಿವ್ ಪ್ರಕರಣಗಳಿಗೆ ಮಹಾರಾಷ್ಟ್ರ ದಿಂದ ಆಗಮಿಸಿದ ಹಿನ್ನಲೆ ಇದೆ .ಎಲ್ಲರೂ ಚನ್ನರಾಪಟ್ಟಣ ತಾಲ್ಲೂಕಿಗೆ ಸೇರಿದವರಾಗಿದ್ದಾರೆಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ .
ಸೋಂಕು ಪತ್ತೆಯಾದ ಎಲ್ಲರನ್ನೂ ನಗರದ ಕೊವಿದ್ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈವರಗೆ ದಾಖಲಾಗಿರುವ ಎಲ್ಲರೂ ಆರೋಗ್ಯಯುತವಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ