News Kannada
Wednesday, October 05 2022

ಕರ್ನಾಟಕ

ಧಾರವಾಡ : ಜೂ.8 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ - 1 min read

Photo Credit :

ಧಾರವಾಡ : ಜೂ.8 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಧಾರವಾಡ: ಕೊರೊನಾ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ  ಜೂ.1 ರಿಂದ ಜೂ. 8 ರವರೆಗೆ ಜಿಲ್ಲೆಯಾದ್ಯಂತ ಸಿಆರ್ ಪಿಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿರುತ್ತದೆ. 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಕಫ್ರ್ಯೂ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ. ಕಫ್ರ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರ ಕಾರ್ಯದಲ್ಲಿ ಕೇವಲ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

ಶಿಕ್ಷಣ, ತರಬೇತಿ, ಕೋಚಿಂಗ್ ಸಂಸ್ಥೆಗಳು, ಹೊಟೆಲ್ ರೆಸ್ಟೋರೆಂಟ್, ಬಾರ್ ಸೇರಿದಂತೆ ಆತಿಥ್ಯ ಸೇವೆಗಳೆಲ್ಲವನ್ನು ನಿರ್ಬಂಧಿಸಲಾಗಿದೆ. ಆದರೆ ಆನ್‍ಲೈನ್ ಕ್ಲಾಸ್‍ಗಳು ಹಾಗೂ ದೂರ ಸಂವೇದಿ ಕಲಿಕೆಗೆ ಇದು ಅನ್ವಯಿಸುವುದಿಲ್ಲ, ಸಂತೆ, ಜಾತ್ರೆ, ಸಮಾವೇಶ ಸಿನಿಮಾ ಮೆರವಣಿಗೆ ಸಮ್ಮೇಳನ, ಕ್ರೀಡಾಕೂಟ, ಪ್ರಾರ್ಥನೆ ಸ್ಥಳಗಳು, ಚಿತ್ರಮಂದಿರ, ಮಾಲ್, ಜಿಮ್ ರಾಜಕೀಯ ಪಕ್ಷಗಳ ಸಮಾವೇಶ ಹಾಗೂ ಯಾವುದೇ ಧಾರ್ಮಿಕ ಸಮಾರಂಭಗಳು ಜರುಗುವುದನ್ನು ನಿರ್ಬಂಧಿಸಲಾಗಿದೆ.

ಎಲ್ಲಾ ಸಾಮಾಜಿಕ ರಾಜಕೀಯ ಶೈಕ್ಷಣಿಕ ಸಾಂಸ್ಕøತಿಕ ಧಾರ್ಮಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರಗುವುದನ್ನು ನಿರ್ಬಂಧಿಸಲಾಗಿದೆ. ಸರಕಾರಿ ವಾಹನಗಳಿಗೆ ಮತ್ತು ಕೋವಿಡ್ -19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ.

ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕ ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯವಾಗಿ ತಿರುಗಾಡುವುದನ್ನು ನಿರ್ಬಂಧಿಸಿದೆ. ಹೋಟೆಲ್‍ಗಳು, ಪಾರ್ಸೆಲ್ ಸೇವೆ ಮಾತ್ರ ನೀಡಬಹುದು. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

See also  ರಾಷ್ಟೀಯ ಕರಾಟೆಯಲ್ಲಿ ಗೋಣಿಕೊಪ್ಪದ ವಿದ್ಯಾರ್ಥಿಗಳ ಸಾಧನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು