News Kannada
Saturday, October 01 2022

ಕರ್ನಾಟಕ

ಸಿದ್ದರಾಮಯ್ಯ, ಹೆಚ್ಡಿಕೆ ಮೆಚ್ಚುವಂತೆ ಪಾಂಡವಪುರ ಸಕ್ಕರೆ ಕಾರ್ಖಾನೆ ಅಭಿವೃದ್ಧಿ - 1 min read

Photo Credit :

ಸಿದ್ದರಾಮಯ್ಯ, ಹೆಚ್ಡಿಕೆ ಮೆಚ್ಚುವಂತೆ ಪಾಂಡವಪುರ ಸಕ್ಕರೆ ಕಾರ್ಖಾನೆ ಅಭಿವೃದ್ಧಿ

ಮಂಡ್ಯ: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಮೆಚ್ಚುವಂತೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವುದಾಗಿ ನಿರಾಣಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಮುರುಗೇಶ್ ಆರ್.ನಿರಾಣಿ ಹೇಳಿದ್ದಾರೆ.

ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಷುಗರ್ಸ್ ಕಂಪೆನಿಗೆ ಸರ್ಕಾರ ಗುತ್ತಿಗೆ ನೀಡಿದ ಕ್ರಮವನ್ನು ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು. ಹೀಗಾಗಿ ಅವರಿಗೆ ತಿರುಗೇಟು ನೀಡಿದ ಅವರು ಗುತ್ತಿಗೆ ಪಡೆದಿರುವ ನಿರಾಣಿ ಷುಗರ್ಸ್ ಕಂಪೆನಿ ಮುಂದಿನ ಮೂರು ತಿಂಗಳೊಳಗೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆ ಪ್ರಕ್ರಿಯೆಯನ್ನು ಆರಂಭಿಸಲಿದೆ. ಪಾಂಡವಪುರ ಸಕ್ಕರೆ ಕಾರ್ಖಾನೆಯ ಕಬ್ಬು ಅರೆಯುವಿಕೆ ಸಾಮರ್ಥ್ಯವನ್ನು ಮುಂದಿನ ಐದು ವರ್ಷಗಳಲ್ಲಿ  ಈಗಿರುವ 3500 ಟನ್‍ನಿಂದ 5000 ಟನ್‍ಗೆ ಹೆಚ್ಚಿಸಲಾಗುವುದು. 5 ಮೆಗಾವ್ಯಾಟ್‍ನಿಂದ 20 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಿಯಾಯೋಜನೆ ರೂಪಿಸಲಾಗಿದ್ದು, ನಿತ್ಯ 60 ಸಾವಿರ ಲೀಟರ್ ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಯನ್ನು ಆರಂಭಿಸಲಾಗುವುದು ಎಂದು ನುಡಿದರು.

ರೈತರಿಗೆ ಕಾಲ ಕಾಲಕ್ಕೆ ಹಣ ಸಂದಾಯ ಮಾಡುವುದರ ಜೊತೆಗೆ ನಿರುದ್ಯೋಗಿ ಯುವಕ-ಯುವತಿಯರಿಗೆ ತರಬೇತಿ ನೀಡಿ ಉದ್ಯೋಗ ನೀಡುವ ಮೂಲಕ ಆರ್ಥಿಕ ಮಟ್ಟವನ್ನು ಹೆಚ್ಚಿಸುವುದು. ಕಬ್ಬು ಬೆಳೆಗಾರರಿಗೆ ವಿಮೆ, ಸಾಮಾಜಿಕ ಭದ್ರತೆ ಒದಗಿಸುವ ಜೊತೆಗೆ ಸೂಪರ್ ಮಾರುಕಟ್ಟೆ ಸ್ಥಾಪಿಸಿ ರೈತರಿಗೆ ಹಾಗೂ ಕಾರ್ಮಿಕರಿಗೆ ಅಗ್ಗದ ದರದಲ್ಲಿ ಜೀವನಾವಶ್ಯಕ ವಸ್ತುಗಳನ್ನು ನೀಡಲಾಗುವುದು ಎಂದರು.

ಸ್ಥಳೀಯವಾಗಿ ತಮ್ಮದೇ ಬ್ಯಾಂಕ್ ಸ್ಥಾಪಿಸಿ ಕಬ್ಬು ಬೆಳೆಗಾರರಿಗೆ ಆರ್ಥಿಕ ಶಕ್ತಿ ತುಂಬುವುದು. ಗುಣಮಟ್ಟದ ಕಬ್ಬಿನ ಬೀಜಗಳು, ರಸಗೊಬ್ಬರ, ಕ್ರಿಮಿನಾಶಕ ಔಷಧಗಳನ್ನು ಸಬ್ಸಿಡಿ ದರದಲ್ಲಿ ನೀಡುವುದು, ರೈತರಿಗೆ ವೈಜ್ಞಾನಿಕ ಪದ್ಧತಿಯಲ್ಲಿ ಕಬ್ಬು ಬೆಳೆಯುವ ಬಗ್ಗೆ ತರಬೇತಿ ನೀಡುವುದಾಗಿ ಹೇಳಿದರು.

ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಪಡಿಸಿ ಮಾದರಿ ಸಕ್ಕರೆ ಕಾರ್ಖಾನೆಯಾಗಿ ಮಾಡುವ ಭರವಸೆ ನೀಡಿದ ಅವರು, ನಿರಾಣಿ ಗ್ರೂಪ್ ಕೇವಲ ಸಕ್ಕರೆ ಉತ್ಪಾದನೆ ಮಾಡುವುದಷ್ಟೇ ಅಲ್ಲದೆ ವಿದ್ಯುತ್, ಎಥೆನಾಲ್, ರೆಕ್ಟಿಫೈಡ್ ಸ್ಪಿರಿಟ್, ಸಿಒ2, ಸಿಎನ್‍ಜಿ, ಸ್ಯಾನಿಟೈಸರ್, ರಸಗೊಬ್ಬರ ಸೇರಿದಂತೆ ಹಲವು ಉಪ ಉತ್ಪನ್ನಗಳನ್ನು ಉತ್ಪಾದಿಸಲಾಗುವುದು ಎಂದು ತಿಳಿಸಿದರು.

ನಿರಾಣಿ ಗ್ರೂಪ್ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಖರೀದಿಸಿಲ್ಲ. 40 ವರ್ಷಗಳ ಅವಧಿಗೆ ಸರ್ಕಾರದಿಂದ ಗುತ್ತಿಗೆ ಪಡೆದಿದೆ. ನಿರಾಣಿ ಸಮೂಹ ಸಂಸ್ಥೆಗಳ ಸಕ್ಕರೆ ಕಾರ್ಖಾನೆಗಳಲ್ಲಿ 36 ಕೋಟಿ ಕಬ್ಬಿನ ಬಾಕಿ ಉಳಿಸಿಕೊಂಡಿರುವುದು ನಿಜ. ಅದನ್ನು ಮುಂದಿನ ಒಂದು ವಾರದೊಳಗೆ ಪಾವತಿಸುವ ಭರವಸೆ ನೀಡಿದರು.

See also  ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ 20 ತಜ್ಞ ವೈದ್ಯರ ನೇಮಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು