News Kannada
Sunday, October 02 2022

ಕರ್ನಾಟಕ

ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ದಲ್ಲಿ ಎಫ್.ಐ.ಆರ್. ದಾಖಲು - 1 min read

Photo Credit :

ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ದಲ್ಲಿ ಎಫ್.ಐ.ಆರ್. ದಾಖಲು

ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಆದೇಶದಂತೆ ಮಹಾರಾಷ್ಟçದಿಂದ ಕಲಬುರಗಿ ತಾಲೂಕಿಗೆ ಬರುವ ಸಾರ್ವಜನಿಕರಿಗೆ ಕಡ್ಡಾಯವಾಗಿ ೭ ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಂತರ ಕೋವಿಡ್-೧೯ ಪರೀಕ್ಷೆ ನಡೆಸಿ ಮತ್ತೆ ೭ ದಿನಗಳ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಕಲಬುರಗಿ ತಹಶೀಲ್ದಾರ ಮಲ್ಲೇಶ ತಂಗಾ ಅವರು ಹೇಳಿದ್ದಾರೆ.

 

ಇದಲ್ಲದೇ ಮಹಾರಾಷ್ಟ್ರ ರಾಜ್ಯ ಹೊರತುಪಡಿಸಿ ಬೇರೆ ರಾಜ್ಯಗಳಿಂದ ಬರುವ ಜನರಿಗೆ ೧೪ ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುವುದು. ಕಲಬುರಗಿ ತಾಲೂಕಿನ ಹೋಂ ಕ್ವಾರಂಟೈನ್‌ನಲ್ಲಿರುವ ಕೆಲವು ವ್ಯಕ್ತಿಗಳು ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು ಬಂದಿರುತ್ತದೆ. ಇದನ್ನು ತಡೆಯಲು (ಸರ್ಕಾರದ ಆದೇಶ ಉಲ್ಲಂಘಿಸಿದ್ದಲ್ಲಿ) ಅಂತಹ ವ್ಯಕ್ತಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿ ಕಾನೂನಿನ ಕ್ರಮ ಕೈಗೊಳ್ಳಲಾಗುವುದಲ್ಲದೇ ಅವರಿಗೆ ಮತ್ತೆ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ ಎಂದು ತಿಳಿಸಿದ್ದಾರೆ.

See also  ಖಾಝಿ ನಿಗೂಢ ಸಾವಿನ ತನಿಖೆಗಾಗಿ ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು