News Kannada
Saturday, October 01 2022

ಕರ್ನಾಟಕ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸಿ: ಸುರೇಶ್ ಕುಮಾರ್ - 1 min read

Photo Credit :

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸಿ: ಸುರೇಶ್ ಕುಮಾರ್

ಕಾರವಾರ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜೂನ್ 25ರಿಂದ ಜುಲೈ 3ರವರೆಗೆ ಜರುಗಲಿದ್ದು, ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪದೋಷವಾಗದಂತೆ ಸುವ್ಯವಸ್ಥಿತವಾಗಿ ನಡೆಸಬೇಕೆಂದು ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ ಅವರು ವಿಡಿಯೋ ಸಂವಾದದ ಮೂಲಕ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಮಾತನಾಡಿ, ಕಳೆದ ಬಾರಿ ದ್ವಿತೀಯ ಪಿಯು ಪರೀಕ್ಷೆ ನಡೆದ ಸಂದರ್ಭದಲ್ಲಿ ಮಳೆಯಾದಾಗ ಮಕ್ಕಳು ಪರೀಕ್ಷೆ ಬರೆಯಲು ಬಂದಾಗ ಅವರಿಗೆ ಗೊಂದಲವುಂಟಾದರೂ ಸಹ ಪರೀಕ್ಷೆ ಯಶಸ್ವಿಯಾಗಿದೆ. ಆದರೆ ಈ ಬಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ಲ್ಯಾನ್ ಮೂಲಕ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವುದೇ ಸಮಸ್ಯೆಯಾಗದಂತೆ ಯಶಸ್ವಿಗೊಳಿಸುತ್ತೇವೆ ಎಂದು ಡಿಸಿ ಹೇಳಿದರು.

ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 35+5 ಪರೀಕ್ಷಾ ಕೇಂದ್ರಗಳು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 35 ಪರೀಕ್ಷಾ ಕೇಂದ್ರಗಳಿದ್ದು, ಒಟ್ಟು 75 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿವೆ ಎಂದರು.

ಗೋವಾ ರಾಜ್ಯದಲ್ಲಿ 54 ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ಮಕ್ಕಳಿದ್ದು, ಕಂಟೈನ್ಮೆಂಟ್ ಏರಿಯಾದ 6 ಮಕ್ಕಳಿಗೆ ಅಲ್ಲಿ ಪ್ರತ್ಯೇಕ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಇನ್ನುಳಿದ 48 ಮಕ್ಕಳಿಗೆ ಇನ್ನೊಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಆ ಮಕ್ಕಳಿಗೆ ಜಿಲ್ಲೆಯ ಗಡಿವರೆಗೆ ಹೋಗಿ ಪ್ರಶ್ನೆ ಪತ್ರಿಕೆ ಕೊಡುವ ವ್ಯವಸ್ಥೆ ಮಾಡಿಕೊಂಡಿದ್ದು, ಪರೀಕ್ಷೆ ಮುಗಿದ ಬಳಿಕ ಅವರ ಉತ್ತರ ಪತ್ರಿಕೆಗಳನ್ನು ಗೋವಾದ ಪರೀಕ್ಷಾ ಕೇಂದ್ರಗಳಿಂದ ಮರಳಿ ಅದೇ ಗಡಿಗೆ ಬಂದು ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಸಂದರ್ಭದಲ್ಲಿ ಎರಡು ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಕೋವಿಡ್ ಟೆಸ್ಟ್ ಮಾಡಿ ಅಲ್ಲಿಗೆ ಕಳುಹಿಸಲಾಗುತ್ತಿದ್ದು, ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಅವರು ವಾಪಸ್ ತರುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವರಿಗೆ ಡಿಸಿ ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಎಲ್ಲಾ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಿ, ಕಡ್ಡಾಯವಾಗಿ ಮಾಸ್ಕ್ ಧರಸಿ ಬರುವಂತೆ ನಿರ್ದೇಶಿಸಬೇಕು. ಒಂದುವೇಳೆ ವಿದ್ಯಾರ್ಥಿಯು ಮಾಸ್ಕ್ ಧರಿಸದೇ ಬಂದಿದ್ದರೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಮಾಸ್ಕ್ ವಿತರಿಸುವ ಕಾರ್ಯವಾಗಬೇಕು ಹಾಗೂ ಪರೀಕ್ಷಾ ಕೇಂದ್ರದ ಸಿಬ್ಬಂದಿ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ನಡುವೆ ಸಮನ್ವಯ ಸಹಕಾರ ಇರಬೇಕಾಗಿದ್ದು, ಅವರಿಗೆ ಎನ್-95 ಮಾಸ್ಕ್ ವಿತರಿಸಬೇಕು. ಮಕ್ಕಳು ಮನೆಯಿಂದಲೇ ನೀರಿನ ಬಾಟಲ್‍ಗಳನ್ನು ತರುವಂತೆ ಹೇಳಬೇಕು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶೌಚಾಲಯ ವ್ಯವಸ್ಥೆ ಸ್ವಚ್ಛತೆಯಿಂದ ಕೂಡಿರಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ಈಗಾಗಲೇ 144 ಸೆಕ್ಷೆನ್ ಜಾರಿಯಾಗಿದ್ದು, ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಕ್ಕಳಿಗೆ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಹಾಗೂ ಪರೀಕ್ಷೆ ನಡೆಯುವ ಸಮಯದಲ್ಲಿ ಖಾಸಗಿ ವ್ಯಕ್ತಿಗಳು ಪರೀಕ್ಷಾ ಕೇಂದ್ರದತ್ತ ಬರದಂತೆ ಎಚ್ಚರ ವಹಿಸಲಾಗುತ್ತದೆ ಎಂದು ಎಸ್‍ಪಿ ಅವರು ಸಚಿವರಿಗೆ ಮಾಹಿತಿ ನೀಡಿದರು.

See also  ಕಬಡ್ಡಿಯನ್ನು ಉಳಿಸಿ ಬೆಳೆಸಬೇಕು: ಕೆ.ಎಸ್.ಪುಟ್ಟಣ್ಣಯ್ಯ

ಈ ವಿಡಿಯೋ ಸಂವಾದದಲ್ಲಿ ಜಿ.ಪಂ.ಸಿಇಒ ಎಂ.ರೋಷನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ, ಶಿರಸಿ ಡಿಡಿಪಿಐ ದಿವಾಕರ ಶೆಟ್ಟಿ, ಕಾರವಾರ ಡಿಡಿಪಿಐ ಹರೀಶ ಗಾಂವಕರ, ಬಿಇಒ ಶಾಂತೇಶ ನಾಯಕ, ಅಂಕೋಲಾ ಬಿಇಒ ಶ್ಯಾಮಲಾ ನಾಯಕ, ಕುಮಟಾ ಬಿಇಒ ಆರ್.ಎಲ್.ಭಟ್, ಹೊನ್ನಾವರ ಬಿಇಒ ಎಸ್.ಎಂ.ಹೆಗಡೆ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು