News Kannada
Saturday, October 01 2022

ಕರ್ನಾಟಕ

ಚಾಮರಾಜನಗರದಲ್ಲಿ ಟೆಂಪೋ ಚಾಲಕನಿಗೆ ಕೊರೋನಾ ಸೋಂಕು - 1 min read

Photo Credit :

ಚಾಮರಾಜನಗರದಲ್ಲಿ ಟೆಂಪೋ ಚಾಲಕನಿಗೆ ಕೊರೋನಾ ಸೋಂಕು

ಚಾಮರಾಜನಗರ: ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಗೆ ಕೊರೋನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಹಸಿರು ವಲಯದಲ್ಲಿದ್ದ ಚಾಮರಾಜನಗರಕ್ಕೆ ಕಪ್ಪು ಚುಕ್ಕೆಯಾಗಿತ್ತು. ಕೊನೆಗೂ ಆತನಿಗೆ ಚಿಕಿತ್ಸೆ ನೀಡಿ ಗುಣಮುಖನಾಗಿ ತೆರಳುತ್ತಿದ್ದಂತೆಯೇ ಇದೀಗ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಟೆಂಪೋ ಚಾಲಕನಿಗೆ ಸೋಂಕು ತಗುಲಿರುವುದು ಜನ ಬೆಚ್ಚಿ ಬೀಳುವಂತೆ ಮಾಡಿದೆ.

ಚಾಮರಾಜನಗರ ತಮಿಳುನಾಡು, ಕೇರಳದೊಂದಿಗೆ ಗಡಿ ಹೊಂದಿಕೊಂಡಿದ್ದರೂ ಇದುವರೆಗೆ ಜಿಲ್ಲಾಡಳಿತ ಕಠಿಣ ಕ್ರಮಗಳ ಮೂಲಕ ಎಚ್ಚರಿಕೆ ವಹಿಸಲಾಗಿತ್ತು. ಆದರೂ ಮಹಾರಾಷ್ಟ್ರದಿಂದ ಬಂದಿದ್ದ ಮೆಡಿಕಲ್ ವಿದ್ಯಾರ್ಥಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆತ ಈಗ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಮನೆಗೆ ಕಳುಹಿಸಲಾಗಿದೆ. ಇನ್ನೇನು ಎಲ್ಲ ಸರಿ ಹೋಯಿತೆಂದು ನೆಮ್ಮದಿಯುಸಿರು ಬಿಡುತ್ತಿದ್ದಂತೆಯೇ ಇದೀಗ ಗುಂಡ್ಲುಪೇಟೆ ಪಟ್ಟಣದ  ಮಹದೇವಪ್ರಸಾದ್ ಬಡಾವಣೆಯ  ಟೆಂಪೋ ಚಾಲಕನಲ್ಲಿ  ಕೊರೊನಾ ಸೋಂಕು ದೃಢಪಟ್ಟಿದ್ದು ಆತನನ್ನು ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತ ಟೆಂಪೋ ಚಾಲಕನಾಗಿದ್ದು ತಮಿಳುನಾಡಿಗೆ ತರಕಾರಿಯನ್ನು ತನ್ನ ಟೆಂಪೋದಲ್ಲಿ ಸಾಗಿಸುತ್ತಿದ್ದನು ಎನ್ನಲಾಗಿದೆ. ಈತನಿಗೆ ಎರಡು ದಿನಗಳ ಹಿಂದೆ ಶೀತ ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಈತನ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಚಾಮರಾಜನಗರ ಮೆಡಿಕಲ್ ಕಾಲೇಜಿನ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಈತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಸೋಂಕಿತನನ್ನು ಚಾಮರಾಜನಗರದ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈತ ವಾಸವಿದ್ದ ಬಡಾವಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜತೆಗೆ ಈತನ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಗೆ ಒಳಪಡಿಸಲು ಜಿಲ್ಲಾಡಳಿತ ಮುಂದಾಗಿದೆ.

See also  ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ವಿತರಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಸೋಮಣ್ಣ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು