News Kannada
Thursday, September 29 2022

ಕರ್ನಾಟಕ

ಜೂನ್ 18 ರಂದು ಪಿಯುಸಿ ಇಂಗ್ಲೀಷ್ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ - 1 min read

Photo Credit :

ಜೂನ್ 18 ರಂದು ಪಿಯುಸಿ ಇಂಗ್ಲೀಷ್ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಧಾರವಾಡ: ಇದೇ ಗುರುವಾರ ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಹುಬ್ಬಳ್ಳಿ-ಧಾರವಾಡ ನಗರದ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಸದರಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಪರೀಕ್ಷೆಗಳು ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ ಸಾರ್ವಜನಿಕರು ಹಾಗೂ ಇತರ ಸಂಬಂಧಪಡದ ವ್ಯಕ್ತಿಗಳು ಪರೀಕ್ಷಾರ್ಥಿಗಳಿಗೆ ತೊಂದರೆ ಕೊಡುವ ಹಾಗೂ ಪರೀಕ್ಷಾ ಅವ್ಯವಹಾರಗಳಿಗೆ ಪ್ರೇರೇಪಿಸದಂತೆ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸುವ ಬಗ್ಗೆ ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪದ ಝರಾಕ್ಸ್ ಮತ್ತು ಕಂಪ್ಯೂಟರ್ ಸೆಂಟರ್/ಅಂಗಡಿಗಳು ಪರೀಕ್ಷೆಯ ಸಮಯದಲ್ಲಿ ಕಾರ್ಯನಿರ್ವಹಿಸದಂತೆ ನಿಷೇಧಿಸಿ, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರ್ ಆರ್. ದಿಲೀಪ್ ಅವರು ಆದೇಶ ಹೊರಡಿಸಿದ್ದಾರೆ.

 

ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

 

 

See also  ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘದ ಚುನಾವಣೆ ವೇಳೆ ಜಟಾಪಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು