News Kannada
Friday, September 30 2022

ಕರ್ನಾಟಕ

ಚಿಕ್ಕಮಗಳೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಶ್ರಮವಹಿಸಿ ದುಡಿಯಲು ಬದ್ದ: ಸೋಮಶೇಖರ್ - 1 min read

Photo Credit :

ಚಿಕ್ಕಮಗಳೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಶ್ರಮವಹಿಸಿ ದುಡಿಯಲು ಬದ್ದ: ಸೋಮಶೇಖರ್

ಚಿಕ್ಕಮಗಳೂರು: ಸರ್ವರ ಸಹಕಾರದೊಂದಿಗೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಶ್ರಮವಹಿಸಿ ಕಾರ್ಯನಿರ್ವಹಿಸಲು ಬದ್ದನಾಗಿದ್ದೇನೆ ಎಂದು ನೂತನ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸೋಮಶೇಖರ್ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿ ಮಾತನಾಡಿದರು.

ಜಿಲ್ಲೆಯ ಬಯು ಸೀಮೆ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕಳೆದ ಬಾರಿ ತೀವ್ರ ಅತಿವೃಷ್ಟಿಯಿಂದಾಗಿ ಸಾಕಷ್ಟು ಹಾನಿಗಳಾಗಿದ್ದು ಸುಧಾರಣೆಗೆ ಹೆಚ್ಚಿನ ಗಮನ ಹರಿಸಿ ಕಾರ್ಯನಿರ್ವಹಿಸಲಾಗುವುದು ಎಂದರು, ಜಿಲ್ಲೆಯಲ್ಲಿನ ಜನಪ್ರತಿನಿಧಿಗಳು, ಉಸ್ತುವಾರಿ ಸಚಿವರು ಶಾಸಕರು, ಸದಸ್ಯರ ಸಹಕಾರದಿಂದ ಜಿಲ್ಲಾ ಪಂಚಾಯಿತಿ ನೂತನ ಉಪಾಧ್ಯಕ್ಷನಾಗಿ ಆಯ್ಕೆಯಾಗಿದ್ದು ಜಿಲ್ಲೆಯ ಸರ್ವಾಂಗಿಣ ಅಭಿವೃದ್ದಿಗೆ ದುಡಿಯಲು ಕಂಕಣಬದ್ದನಾಗಿದ್ದೇನೆ ಎಂದ ಅವರು ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದು ಜಿಲ್ಲೆಯ ಸಮಸ್ಯೆಗಳನ್ನು ಅವರ ಗಮನಕ್ಕೆ ತರುವುದರೊಂದಿಗೆ ಜಿಲ್ಲೆಗೆ ಅಭಿವೃದ್ದಿಗೆ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತೇನೆ ಕೊರೋನಾ ಲಾಕ್‌ಡೌನ್‌ನಿಂದಾಗಿ ಜನತೆ ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದು ಸಮಸ್ಯೆಗಳಿದ್ದಲ್ಲಿ ನಿಭಾಯಿಸಲು ಶ್ರಮವಹಿಸಲಿದ್ದೇನೆ ಎಂದರು.

ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ರೈತ ಕುಟುಂಬದಿಂದ ಅಧಿಕಾರಕ್ಕೆ ಬಂದಿದ್ದು ಪಕ್ಷದ ಕಾರ್ಯಕರ್ತನಾಗಿ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷನಾಗಿ, ಬೀಕನ ಹಳ್ಳಿಯ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷನಾಗಿ ದುಡಿದು ಇದೀಗ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷನಾಗಿ ಆಯ್ಕೆಯಾಗಿದ್ದು ಎಲ್ಲರ ಸಹಕಾರ, ಸಲಹೆಯೊಂದಿಗೆ ಜಿಲ್ಲೆಯ ಅಭಿವೃದ್ದಿ ಕಾರ್ಯಗಳನ್ನು ಮಾಡಲಿದ್ದೇನೆ ಎಂದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ನೂತನವಾಗಿ ಆಯ್ಕೆಗೊಂಡಿರುವ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸೋಮಶೇಖರ್ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಿ.ಆನಂದ್ ಅವರನ್ನು ಅಭಿನಂದಿಸಿ ಇರುವ ಅಲ್ಪಾವಧಿಯಲ್ಲೇ ಉತ್ತಮ ಸೇವೆಯನ್ನು ನೀಡುವ ಮೂಲಕ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುವಂತೆ ತಿಳಿಸಿದರು.

ಚಿಕ್ಕಮಗಳೂರು ನಗರವನ್ನು ಚೊಕ್ಕ ನಗರನ್ನಾಗಿಸಿ ಮೂಲಭೂತ ಸೌಕರ್ಯಗಳು ಹಾಗೂ ಉತ್ತಮ ಯೋಜನೆಗಳನ್ನು ರೂಪಿಸುವುದರೊಂದಿಗೆ ಜಿಲ್ಲೆಯ ಜನತೆಗೆ ಗೌರವಕ್ಕೆ ಪಾತ್ರರಾಗುವಂತೆ ನೂತನ (ಸಿಡಿಎ) ಅಧ್ಯಕ್ಷರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಮಾಜಿ ಸಚಿವ ಜೀವರಾಜ್, ಶಾಸಕರಾದ ಬೆಳ್ಳಿ ಪ್ರಕಾಶ್, ಸುರೇಶ್, ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್, ಜಿ.ಪಂ ಮಾಜಿ ಉಪಾಧ್ಯಕ್ಷ ವಿಜಯ್‌ಕುಮಾರ್, ತಾ.ಪಂ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ನಗರ ಸಭೆ ಮಾಜಿ ಅಧ್ಯಕ್ಷ ಹೆಚ್.ಡಿ ತಮಯ್ಯ, ಮುಖಂಡರಾದ ಟಿ.ರಾಜಶೇಖರ್, ಮಧುಕುಮಾರ್ ರಾಜ್ ಅರಸ್, ಈಶ್ವರಹಳ್ಳಿ ಮಹೇಶ್, ಕಲ್ಮರುಡಪ್ಪ, ವರಸಿದ್ದಿವೇಣೂಗೋಪಾಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

See also  ಹೈಕೋರ್ಟ್ ನಲ್ಲಿದ್ದ ದಾವೆ ಹಿಂದಕ್ಕೆ ಪಡೆದ ಸುರೇಂದ್ರನ್: ಮಂಜೇಶ್ವರದಲ್ಲಿ ಉಪಚುನಾವಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು