News Kannada
Monday, October 03 2022

ಕರ್ನಾಟಕ

ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 200 ಮನೆಗಳ ನಿರ್ಮಾಣ : ಸಚಿವ ವಿ.ಸೋಮಣ್ಣ ಭರವಸೆ - 1 min read

Photo Credit :

ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 200 ಮನೆಗಳ ನಿರ್ಮಾಣ : ಸಚಿವ ವಿ.ಸೋಮಣ್ಣ ಭರವಸೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಲ್ಲಾ ಬಡವರಿಗೂ ಮನೆ ಇರಬೇಕು. ಸೂರು ಇಲ್ಲ ಎಂಬ ದೂರುಗಳು ಕೇಳಿ ಬರಬಾರದು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜಾಗ ಒದಗಿಸಿದ್ದಲ್ಲಿ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 200 ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಪ್ರಕಟಿಸಿದ್ದಾರೆ.

ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೊರೊನಾ ವಾರಿಯರ್ಸ್‍ಗೆ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. 

ಜಂಬೂರಿನಲ್ಲಿ ಕೆಲವು ಮನೆಗಳು ಪೂರ್ಣಗೊಳ್ಳದಿರುವ ಬಗ್ಗೆ ಮಾಹಿತಿ ಇದ್ದು, ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಭ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು. 

ಕೊಡಗು ಜಿಲ್ಲೆಯ ಜಂಬೂರು, ಮದೆನಾಡು, ಕರ್ಣಂಗೇರಿಯಲ್ಲಿ ನಿರ್ಮಿಸಿರುವ ಮನೆಗಳು ರಾಷ್ಟ್ರದಲ್ಲಿಯೇ ಮಾದರಿಯಾಗಿದೆ ಎಂದು ವಸತಿ ಸಚಿವರಾದ ವಿ.ಸೋಮಣ್ಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಮತ್ತು ನಿಯಂತ್ರಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸಿದ್ದರಿಂದ ಕೊರೊನಾ ವೈರಸ್‍ನ್ನು ನಿಯಂತ್ರಿಸಲು ಸಾಧ್ಯವಾಗಿದೆ. ಆ ದಿಸೆಯಲ್ಲಿ  ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದು ಸಚಿವರು ನುಡಿದರು.

ಪ್ರತಿ ಹಂತದ ಅಧಿಕಾರಿಗಳು ಸಮಾಜ ಮುಖಿಯಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಿದ್ದಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಬಹುದಾಗಿದೆ. ಆ ನಿಟ್ಟಿನಲ್ಲಿ ಶ್ರದ್ಧೆ, ಇಚ್ಛಾಶಕ್ತಿ ಇರಬೇಕು. ಆ ದಿಸೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಕೋವಿಡ್-19 ಮತ್ತು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸಿದ್ದು, ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. 

ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದಾಗ ಜನಪ್ರತಿನಿಧಿಗಳು ಬೆನ್ನು ತಟ್ಟುವಂತಾಗಬೇಕು. ಆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಒಳ್ಳೆಯ ಗುಣ ಮಾದರಿ ಎಂದು ಸಂಸದರು ಗುಣಗಾನ ಮಾಡಿದರು.

ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಸಿಇಒ ಹೀಗೆ ಎಲ್ಲಾ ಹಂತದ ಅಧಿಕಾರಿಗಳು ಸಂಯಮ, ಸಹನೆಯಿಂದ ಕರ್ತವ್ಯ ನಿರ್ವಹಿಸಿ ಕೋವಿಡ್-19 ನ್ನು ನಿಯಂತ್ರಿಸಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ನುಡಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಪ್ರತಿಯೊಬ್ಬರ 5 ಬೆರಳುಗಳು ಸಮನಾಗಿ ಇರುವುದಿಲ್ಲ. ಆದ್ದರಿಂದ ಎಲ್ಲರನ್ನು ಒಟ್ಟುಗೂಡಿಸಿಕೊಂಡು ಹೋದಾಗ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಅಧಿಕಾರಿಗಳು ಮಾನವೀಯತೆಯಿಂದ ಕಾರ್ಯನಿರ್ವಹಿಸಬೇಕು. ಹಾಗಾದಾಗ ಒಳ್ಳೆಯ ಆಡಳಿತ ನಿರೀಕ್ಷಿಸಬಹುದು, ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾಜದಲ್ಲಿ ಪ್ರತಿಯೊಬ್ಬರೂ ಆತ್ಮತೃಪ್ತಿಯಿಂದ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಆತ್ಮವಂಚನೆ ಮಾಡಿಕೊಳ್ಳಬಾರದು ಎಂದು ಎಂ.ಪಿ.ಅಪ್ಪಚ್ಚುರಂಜನ್ ಅವರು ಕಿವಿಮಾತು ಹೇಳಿದರು.

See also  ಅಸ್ಸಾಂ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಯೋಧ ಹುತಾತ್ಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು