News Kannada
Saturday, October 08 2022

ಕರ್ನಾಟಕ

50 ಲಕ್ಷ ಮೀನು ಮರಿಗಳನ್ನು ಉತ್ಪಾದಿಸಿ: ಸಚಿವ ಶ್ರೀನಿವಾಸ ಪೂಜಾರಿ ಸಲಹೆ - 1 min read

Photo Credit :

50 ಲಕ್ಷ ಮೀನು ಮರಿಗಳನ್ನು ಉತ್ಪಾದಿಸಿ: ಸಚಿವ ಶ್ರೀನಿವಾಸ ಪೂಜಾರಿ ಸಲಹೆ

ಮಡಿಕೇರಿ: ಮುಂಬರುವ ದಿನಗಳಲ್ಲಿ 50 ಲಕ್ಷ ಮೀನು ಮರಿಗಳ ಉತ್ಪಾದನಾ ಸಾಮರ್ಥ್ಯ ವೃದ್ಧಿಸಿ ಜಿಲ್ಲೆಯ ಅವಶ್ಯ ಬೇಡಿಕೆಯನ್ನು ಜಿಲ್ಲೆಯಲ್ಲಿಯೇ ಉತ್ಪಾದಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂದು ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ತಂಡವಾಗಿ ಕಾರ್ಯ ನಿರ್ವಹಿಸಿದಲ್ಲಿ ಇಲಾಖೆಯನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಸಾಧ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಮೀನುಗಾರಿಕೆ ಮತ್ತು ಮುಜರಾಯಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಕೃಷಿ ಇಲಾಖೆಯಲ್ಲಿ ಹೊಸ ಸಂಸ್ಕರಣೆಗಳನ್ನು ನಡೆಸುವಂತೆ, ಮೀನುಗಾರಿಕಾ ಇಲಾಖೆಯಲ್ಲೂ ಅಭಿವೃದ್ಧಿ ಪರವಾದ ನೂತನ ಪ್ರಯತ್ನಗಳನ್ನು ನಡೆಸಬೇಕು. ಕೊಡಗು ಜಿಲ್ಲೆ ಮತ್ಸ್ಯ ಕೃಷಿ ನಡೆಸಲು ಅತ್ಯಂತ ಅನುಕೂಲಕರ ಅವಕಾಶಗಳನ್ನು ಹೊಂದಿದೆ. ಕಾಫಿ ಬೆಳೆಗಾರರು ತಮ್ಮ ಖಾಸಗಿ ಕೆರೆಯಲ್ಲೂ ಸಹ ಮೀನುಗಳ ಸಾಕಾಣಿಗೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಮೀನುಗಾರಿಕೆಗೆ ಕೊಡಗು ಜಿಲ್ಲೆಯಲ್ಲಿ ವಿಫುಲ ಅವಕಾಶಗಳಿವೆ ಎಂದು ಅವರು ತಿಳಿಸಿದರು.

ಹಾರಂಗಿ ಮೀನುಮರಿ ಪಾಲನ ಕೇಂದ್ರದಲ್ಲಿ ಉತ್ತಮ ತಳಿಯ ಮತ್ತು ಬಲಿತ ಮೀನು ಮರಿಗಳನ್ನು ರೈತರಿಗೆ ನೀಡುವ ಕಾರ್ಯವಾಗಬೇಕು. ಮೀನುಗಾರಿಕಾ ಇಲಾಖೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಮತ್ತಷ್ಟು ಉತ್ಸುಕತೆಯಿಂದ ಕಾರ್ಯ ನಿರ್ವಹಿಸಬೇಕು. ಮೀನುಗಾರಿಕೆ ಇಲಾಖೆಯಲ್ಲೂ ಸಹ ಮೀನು ಮರಿಗಳ ತಳಿ ಸಂವರ್ಧನೆ ಹಾಗೂ ಮುಂತಾದ ಅಭಿವೃದ್ಧಿ ಪರ ವಿಚಾರಗಳ ಹೊಸ ಪ್ರತತ್ನಗಳನ್ನು ಕಾರ್ಯರೂಪಕ್ಕೆ ತರುವಂತೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

      ಇದರೊಂದಿಗೆ ಮೀನು ಬೆಳೆಸುವ ರೈತರ ಹೆಸರು, ಮೀನು ಬೆಳೆಸುವ ಪ್ರಮಾಣ ಮತ್ತಿತತರ  ಮಾಹಿತಿಯನ್ನು ಪಡೆದುಕೊಳ್ಳಬೇಕು. ಕೃಷಿಕರಿಗೆ ನೀಡುವಂತೆಯೇ ಮೀನು ಕೃಷಿ ಮಾಡುವವರಿಗೆ  ಕಿಸಾನ್ ಕಾರ್ಡ್ ಗಳನ್ನು ನೀಡುವ ಕಾರ್ಯವಾಗಬೇಕು. ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂ. ವರೆಗೆ ಮೀನು ಕೃಷಿಕರಿಗೂ ಸಹ ಸಾಲ ಸೌಲಭ್ಯ ನೀಡುವ ವ್ಯವಸ್ಥೆಯಾಗಬೇಕು ಎಂದು ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಸೂಚಿಸಿದರು.

See also  ಸರ್ಕಾರಿ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ: ಡಿಸಿಎಂ ಗೋವಿಂದ ಕಾರಜೋಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು